ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Team Udayavani, Nov 11, 2020, 4:38 PM IST
ಹೊಸದಿಲ್ಲಿ: ಅತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣದಡಿ ಅರ್ನಾಬ್ ಮತ್ತು ಇತರ ಇಬ್ಬರನ್ನು ಅಲಿಬಾಗ್ ಪೊಲೀಸರು ನ.4 ರಂದು ಬಂಧಿಸಿದ್ದರು. ಬಂಧಿತರು ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ನ್ಯಾ. ಡಿ.ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ಸುಪ್ರೀಂ ಕೋರ್ಟ್ ನ ರಜಾಕಾಲದ ಪೀಠ ವಿಚಾರಣೆ ನಡೆಸಿತು. ಅರ್ನಾಬ್ ಪರ ಖ್ಯಾತ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದರು.
ಇದನ್ನೂ ಓದಿ:ಮುಂಬೈ ಟೆರರ್ ಅಟ್ಯಾಕ್ : ಹನ್ನೊಂದು ಉಗ್ರರು ತನ್ನ ದೇಶದವರು ಎಂದು ಒಪ್ಪಿಕೊಂಡ ಪಾಕಿಸ್ತಾನ!
ರಾಜ್ಯ ಸರ್ಕಾರವು ಸಿದ್ಧಾಂತ ಮತ್ತು ಭಿನ್ನಾಭಿಪ್ರಾಯದ ಆಧಾರದ ಮೇಲೆ ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಿರುವುದು ತೀರಾ ದುರದೃಷ್ಟಕರ ಎಂದ ಪೀಠ ಮಹಾರಾಷ್ಟ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ಅರ್ಜಿದಾರರ ಸಿದ್ಧಾಂತ ಏನೇ ಇರಲಿ. ರಾಜ್ಯ ಸರ್ಕಾರಗಳು ಹೀಗೆ ಓರ್ವ ವ್ಯಕ್ತಿಯನ್ನು ಗುರಿಯಾಗಿಸುವುದು ಸರಿಯಲ್ಲ. ಹೀಗೆ ಗುರಿಯಾಗಿಸಿದರೆ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಸುಪ್ರೀಂ ಕೋರ್ಟ್ ಇದೆ ಎನ್ನುವುದನ್ನು ಅರಿಯಬೇಕು’ ಎಂದು ಮಹಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.