ಶತಕ ದಾಟಿದ ವಿವಿ ಸಾಗರ ನೀರಿನ ಮಟ್ಟ
ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಂತಸ
Team Udayavani, Nov 12, 2020, 5:25 PM IST
ಹಿರಿಯೂರು: ತಾಲೂಕಿನ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿದ್ದು, ಬರಗಾಲದಿಂದಬೇಸತ್ತಿದ್ದ ಅಚ್ಚುಕಟ್ಟು ಪ್ರದೇಶದ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.
ವಾಣಿವಿಲಾಸ ಜಲಾಶಯದಲ್ಲಿ ನೀರು ಸಂಗ್ರಹ ಕಾರ್ಯ ಸುಮಾರು1911ರಿಂದಲೇ ಆರಂಭವಾಗಿದೆ.ಜಲಾಶಯ ನಿರ್ಮಾಣಗೊಂಡಮೊದಲ ವರ್ಷವೇ 109.66 ಅಡಿ ನೀರು ಸಂಗ್ರಹವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಸುಮಾರು 57 ಬಾರಿ ಜಲಾಶಯದ ನೀರಿನ ಮಟ್ಟ 100 ಅಡಿದಾಟಿದೆ ಎಂದು ಹೇಳಲಾಗಿದೆ. ಕಳೆದ ವರ್ಷ ಇದೇ ವೇಳೆಯಲ್ಲಿ ನೀರಿನಮಟ್ಟ 93.40 ಅಡಿ ಇತ್ತು. ಪ್ರಸಕ್ತ ವರ್ಷ 102 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 130 ಅಡಿಇದ್ದು, ಇದುವರೆಗೆ ಒಮ್ಮೆ ಮಾತ್ರ 1933ರಲ್ಲಿ ಭರ್ತಿಯಾಗಿದೆ. ಈವರೆಗೆ11 ಬಾರಿ 120 ಅಡಿಗಿಂತ ಹೆಚ್ಚು ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.
ಪ್ರಸಕ್ತ ವರ್ಷ ಮಳೆ ನೀರಿನ ಜೊತೆಗೆ ಭದ್ರಾ ನೀರು ಹರಿದು ಬರುತ್ತಿರುವ ಕಾರಣ ನಿಧಾನವಾಗಿ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಏರುತ್ತಿದೆ. ಶಾಂತಿಪುರ ಮತ್ತು ಬೆಟ್ಟದ ತಾವರೆಕೆರೆ ಬಳಿ ಲಿಫ್ಟ್‌ಗಳಲ್ಲಿ ಎರಡು ಪಂಪ್ ಗಳನ್ನು ಚಾಲೂ ಮಾಡಿ, ಮಾರ್ಚ್ ವರೆಗೆ ಹರಿಸಿದಲ್ಲಿ ನೀರಿನ ಮಟ್ಟ 115 ಅಡಿ ತಲುಪುವ ಸಾಧ್ಯತೆ ಇದೆ. ಇದರಿಂದಾಗಿ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಮತ್ತೆ ಚಿಗುರೊಡೆದಿದೆ. ಅಚ್ಚುಕಟ್ಟು ಪ್ರದೇಶದ ರೈತರು ತಮ್ಮಕೃಷಿ ಭೂಮಿಯಲ್ಲಿ ಮತ್ತೆ ಅಡಿಕೆ, ತೆಂಗು ಸಸಿಗಳನ್ನು ನೆಡುವ ಮೂಲಕ ತೋಟಗಾರಿಕೆ ಬೆಳೆ ಬೆಳೆಯಲು ಉತ್ಸುಕರಾಗಿದ್ದಾರೆ.
ಕಳೆದ ವರ್ಷ ಡೆಡ್ ಸ್ಟೋರೇಜ್‌ಗೂ ಇಳಿದಿತ್ತು : ಪ್ರಥಮ ಬಾರಿಗೆ ಜಲಾಶಯದ ನೀರಿನ ಮಟ್ಟ 2019ರ ಜೂನ್ ತಿಂಗಳಲ್ಲಿ ಡೆಡ್ ಸ್ಟೋರೇಜ್‌ಗೆ ಅಂದರೆ 60 ಅಡಿ ಆಳಕ್ಕೆ ಇಳಿದಿತ್ತು. ನಂತರ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಹಿಂಗಾರು ಮಳೆ ಉತ್ತಮವಾಗಿ ಆಗಿದ್ದರಿಂದ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ಪರ್ಯಾಯ ಮಾರ್ಗ ನಿರ್ಮಿಸಿ ನೀರು ಹರಿಸಿದ್ದರಿಂದ ಕಳೆದ ಬಾರಿ ಸಹ ನೀರಿನ ಮಟ್ಟ 102 ಅಡಿ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.