ಐಪಿಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ
Team Udayavani, Nov 14, 2020, 11:45 PM IST
ಬೆಂಗಳೂರು: ಫೇಸ್ಬುಕ್ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಧಿಕಾರಿಗಳ ಸ್ನೇಹಿತರಿಂದ ಹಣ ವಸೂಲಿ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಈಗ ಐಪಿಎಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವರ ಸ್ನೇಹಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಪೂರ್ವ ವಿಭಾಗ ಡಿಸಿಪಿ ಡಾ| ಶರಣಪ್ಪ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರಿದಿರುವ ಕಿಡಿಗೇಡಿಗಳು ಅವರ ಸ್ನೇಹಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಶರಣಪ್ಪ ಅವರು, ಫೇಸ್ಬುಕ್ನಲ್ಲಿ ನಕಲಿ ಖಾತೆಯ ಫೋಟೋ ಹಾಕಿ “ಇದು ನಕಲಿ ಖಾತೆಯಾಗಿದ್ದು, ಸ್ನೇಹಿತರು ಹಾಗೂ ಹಿತೈಷಿಗಳು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿಬೇಡಿ’ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಮೈತ್ರಿಯ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್-ಬಿಎಸ್ಪಿಗೆ ಗುಡ್ಬೈ! ಅಖೀಲೇಶ್ ಯಾದವ್ ಸ್ಪಷ್ಟನೆ
“ಶರಣಪ್ಪ ಎಸ್.ಡಾಂಗೆ ಐಪಿಎಸ್’ ಎಂಬುದು ಶರಣಪ್ಪ ಅವರ ಅಸಲಿ ಖಾತೆ. ಆದರೆ, ಕಿಡಿಗೇಡಿಗಳು “ಶರಣಪ್ಪ ಡಾಂಗೆ’ ಎಂದು ಖಾತೆ ತೆರೆದು ವಂಚಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.