ಕೋವಿಡ್ ಪ್ರಭಾವದಿಂದ ಕೋಚಿಮುಲ್‍ಗೆ 20 ಕೋಟಿ ನಷ್ಟ: ಎನ್.ಸಿ.ವೆಂಕಟೇಶ್
Team Udayavani, Nov 15, 2020, 10:15 PM IST
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟಕ್ಕೆ ಸುಮಾರು 20 ಕೋಟಿ ರೂಗಳ ನಷ್ಟ ಉಂಟಾಗಿದೆ ಆದರೂ ಸಹ ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ನಲ್ಲಕದ್ರೇನಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಹಾಗೂ ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ತಿಳಿಸಿದರು.
ತಾಲೂಕಿನ ನಲ್ಲಕದ್ರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಸದಸ್ಯರಿಗೆ ಬೋನಸ್ ಹಣವನ್ನು ವಿತರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಭಾವದಿಂದ ಕೋಚಿಮುಲ್‍ಗೆ ಸುಮಾರು 20 ಕೋಟಿ ರೂಗಳು ನಷ್ಟ ಸಂಭವಿಸಿದೆ ಕಳೆದ ಎರಡು ತಿಂಗಳಿಂದ ಮಾತ್ರ ಲಾಭ ಬರುತ್ತಿದ್ದು ಹಾಲು ಮಾರಾಟ ಹೆಚ್ಚಾದ ಬಳಿಕ ಹಾಲಿನ ದರವನ್ನು ಏರಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದೆಂದ ಅವರು ಈಗಾಗಲೇ 3 ಸಾವಿರ ಮೆಟ್ರಿಕ್ ಹಾಲಿನ ಪುಡಿ ದಾಸ್ತಾನುವಿದೆ ಆದರೂ ಸಹ ಹಾಲು ಉತ್ಪಾದಕರಿಗೆ ಪ್ರತಿ ವರ್ಷ ಬೋನಸ್ ನೀಡುತ್ತಾ ಬಂದಿದ್ದು ಪ್ರಸಕ್ತ ಸಾಲಿನಲ್ಲಿ ನಲ್ಲಕದ್ರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 4 ಲಕ್ಷ ರೂಗಳ ಲಾಭ ಬಂದಿದ್ದು ಅದರಲ್ಲಿ ಒಂದೂವರೆ ಲಕ್ಷ ರೂಗಳು ಬೋನಸ್ ಹಣವನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ನೀಡಿದ್ದೇವೆ ಎಂದರು.
ಇದನ್ನೂ ಓದಿ :ಭಾರತದ ವಿರುದ್ಧ ಸಾಕ್ಷ್ಯಗಳು ಪಾಕ್‌ನ ಕಟ್ಟುಕತೆ: ಅನುರಾಗ್ ಶ್ರೀವಾಸ್ತವ
ಕೇವಲ 20 ಲೀಟರ್ ಹಾಲಿನಿಂದ ಆರಂಭವಾದ ಡೇರಿ ಇದೀಗ ಪ್ರತಿನಿತ್ಯ ಸುಮಾರು 800 ಲೀಟರ್ ಹಾಲು ಸರಬರಾಜು ಮಾಡುತ್ತಿದ್ದು ಚಿಲ್ಲಿಂಗ್ ಸೇಂಟರ್‍ನಲ್ಲಿ 3 ಸಾವಿರ ಲೀಟರ್ ಹಾಲು ಚಿಲ್ಲಿಂಗ್ ಮಾಡಿ ಒಕ್ಕೂಟಕ್ಕೆ ಸರಬರಾಜು ಮಾಡಲಾಗುತ್ತದೆ ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.