ತಳಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸುವ ಯೋಜನೆ : ಸತೀಶ್ ಜಾರಕಿಹೊಳಿ
Team Udayavani, Nov 13, 2020, 10:06 PM IST
ಹಳೆಯಂಗಡಿ: ತಳಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ರಾಜ್ಯವ್ಯಾಪಿಯಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಮಾತ್ರವಲ್ಲದೆ ಮುಂಬರುವ ಎಲ್ಲಾ ಚುಣಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರ ಗಳಿಸಲು ಕಾರ್ಯಸೂಚಿ ಕೈಗೊಳ್ಳಲಿದ್ದೇವೆ ಎಂದು ಮಾಜಿ ಸಚಿವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಹೇಳಿದರು.
ಅವರು ಶುಕ್ರವಾರ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಮಾತ್ರ ಸಾಮಾಜಿಕ ನ್ಯಾಯ ಲಭ್ಯವಾಗುತ್ತದೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ವರ್ಷಕ್ಕೆ 2ಕೋಟಿ ಉದ್ಯೋಗದ ಭರವಸೆಯನ್ನು ಈಡೇರಿಸಲಾಗದೆ ಸೋತಿದೆ. ಅಧಿಕಾರ ಮತ್ತು ಹಣದ ಬಲದಲ್ಲಿ ಉಪಚುಣಾವಣೆಯನ್ನು ಗೆದ್ದಿದೆ. ರಾಜ್ಯದಲ್ಲಿ ಕಾಂಗ್ರಸ್ ಪಕ್ಷದ ಆಡಳಿತದ ಸಮಯದಲ್ಲಿ ನಡೆದ ಅಭಿವೃದ್ದಿಯನ್ನು ಜನರಿಗೆ ತಲುಪಿಸುವಲ್ಲಿ ನಾವು ವಿಫಲರಾಗಿರುವ ಕಾರಣ ಸೋಲು ಉಂಟಾಗಿದೆ ಈಗಾಗಲೇ ರಾಜ್ಯದಾದಂತ ಪ್ರವಾಸಗಳನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಚುಣಾವಣೆಗಳನ್ನು ಸಂಘಟಿತರಾಗಿ ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ನಳಿನ್‌ಕುಮಾರ್ ಕಟೀಲು ಅವರಿಗೆ ಮಾತೇ ಬಂಡವಾಳವಾಗಿದೆ ಎಲ್ಲವನ್ನು ಬಾಯಿ ಮಾತಿನಲ್ಲಿಯೇ ಹೇಳಿ ಕಾಲ ಹರಣ ಮಾಡುತ್ತಿದ್ದಾರೆ, ಕಳೆದ ಬಾರಿ ಸರಕಾರದ ಯಶಸ್ವಿ ಯೋಜನೆಗಳನ್ನು ಜನರಲ್ಲಿ ತಲುಪಿಸಲು ವಿಫಲರಾಗಿದ್ದೇವೆ ಉತ್ತಮ ಆಯ್ಕೆಯನ್ನೇ ಮಾಡಿದ್ದರೂ ಮೂಲ್ಕಿ ಮೂಡಬಿದ್ರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಯಿತು.. ಮುಂದಿನ ಬಾರಿ ನಾವು ಗೆಲ್ಲುವ ಅಭ್ಯರ್ಥಿಯ ಆಯ್ಕೆ ಮಾಡಿ ಚುನಾವಣೆಯನ್ನು ಗೆದ್ದೇ ಗೆಲ್ಲುತ್ತೇವೆ ಎಂದರು.
ಈ ಸಂದರ್ಭ ಕೆಪಿಸಿಸಿ ಕೋರ್ಡಿನೇಟರ್ ಎಚ್. ವಸಂತ ಬೆರ್ನಾಡ್, ಜಿಲ್ಲಾ ಮಾಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಜಿಲ್ಲಾ ಯುವ ಇಂಟಕ್ ಅಧ್ಯಕ್ಷ ಚಿರಂಜೀವಿ ಅಂಚನ್, ಮೂಲ್ಕಿ ಬ್ಲಾಕ್ ಇಂಟಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.