ಡಿಸಿಸಿ ಬ್ಯಾಂಕ್ ಗೆ ರಮೇಶ ಕತ್ತಿ ಅಧ್ಯಕ್ಷ, ಢವಳೇಶ್ವರ ಉಪಾಧ್ಯಕ್ಷ: ಅಧಿಕೃತ ಘೋಷಣೆ ಬಾಕಿ


Team Udayavani, Nov 14, 2020, 2:42 PM IST

ಡಿಸಿಸಿ ಬ್ಯಾಂಕ್ ಗೆ ರಮೇಶ ಕತ್ತಿ ಅಧ್ಯಕ್ಷ, ಢವಳೇಶ್ವರ ಉಪಾಧ್ಯಕ್ಷ: ಅಧಿಕೃತ ಘೋಷಣೆ ಬಾಕಿ

ಬೆಳಗಾವಿ: ಜಿಲ್ಲೆಯಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಖಚಿತವಾಗಿದ್ದು, ಹಾಲಿ ಅಧ್ಯಕ್ಷ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಮಾತ್ರ ನಾಮಪತ್ರ ಸಲ್ಲಿಸಿದ್ದು, ಇವರೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಿಂದ ಸಭೆ ನಡೆಸುತ್ತಿದ್ದ ಬಿಜೆಪಿ ನಾಯಕರು, ನಿರ್ದೇಶಕರ ಅಭಿಪ್ರಾಯ ಪಡೆದು ಶನಿವಾರ ಬೆಳಗ್ಗೆ ಒಮ್ಮತದ ಅಭ್ಯರ್ಥಿಗೆ ಹಸಿರು ನಿಶಾನೆ ತೋರಿದ್ದು, ಈ ಬಗ್ಗೆ ಹೆಸರು ಬಹಿರಂಗವಾಗಿ ಘೋಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಹಾಲಿ ಅಧ್ಯಕ್ಷ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವರನ್ನೇ ಮುಂದುವರಿಸುತ್ತಿದ್ದು, ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಒಂದಾಗಿ ಈ ನಿರ್ಧಾರ ಮಾಡಿದ್ದೇವೆ. ವರಿಷ್ಠರ ಸೂಚನೆಯಂತೆ 14 ಹಾಲಿ ನಿರ್ದೇಶಕರನ್ನು ಮುಂದುವರಿಸುವಂತೆಯೂ ಹೇಳಿದ್ದು, ಜತೆಗೆ ಅವಿರೋಧ ಆಯ್ಕೆ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಇದನ್ನೂ ಓದಿ:ಸಂತ್ಯಾಗ ನಿಂತ ಸೈಕಲ್‌ ಕಬೀರ ಡಾ| ಐರಸಂಗ

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಗೊಂದಲಗಳು ಅಥವಾ ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ. ಎಲ್ಲವನ್ನೂ ಬದಿಗಿಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಅವಕಾಶವಿದೆ.‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಬ್ಯಾಂಕಿನ ನೌಕರರು, ರೈತರು ಹಾಗೂ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದೆ ಹೋಗುವಂತೆ ತಿಳಿಸಿದ್ದೇವೆ ಎಂದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಶಾಸಕರಾದ ಉಮೇಶ ಕತ್ತಿ, ಮಹಾಂತೇಶ ದೊಡ್ಡಗೌಡರ, ನಿರ್ದೇಶಕರು ಇದ್ದರು.

ಟಾಪ್ ನ್ಯೂಸ್

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…

jairam ramesh

Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ

police crime

Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು

7-belagavi

Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

5-belagavi

Belagavi: ಎಂಇಎಸ್‌ ಕಾರ್ಯಕರ್ತರ ಪುಂಡಾಟ

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.