ಧರ್ಮಸ್ಥಳ ಪ್ರಾಚ್ಯವಿದ್ಯಾ ಸಂಸ್ಥೆಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಭೇಟಿ
Team Udayavani, Nov 11, 2020, 9:59 PM IST
ಧರ್ಮಸ್ಥಳ: ಮಾಹಿತಿ ಪಡೆಯುತ್ತಿರುವ ಸಚಿವ ಸುರೇಶ್ ಕುಮಾರ್ ದಂಪತಿ.
ಬೆಳ್ತಂಗಡಿ: ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಡೆಸಲ್ಪಡುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನದ ಪ್ರಾಚ್ಯ ವಿದ್ಯಾ ಸಂಸ್ಥೆಗೆ ತೆರಳಿದರು.
ಪ್ರಾಚ್ಯ ವಿದ್ಯಾಸಂಸ್ಥೆಯ ನಿರ್ದೇಶಕ ಡಾ| ವಿಘ್ನರಾಜ್ ಹಸ್ತಪ್ರತಿ ಸಂಗ್ರಹ, ಸಂರಕ್ಷಣೆ, ಸಂಪಾದನೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಹಸ್ತಪ್ರತಿ ಸಂಗ್ರಹಾಲಯಕ್ಕೆ ಪ್ರಥಮ ಬಾರಿಗೆ ಭೇಟಿ ನೀಡುವ ಅವಕಾಶ ದೊರಕಿತು. ತಾಳೆಗರಿ ಗ್ರಂಥಗಳ ಕುರಿತು ಈವರೆಗೆ ಕೇಳಿದ್ದು, ಮೊದಲ ಬಾರಿಗೆ ನೋಡಿದ ಅನುಭವ ನನ್ನದು. ರಾಮಾಯಣ, ಮಹಾ ಭಾರತ, ಭಾಗವತ, ಬಸವ ಪುರಾಣ ಇತ್ಯಾದಿಗಳೆಲ್ಲವೂ ಈ ತಾಳೆಗರಿ ಗ್ರಂಥಗಳ ಮೂಲಕ ಪ್ರಕಟನೆ ಆಗುತ್ತಿದ್ದ ಕಾಲ ನೆನಪಿಗೆ ಬಂತು. ಇಂತಹ ಅಮೂಲ್ಯ ನಿಧಿಗಳನ್ನು ಸಂಗ್ರಹಿಸಿ ಜತನವಾಗಿ ಕಾಪಾಡುವ ಕೆಲಸ ಈ ಪ್ರಾಚ್ಯ ವಿದ್ಯಾ ಸಂಸ್ಥೆಯಿಂದ ಆಗುತ್ತಿರುವುದಕ್ಕೆ ಸುರೇಶ್ ಕುಮಾರ್ ಹರ್ಷ ವ್ಯಕ್ತಪಡಿಸಿದರು.
ದೇಗುಲ ಕಚೇರಿಯ ಮುಖ್ಯಸ್ಥ ದೀಕ್ಷಿತ್ ಹಾಗೂ ಪ್ರತಿಷ್ಠಾನದ ಸಹಾಯಕ ಸಂಶೋಧಕರಾದ ಪವನ್‌ಕುಮಾರ್, ಮಂಜುಳಾ, ಮಮತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.