ನಿಶ್ಚಯವಾಗದ ಸಿಎಂ ಬಿಎಸ್‌ವೈ ದೆಹಲಿ ಪ್ರವಾಸ: ದೀಪಾವಳಿ ನಂತರ ‘ಲಾಬಿ’ ಡೆಲ್ಲಿಗೆ ಶಿಫ್ಟ್?
Team Udayavani, Nov 13, 2020, 11:20 AM IST
ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಿರೀಕ್ಷೆಯಲ್ಲಿರುವ ಸಚಿವಾಕಾಂಕ್ಷಿಗಳಿಂದ ಪ್ರತ್ಯೇಕ ಸಭೆಗಳು ಗುರುವಾರವೂ ಮುಂದುವರಿದಿದ್ದು, ಕೆಲವರು ದೀಪಾವಳಿ ನಂತರ ದೆಹಲಿಗೆ ತೆರಳಿ ಲಾಬಿ ನಡೆಸುವ ಪ್ರಯತ್ನದಲ್ಲಿದ್ದಾರೆ.
ಇನ್ನೊಂದೆಡೆ, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನಕ್ಕೆ ಮನವಿ ಸಲ್ಲಿಸುವ ನೆಪದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕರು ನಿಯೋಗದ ಜತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು. ಪ್ರಮುಖವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆ ಭಾರಿ ಚರ್ಚೆಗೆ ಕಾರಣವಾಗಿದೆ.
ಶಾಸಕರ ಸಭೆ: ಈ ಮಧ್ಯೆ, ಎರಡನೇ ದಿನವೂ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಗುರುವಾರವೂ ಕೆಲ ಶಾಸಕರು ಸೇರಿ ಸಭೆ ನಡೆಸಿದ್ದಾರೆ. ಹತ್ತಕ್ಕೂ ಹೆಚ್ಚು ಶಾಸಕರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ:ಬಳ್ಳಾರಿಯಿಂದ ಬಂದು ‘ಹಾಯ್ ಬೆಂಗಳೂರು’ ಎಂದಾತ;ಕಪ್ಪು ಸುಂದರಿಯ ರೂವಾರಿ ಅಕ್ಷರ ಲೋಕದ ಮಾಂತ್ರಿಕ
ಶಾಸಕರಾದ ರಾಜೂಗೌಡ, ಪ್ರೀತಂಗೌಡ, ಬೆಳ್ಳಿ ಪ್ರಕಾಶ್ ಇತರರು ಸಭೆಯಲ್ಲಿದ್ದರು ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಕೆ.ಪೂರ್ಣಿಮಾ ಶ್ರೀನಿವಾಸ್, ಬೆಳ್ಳಿ ಪ್ರಕಾಶ್ ಇತರರು ಭಾಗವಹಿಸಿದ್ದರು.
ನಿಗದಿಯಾಗದ ಭೇಟಿ: ಎರಡು- ಮೂರು ದಿನದಲ್ಲಿ ವರಿಷ್ಠರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಹೇಳಿದ್ದರು. ಆದರೆ ವರಿಷ್ಠರಿಂದ ಪ್ರತಿಕ್ರಿಯೆ ಬಾರದಿರುವುದು ಸಚಿವಾ ಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ. ಹಾಗಾಗಿ ನಿರಂತರವಾಗಿ ಪ್ರತ್ಯೇಕ ಸಭೆಗಳನ್ನು ನಡೆಸುವ ಮೂಲಕ ಸಂಪುಟ ಸರ್ಜರಿಗೆ ಒತ್ತಡ ಹೇರಲು ಮುಂದಾದಂತಿದೆ.
ಇನ್ನೂ ಕೆಲ ಆಕಾಂಕ್ಷಿಗಳು ದೀಪಾವಳಿ ಬಳಿಕ ದೆಹಲಿಗೆ ತೆರಳಿ ಸ್ಥಾನಮಾನಕ್ಕಾಗಿ ಲಾಬಿ ನಡೆಸಲು ಚಿಂತಿಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ದಿನ ಕಳೆದಂತೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ವಿಳಂಬವಾದಷ್ಟು ಕಗ್ಗಂಟಾಗುವ ಲಕ್ಷಣ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.