ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ ಚಾಲನೆ


Team Udayavani, Nov 14, 2020, 5:10 PM IST

ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ ಚಾಲನೆ

ಬೀದರ: ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ನಗರದಲ್ಲಿ ನ. 12ರಂದು “ಮಾಲಿನ್ಯ ಅಳಿಸಿ ಜೀವ ಉಳಿಸಿ’ ಘೋಷ ವಾಕ್ಯದಡಿ ವಾಯುಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ನಿಮಿತ್ತ ನಗರದ ಅಂಬೇಡ್ಕರ್‌ ವೃತ್ತ ಹತ್ತಿರ ನಡೆದ ಬೀದಿನಾಟಕ ಕಾರ್ಯಕ್ರಮ ಹಾಗೂ ಸಸಿ ವಿತರಣೆಗೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಚಾಲನೆ ನೀಡಿದರು. ಇದೇ ವೇಳೆ ಡಿಸಿ ವಾಹನ ಚಾಲಕರಿಗೆ ಸಸಿ ವಿತರಣೆ ಮಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ಮಾತನಾಡಿ, ಮನುಕುಲದ ಒಳಿತಿಗೆ ಪರಿಸರ ಸಮತೋಲನದಿಂದ ಇಟ್ಟುಕೊಳ್ಳಬೇಕು.

ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಒತ್ತು ಕೊಡಬೇಕು. ವಾಹನಗಳಿಗೆ ಕಳಪೆ ಇಂಧನ ಬಳಸಬಾರದು. ಇದರಿಂದ ಸಾಕಷ್ಟು ಹೊಗೆ ಉಂಟಾಗಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದರು.

ಹೊಗೆ ಸೇವನೆಯಿಂದ ಮನುಷ್ಯನ ಶ್ವಾಸಕೋಶದ ಮೇಲೆ ಪರಿಣಾಮವಾಗಲಿದೆ. ಅಲ್ಲದೇ ಕಣ್ಣು ಮಂಜಾಗಲಿವೆ. ಕ್ಯಾನ್ಸರ್‌, ಅಸ್ತಮಾ ಮತ್ತು ದಮ್ಮಿನಂತಹ ಕಾಯಿಲೆಗಳು ಬರುತ್ತವೆ. ಆದ್ದರಿಂದ ಜನರು ವಾಹನಗಳಿಗೆ ಗುಣಮಟ್ಟದ ಇಂಧನ ಬಳಸಬೇಕು. ವಾಹನಗಳಿಗೆ ತಪ್ಪದೇ ಆರು ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣೆ ಮಾಡಿಸಬೇಕು. ಇಲ್ಲವಾದರೆ ದ್ವಿಚಕ್ರ ವಾಹನಗಳಿಗೆ 1500ರೂ. ಮತ್ತು ನಾಲ್ಕು ಚಕ್ರದ ವಾಹನಗಳಿಗೆ 3000 ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಾಫರ ಸಾಕ್‌ ಮಾತನಾಡಿ, ಮನುಷ್ಯನಿಗೆ ಗಾಳಿ ಅತೀಮುಖ್ಯ. ಹೀಗಾಗಿ ಕಾಲಕಾಲಕ್ಕೆ ವಾಹನ ಪರಿಶೀಲಿಸುತ್ತ ಹೊಗೆಬಾರದಂತೆ ಸುಸ್ಥಿತಿಯಲ್ಲಿಟ್ಟುಕೊಳ್ಳೋಣ. ಚಿಕ್ಕ ಮಕ್ಕಳಿಗೆ ವಾಹನ ನೀಡಬಾರದು ಎಂದು ಸೂಚಿಸಿದರು.

ಕಚೇರಿ ಅಧೀಕ್ಷಕ ಖಾಜಾ ಬಿರಾನಿಬಾಷಾ, ವಾಹನ ನಿರೀಕ್ಷಕ ಮಂಜುನಾಥ ಎಂ.,ಪ್ರಮುಖರಾದ ಶಿವರಾಜ ಜಮಾದಾರ, ಪ್ರಕಾಶ ಗುಮ್ಮೆ, ಸಮೀರ್‌ ಅಹ್ಮದ್‌, ಅನೀಲಕುಮಾರ, ರಾಜಕುಮಾರಬಿರಾದಾರ, ವಿಲಿಯಂ ಹೊಸಮನಿ, ಜೇಮ್ಸ್‌, ವಿಶ್ವನಾಥ ಎಂ, ಸಯ್ಯದ್‌ ಖಲೀಂ, ವೀರೇಂದ್ರ ಇತರರು ಇದ್ದರು.

ಜಾಗೃತಿ ಕಾರ್ಯಕ್ರಮ: ದೇವದಾಸ್‌ ಚಿಮಕೋಡ್‌ ನೇತೃತ್ವದ ನಂದೀಶ್ವರ ನಾಟ್ಯ ಸಂಘದಿಂದ ಬಸವೇಶ್ವರ ವೃತ್ತ, ಹೊಸ ಬಸ್‌ ನಿಲ್ದಾಣ, ಆರ್‌ಟಿಒ ಕಚೇರಿ ಹತ್ತಿರ ಜಾಗೃತಿ ಕಾರ್ಯಕ್ರಮ ನಡೆದವು. ವಾಯುಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಗೀತೆ ಹೇಳಿ ಅರಿವು ಮೂಡಿಸಲಾಯಿತು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.