ಅಕ್ಕಿ, ಬೇಳೆ ಕಳಪೆಯಾಗಿದ್ದರೆ ತಿರಸ್ಕರಿಸಿ


Team Udayavani, Nov 12, 2020, 8:01 PM IST

ಅಕ್ಕಿ, ಬೇಳೆ ಕಳಪೆಯಾಗಿದ್ದರೆ ತಿರಸ್ಕರಿಸಿ

ಮೈಸೂರು: ಶಾಲೆಗಳಿಗೆ ಕಳಪೆ ಆಹಾರ ಪದಾರ್ಥಗಳು ಪೂರೈಕೆಯಾಗುತ್ತಿರುವುದರ ಬಗ್ಗೆ ದೂರುಗಳು ಬಂದಿದ್ದು, ಮುಂದಿನ ದಿನಗಳಲ್ಲಿ ಇದನ್ನು ತಡೆಗಟ್ಟುವಂತೆ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕಳಪೆ ಅಕ್ಕಿ, ಬೇಳೆ ವಿತರಿಸುತ್ತಿದ್ದಾರೆ ಎಂಬ ದೂರುಗಳು ಬರುತ್ತಿವೆ. ಮೊದಲು ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷಿಸಿ ನಂತರ ಶಾಲೆಗಳಿಗೆ ನೀಡಬೇಕು. ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪದೋಷವಿದ್ದರೆ ಮುಖ್ಯ ಶಿಕ್ಷಕರುಗಳಿಗೆ ಆಹಾರ ಪದಾರ್ಥಗಳನ್ನು ತಿರಸ್ಕರಿಸುವಂತೆ ಮಾಹಿತಿ ನೀಡಿ ಎಂದು ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಜಿಪಂ ಸಿಇಒ ಡಿ.ಭಾರತಿ ಮಾತನಾಡಿ, ಶಾಲೆಗಳಿಗೆ ಗುಣಮಟ್ಟದ ಆಹಾರ ಪದಾರ್ಥಗಳನ್ನುಪಡೆದುಕೊಂಡು ಮಕ್ಕಳಿಗೆ ವಿತರಣೆ ಮಾಡುವಾಗ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ನೇತೃತ್ವದಲ್ಲಿ ವಿತರಿಸಿ. ಯಾವುದೇ ಕಾರಣಕ್ಕೂ ಮಕ್ಕಳ ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬೇಡಿ ಎಂದು ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಹಾರ ಪದಾರ್ಥಗಳ ವಿತರಣೆಗೆ ಆದೇಶ: ಅಕ್ಷರ ದಾಸೋಹದಲ್ಲಿ ಕೋವಿಡ್‌ ಹಿನ್ನೆಲೆ ಮೇ ವರಗೆ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗಿದೆ. ಜೂನ್‌ನಿಂದ ಅಕ್ಟೋಬರ್‌ವರೆಗೆ ಆಹಾರಪದಾರ್ಥಗಳನ್ನು ಎರಡು ಹಂತದಲ್ಲಿ ವಿತರಿಸುವಂತೆ ಸರ್ಕಾರ ಆದೇಶಿಸಿದೆ. ಈಗಾಗಲೇ ನಮ್ಮಲ್ಲಿ ಅಕ್ಕಿ ಸ್ಟಾಕ್‌ ಇದ್ದು, ಬೇಳೆ ಬಂದ ಕೂಡಲೇ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಆರ್‌. ಶಿವಣ್ಣ ಸಭೆಗೆ ತಿಳಿಸಿದರು.

ಎಸ್ಸೆಸ್ಸೆಲ್ಸಿ ಫ‌ಲಿತಾಂಶ: ಸರ್ಕಾರಿ ಶಾಲಾ ಮಕ್ಕಳಿಗೆ ಆನ್‌ಲೈನ್‌ ತರಗತಿ ವ್ಯವಸ್ಥೆ ಇಲ್ಲದ ಕಾರಣ ಮನೆಯಲ್ಲೇ ಪೋಷಕರಿಂದ ಕಲಿಕೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶದ ಬಗ್ಗೆ ಚರ್ಚೆ ನಡೆಯಿತು. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಫ‌ಲಿತಾಂಶಕ್ಕೆ ಒತ್ತು ನೀಡಿ. ಪ್ರತಿ ತಿಂಗಳು ತಾಲೂಕಿನ ಬಿಇಒಗಳ ಜೊತೆ ಸಭೆ ನಡೆಸಿ ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸಿ ಎಂದು ಅಧಿಕಾರಿಗಳಿಗೆ ಶಿಕ್ಷಣ ಮತ್ತು ಆರೋಗ್ಯ ಅಧ್ಯಕ್ಷ ಮಂಜುನಾಥ್‌ ಸೂಚನೆ ನೀಡಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಗೌರಮ್ಮ, ಸ್ಥಾಯಿ ಸಮಿತಿ ಸದಸ್ಯ ಎನ್‌. ಮಂಜುನಾಥ್‌, ಎ.ಎಂ.ಗುರುಸ್ವಾಮಿ ಹಾಗೂ ಜಿಪಂ ಯೋಜನಾಧಿಕಾರಿ ಎಸ್‌.ಧನುಷ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ನ.14ರಿಂದ ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನ :  ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗದಕಾರಣ 6ರಿಂದ14 ವರ್ಷದ ಶಾಲಾ ಮಕ್ಕಳಿಗೆಕಲಿಕೆ ಸಂಬಂಧಿಸಿದ ವಿಷಯಗಳನ್ನು ಮುಟ್ಟಿಸಲು ಇದೇ ನ.14ರಿಂದ ಜ.24ರವರೆಗೆ10 ವಾರಗಳಕಾಲ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನವನ್ನುಕೈಗೊಳ್ಳಲು ಪ್ರಧಾನಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಜತೆಗೆ ಪ್ರೌಢ ಶಾಲೆಯ ಒಂದು ಹೆಣ್ಣು, ಒಂದು ಗಂಡು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಶಿಕ್ಷಕರನ್ನೊಳಗೊಂಡಕಾರ್ಯಪಡೆ ರಚಿಸಲು ನಿರ್ದೇಶನ ನೀಡಿದ್ದಾರೆ ಎಂದು ಜಿಪಂ ಉಪಕಾರ್ಯದರ್ಶಿ ಪ್ರೇಮ್‌ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.