ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ತಪ್ಪಿಸಿ

ಬಗರ್‌ ಹುಕುಂ ಸಾಗುವಳಿ ಮಾಡಿಕೊಂಡಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ: ಆರೋಪ

Team Udayavani, Nov 11, 2020, 6:56 PM IST

ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ತಪ್ಪಿಸಿ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ತಿಪಟೂರು ತಾಲೂಕುಗಳ ಅರಣ್ಯ ಇಲಾಖೆಯಅಧಿಕಾರಿಗಳು ಕಾಲ್ಪನಿಕ ಅರಣ್ಯ(ಡಿಮ್ಡ್ ಫಾರೆಸ್ಟ್‌) ಹೆಸರಿನಲ್ಲಿ 30-40 ವರ್ಷಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯ ಉಪಾಧ್ಯಕ್ಷ ಎಚ್‌. ಆರ್‌.ಭೋಜರಾಜು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕನಾಯ ಕನಹಳ್ಳಿ ತಾಲೂಕು ಶೆಟ್ಟಿಕೆರೆ ಹೋಬಳಿ ಸೊಂಡೇನಹಳ್ಳಿ ಸರ್ವೆ ನಂ 37 ಮತ್ತು 41 ಹಾಗೂಲಕ್ಷ್ಮೀ ನಹಳ್ಳಿ ಸರ್ವೆ ನಂಬರ್‌ 55ರಲ್ಲಿ ಹಲವು ರೈತ ಕುಟುಂಬಗಳು ಕಳೆದ 35 ರಿಂದ 40 ವರ್ಷಗಳ ಕಾಲದಿಂದಲೂ ಬಗರ್‌ ಹುಕುಂ ಸಾಗುವಳಿ ಮಾಡುತ್ತಾ ಬಂದಿದ್ದು, ಉಳುಮೆ ಮಾಡಿದ ರೈತರಲ್ಲಿ ಕೆಲವರಿಗೆ ಸಾಗುವಳಿ ಪತ್ರ ದೊರೆತಿದ್ದು, ಅನುಭವದಲ್ಲಿರುವ ರೈತರ ಹೆಸರಿಗೆ ಖಾತೆ, ಪಹಣಿಆಗಿದೆ.ಇನ್ನೂಕೆಲವರಿಗೆ ಮಂಜೂರಾತಿಆಗಿರುವುದು ಬಿಟ್ಟರೆ ಬೇರೆ ದಾಖಲೆಗಳಿಲ್ಲ ಎಂದರು.

ನ್ಯಾಯ ದೊರಕಿಸಿಕೊಡುವಂತೆ ಮನವಿ: ಸರಕಾರದಿಂದ ಮಂಜೂರಾಗಿರುವ ಜಾಗದಲ್ಲಿ ಈಗಾಗಲೇ ಹಲವಾರು ರೈತರು ತೆಂಗು, ಅಡಕೆ, ಮಾವು, ಇನ್ನಿತರ ಬಹುವಾರ್ಷಿಕ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದು, ಕೆಲವರು ರಾಗಿ ಮತ್ತಿತರ ಆಹಾರ ಧಾನ್ಯಗಳನ್ನು ಬೆಳೆಯುತ್ತಿದ್ದಾರೆ.

ಇತ್ತೀಚೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಡಿಮ್ಡ್ ಫಾರೆಸ್ಟ್‌ ಹೆಸರಿನಲ್ಲಿ ಏಕಾಏಕಿ ರೈತರ ಜಮೀನಿಗೆ ನುಗ್ಗಿ ಅವರು ಬೆಳೆಗಳನ್ನು ಕಿತ್ತು ಹಾಕಿ ತೊಂದರೆ ನೀಡುತ್ತಿದ್ದು, ಈ ಬಗ್ಗೆ ಅರಣ್ಯ ಇಲಾಖೆ, ಕಂದಾಯ ಇಲಾಖೆಯ ಮಂತ್ರಿಗಳಿಗೆ, ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಹಾಗಾಗಿ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ, ರೈತರಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.

ಉಗ್ರ ಹೋರಾಟದ ಎಚ್ಚರಿಕೆ: ಕಾಲ್ಪನಿಕ ಅರಣ್ಯ ಎಂಬುದು ತಪ್ಪು ಕಲ್ಪನೆ ಎಂದು ಈಗಾಗಲೇ ಸುಪ್ರೀಂಕೋರ್ಟ್‌ 2016ರಲ್ಲಿ ಕೇಸ್‌ನಂ 54476ರಲ್ಲಿ ತೀರ್ಪು  ನೀಡಿದೆ. ಅಲ್ಲದೆ 2019ರ ಜೂ.12 ರಂದು ಕರ್ನಾಟಕ ಹೈಕೋರ್ಟ್‌ ಸಹ ಇದೇ ರೀತಿ ಅಭಿಪ್ರಾಯಪಟ್ಟಿದೆ. ಆದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು

