ಉದ್ಯಾನವನದ ಜಾಗ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ! ಪಾಲಿಕೆಯಿಂದ ಕಾಮಗಾರಿಗೆ ತಡೆ
Team Udayavani, Nov 13, 2020, 11:22 AM IST
ಹುಬ್ಬಳ್ಳಿ: ನವೀನ್ ಪಾರ್ಕ್‌ನ ಪಾಲಿಕೆ ಉದ್ಯಾನವನ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗುತ್ತಿದ್ದ ಕಟ್ಟಡದ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಸಂಬಂಧಿಸಿದವರಿಗೆ ನೊಟೀಸ್ ನೀಡಿಲಾಗಿದೆ.
ನವೀನ್ ಪಾರ್ಕ್‌ನ ಪಾಲಿಕೆ ಒಡೆತನದ ಉದ್ಯಾನವನದ ಸುಮಾರು 22 ಗುಂಟೆ ಜಾಗವನ್ನು ಅತಿಕ್ರಮಣ ಮಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಕಾಲಂಗಳನ್ನು ನಿರ್ಮಿಸಲಾಗಿತ್ತು. ಕಾನೂನು ಬಾಹಿರವಾಗಿ ನಡೆಯುತ್ತಿರುವ ಕಾಮಗಾರಿಯನ್ನು ಪ್ರಶ್ನಿಸಿ ಸ್ಥಳೀಯರು ಪಾಲಿಕೆಗೆ ದೂರು ನೀಡಿದ್ದು, ದೂರು ಬರುತ್ತಿದ್ದಂತೆ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಅವರು ವಾಸ್ತವಾಂಶ ನೀಡುವಂತೆ ವಲಯ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದರು. ಮೇಲ್ನೋಟಕ್ಕೆ ಉದ್ಯಾನದ ಜಾಗ ಒತ್ತುವರಿ
ಮಾಡಿಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.
ಉದ್ಯಾನ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಕಾಲಂಗಳನ್ನು ಹಾಕಲಾಗಿದೆ. ಕಟ್ಟಡ ನಿರ್ಮಾಣ ಮಾಡಿ ಕ್ಲಬ್ ಹಾಗೂ ಹೋಟೆಲ್ ಮಾಡುವ ಹುನ್ನಾರವಿತ್ತು ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ. ಸಾರ್ವಜನಿಕ ಆಸ್ತಿ ಅತಿಕ್ರಮಣ
ಮಾಡಿ ಕ್ಲಬ್ ನಿರ್ಮಾಣ ಮಾಡುವುದರ ಹಿಂದೆ ಕೆಲವರ ಸ್ವಹಿತಾಸಕ್ತಿಯಿದೆ. ಸ್ಥಳೀಯ ಸಂಘವೊಂದರ ನೇತೃತ್ವದಲ್ಲಿ ಈ ಅಕ್ರಮ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ಸುಮಾರು 2 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ:ವ್ಯಕ್ತಿಯನ್ನು ಕಟ್ಟಿಹಾಕಿ 20 ಕುರಿ ದೋಚಿದ ಕಳ್ಳರು! ತನಿಖೆಗಾಗಿ ಬಂದ ಪೊಲೀಸ್ ವಾಹನ ಅಪಘಾತ
ನಗರದ ಪ್ರತಿಷ್ಠಿತ ನಾಯಕರೊಂದಿಗೆ ಸಂಪರ್ಕ ಹೊಂದಿದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಇಷ್ಟು ದಿನ ಏನ್ಮಾಡ್ತಿದ್ರು?
ಪಾಲಿಕೆ ಉದ್ಯಾನ ಒತ್ತುವರಿ ಮಾಡಿ ಖಾಸಗಿ ವ್ಯಕ್ತಿಗಳು ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ಪಾಲಿಕೆ ಅಧಿಕಾರಿಗಳು ಕಂಡೂ ಕಾಣದಂತೆ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳೆದ ಮೂರುವರೆ ತಿಂಗಳಿನಿಂದ ಕಾಮಗಾರಿ ನಡೆಯುತ್ತಿದ್ದರೂ
ಯಾವೊಬ್ಬ ಪಾಲಿಕೆ ಅಧಿಕಾರಿಯೂ ಇತ್ತ ಮುಖ ಮಾಡದಿರುವುದು ಸ್ಪಷ್ಟವಾಗಿದೆ.
ವಲಯ ಆಯುಕ್ತರಿಂದ ಹಿಡಿದು ಇನ್ನಿತರೆ ಅಧಿಕಾರಿಗಳಿಗೆ ಪಾಲಿಕೆ ಆಸ್ತಿ ಬಗ್ಗೆ ಕಾಳಜಿ ಇಲ್ಲದಿರುವುದು ಈ ಪ್ರಕರಣದಿಂದ
ಜಗಜ್ಜಾಹೀರಾಗಿದೆ.
ಬೇಕಾಬಿಟ್ಟಿ ನಿರ್ಮಾಣ ಕೇಳುವವರೇ ಇಲ್ಲ!
ಪಾಲಿಕೆ ಜಾಗದಲ್ಲೇ ರಾಜಾರೋಷವಾಗಿ ಕಟ್ಟಡ ನಿರ್ಮಾಣ ನಡೆಯುತ್ತಿದ್ದರೂ ಇಷ್ಟು ದಿನ ಗಮನ ಹರಿಸಿರಲಿಲ್ಲ. ಇನ್ನು ಖಾಸಗಿ ಜಾಗೆಯಲ್ಲಿ ಬೇಕಾಬಿಟ್ಟಿ ಕಟ್ಟಡ ನಿರ್ಮಾಣದ ಬಗ್ಗೆ ತಲೆಕೆಡಿಸಿಕೊಳ್ಳುವವರ್ಯಾರು ಎಂಬಂತಾಗಿದೆ ನಗರದ ಸ್ಥಿತಿ. ನವೀನ್ ಪಾರ್ಕ್‌ನ ಪಾಲಿಕೆ ಉದ್ಯಾನವನ ಜಾಗದಲ್ಲಿ ನಿರ್ಮಾಣ ಕಾಮಗಾರಿಯ ಮೇಲುಸ್ತುವಾರಿ ವಹಿಸಿರುವ ವ್ಯಕ್ತಿ ನಗರದ ಗಣ್ಯ
ವ್ಯಕ್ತಿಗಳಿಗೆ ಹತ್ತಿರವಾಗಿದ್ದಾರೆ ಎನ್ನುವ ಕಾರಣಕ್ಕೆ ಅಧಿಕಾರಿಗಳು ಕಂಡರೂ ಕಾಣದಂತಿದ್ದರು ಎನ್ನಲಾಗಿದೆ. ಇದೀಗ ಸ್ಥಳೀಯರೇ
ಪಾಲಿಕೆ ಆಯುಕ್ತರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿದ್ದು, ಸಂಬಂಧಿಸಿದವರಿಗೆ ನೋಟಿಸ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.