ಅರಣ್ಯ ಕಾಯ್ದೆ ಕಲಂ 04 ರ ಪ್ರಕಾರ ಬಗರ್‌ ಹುಕ್ಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಜೈಲಿಗೆ ಕಳುಹಿಸುವ ಬೆದರಿಕೆ ಹಾಕಿ, ರೈತರು ಬೆಳೆದ ರಾಗಿ ಇನ್ನಿತರ ಫ‌ಸಲುಗಳನ್ನು ನಾಶ ಮಾಡಿ, ತೆಂಗಿನ ಗಿಡ ಗಳನ್ನುಕಿತ್ತು ಹಾಕಿ ದೌರ್ಜನ್ಯ ಎಸಗುತ್ತಿದ್ದಾರೆ. ಕೆಡಿಪಿ ಸಭೆಯೊಂದರಲ್ಲಿ ಜಿಲ್ಲಾಧಿಕಾರಿಗಳೇ ಅರಣ್ಯ ಅಧಿಕಾರಿಗಳು ಬಗರ್‌ ಹುಕ್ಕುಂ ಸಾಗುವಳಿದಾರರಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡ ಸಹ, ಮೇಲಧಿಕಾರಿಗಳ ಆದೇಶಕ್ಕೂ ಬೆಲೆ ನೀಡದೆ ದುಂಡಾ ವರ್ತನೆ ಮಾಡುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿ ಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ತಿಳಿಸಿದರು.

75 ಸಾವಿರ ಅರ್ಜಿ ತಿರಸ್ಕೃತ: ರೈತ ಮುಖಂಡ ನಂಜುಂಡಪ್ಪ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿರುವ ಬಗರ್‌ ಹುಕ್ಕುಂ ಸಾಗುವಳಿದಾರರು ಮರು ಮಂಜೂರಾತಿಗಾಗಿ ಸಮಿತಿಯ ಮುಂದೆ ಸಲ್ಲಿಸಿದ್ದ ಸುಮಾರು 75 ಸಾವಿರ ಅರ್ಜಿಗಳನ್ನು, ಅರ್ಜಿಯಲ್ಲಿದ್ದ ಸಣ್ಣ ಪುಟ್ಟ ಲೋಪದೋಷಗಳನ್ನೇ ದೊಡ್ಡದು ಮಾಡಿ ತಿರಸ್ಕರಿಸಲಾಗಿದೆ. ಆದ್ದರಿಂದ ಮತ್ತೂಮ್ಮೆ ರೈತರ 57ಫಾರಂ ಸಲ್ಲಿಸಲು ಅವಕಾಶ ಮಾಡಿಕೊಡಬೇಕು, ಕಾಲ್ಪನಿಕ ಅರಣ್ಯದ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳವನ್ನು ತಪ್ಪಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ದೈಹಿಕ ಹಲ್ಲೆ: ರೈತರು ಹತ್ತಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಭೂಮಿಅರಣ್ಯ ಇಲಾಖೆಗೆ ಸೇರಿದ್ದು ಎಂದು ಹೇಳುವ ಅರಣ್ಯ ಇಲಾಖೆಯ ಅಧಿಕಾರಿಗಳಿಂದ, ಈ ಸಂಬಂಧ ದಾಖಲೆ ನೀಡುವಂತೆ ಆರ್‌ಟಿಐ ಅಡಿಯಲ್ಲಿ ಅರ್ಜಿ ನೀಡಿ 9ತಿಂಗಳೇ ಕಳೆದರೂ ಇದುವರೆಗೂ ಮಾಹಿತಿ ನೀಡಿಲ್ಲ. ಈ ಸಂಬಂಧ ವಿಚಾರಿಸಿದರೆ, ಮೇಲ್ಮನವಿ ಹೋಗು ವಂತೆ ದಬಾಯಿಸಿ ಕಳುಹಿಸುತ್ತಾರೆ.

ಕೋವಿಡ್‌ ಇರುವ ಹಿನ್ನೆಲೆಯಲ್ಲಿ ಮೇಲ್ಮನವಿ ಹೋಗಲು ಸಾಧ್ಯವಾಗುತ್ತಿಲ್ಲ. ಇದನ್ನೇ ನೆಪ ಮಾಡಿಕೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಹೆಂಗಸರು, ಮಕ್ಕಳು ಎನ್ನುವುದನ್ನು ನೋಡದೆ, ದೈಹಿಕ ಹಲ್ಲೆ ನಡೆಸಿ, ತೊಂದರೆ ನೀಡುತಿದ್ದಾರೆ ಎಂದು ನಂಜುಂಡಪ್ಪ ದೂರಿದರು. ರೈತ ಸಂಘದ ಮುಖಂಡರಾದ ಇಂದ್ರಯ್ಯ, ಟಿ.ಸಿ.ರಮೇಶ್‌, ಶಿವಣ್ಣ ಲಕ್ಕೇನಹಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.