ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ

ರಾಜ್ಯಬಿಜೆಪಿ ಮುಖಂಡ ವಿಜಯೇಂದ್ರ ಅಭಿಮಾನಿ ಬಳಗದಿಂದ ಹೊಸ ರೂಪ

Team Udayavani, Nov 16, 2020, 4:59 PM IST

cb-tdy-1

ಬಾಗೇಪಲ್ಲಿ: ತಾಲೂಕಿನ ಗೂಳೂರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಮಾನಿಗಳ ಬಳಗದವರು ಸಾವಿರಾರು ರೂ.ಖರ್ಚು ಮಾಡಿ ಹೈಟೆಕ್‌ ಸ್ಪರ್ಶ ನೀಡಿದ್ದು, ಮತ್ತಷ್ಟು ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸಿ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಯತ್ತ ಆಕರ್ಷಿಸಲು ಮುಂದಾಗಿದ್ದಾರೆ.

ತೆಲುಗು ಪ್ರಭಾವ: ತಾಲೂಕಿನ ಗೂಳೂರು ಹೋಬಳಿ ಹೆಸರಿಗೆ ಮಾತ್ರವಷ್ಟೇ ಕರ್ನಾಟಕ ರಾಜ್ಯಕ್ಕೆ ಸೇರಿದ್ದು, ಈ ಭಾಗದ ಜನರು ಸರ್ಕಾರಿ ಕಚೇರಿ ಕೆಲಸಗಳು ಹೊರತುಪಡಿಸಿ ಉಳಿದಂತಹ ಎಲ್ಲಾ ರೀತಿಯ ವ್ಯವಹಾರಗಳು ತೆಲುಗು ಭಾಷೆಯಲ್ಲೇ ವ್ಯವರಿಸುತ್ತಾರೆ. ಆಂಧ್ರ ಪ್ರದೇಶದ ಗಡಿಭಾಗದಲ್ಲಿರುವ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಗ್ರಾಮೀಣ ಪ್ರದೇಶದಲ್ಲಿರುವ ಬಹುತೇಖರ ನಾಡು ಭಾಷೆ ತೆಲುಗು ಆಗಿದೆ.

ದಾಖಲಾತಿ ಕೊರತೆ: ತೆಲುಗು ಪ್ರಭಾವ ಹೆಚ್ಚು ಇರುವ ಈ ಭಾಗದಲ್ಲಿ ಆಂಗ್ಲ ಮಾಧ್ಯಮದ ಶಾಲೆಗಳ ವ್ಯಾಮೋಹ ಹಾಗೂ ಪ್ರಭಾವ ಹೆಚ್ಚಿದ್ದು, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ದಾಖಲಾತಿ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆಕಡಿಮೆ ಆಗುತ್ತಿವೆ. ಕನ್ನಡ ಭಾಷೆಯ ಉಳುವಿಗಾಗಿ ಹಾಗೂ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಿ ಕನ್ನಡೀಕರಣಗೊಳಿಸ ಬೇಕೆಂದು ಒತ್ತಾಯಿಸಿ ಈ ಭಾಗದ ಕನ್ನಡಾಭಿಮಾನಿಗಳು ನಿತ್ಯ ಹೋರಾಟ ಮಾಡುತ್ತಿರುವುದು ಮುಂದುವರಿಯುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವ ಬಿ.ವೈ.ವಿಜಯೇಂದ್ರ ಅಭಿಮಾನಿಗಳ ಬಳಗದ ಕಾರ್ಯಕ್ರಮದಿಂದಕನ್ನಡಾಭಿಮಾನಿಗಳಿಗೆ ಶಕ್ತಿ ತುಂಬಿದಂತಾಗಿದೆ.

ಆಕರ್ಷಣೆ: ತಾಲೂಕಿನ ಗೂಳೂರು ಗ್ರಾಮದ ಬಾಬಾಜಾನ್‌ ಎಂಬುವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬದೊಂದಿಗೆ ಹಲವು ದಶಕಗಳಿಂದ ನಂಬಿಕಸ್ಥನಾಗಿ ಕೆಲಸ ಮಾಡಿಕೊಂಡಿದ್ದು, ಅವರ ಮಗ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರರ ಆಪ್ತರು ಆಗಿದ್ದು, ತಮ್ಮ ನಾಯಕನ ಹುಟ್ಟು ಹಬ್ಬದ ನೆನಪಿಗಾಗಿ ಬಾಬಾಜಾನ್‌, ಸ್ವಗ್ರಾಮ ಹಾಗೂ ತಾನು ವ್ಯಾಸಂಗ ಮಾಡಿರುವ ಗೂಳೂರು ಸರ್ಕಾರಿ ಶಾಲೆಯಲ್ಲಿ ಮಿನಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಿ, ಶಾಲೆಯ ಗೋಡೆಗಳಿಗೆ ಶಿಕ್ಷಣ, ಸಾಹಿತ್ಯ, ಜ್ಞಾನಕ್ಕೆ ಪೂರಕವಾದ ಬರಹ ಮತ್ತು ಚಿತ್ರಕಲೆ ಸೇರಿದಂತೆ ಕ್ರೀಡೆಗೆ ಅಗತ್ಯವಿರುವ ಮಾಹಿತಿಯನ್ನು ಗೋಡೆಗಳ ಮೇಲೆ ಬಿಡಿಸಲಾಗಿದ್ದು, ವರ್ಣರಂಜಿತ ಬಣ್ಣ ಹಾಕಿಸಿ ವಿದ್ಯಾರ್ಥಿಗಳನ್ನು ಆಕರ್ಷಿಸುವಂತೆ ಪ್ರೋತ್ಸಾಹ ನೀಡಿದ್ದಾರೆ.

ಮತ್ತಷ್ಟು ಶಾಲೆಗಳ ಅಭಿವೃದ್ಧಿಗೆ ಯೋಜನೆ :  ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಮಾನಿಗಳ ಬಳಗದಿಂದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಯೋಜನೆಯನ್ನು ರೂಪಿಸಿಕೊಂಡಿದ್ದೇವೆ. ಮೊದಲ ಹಂತದ ಭಾಗವಾಗಿ 75 ಸಾವಿರ ರೂ. ವೆಚ್ಚದಲ್ಲಿ ಗೂಳೂರು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತನೆ ಮಾಡಲಾಗಿದೆ ಎಂದು ಎಂದು ಕರ್ನಾಟಕ ರಾಜ್ಯ ಬಿ.ವೈ.ವಿಜಯೇಂದ್ರ ಅಭಿಮಾನಿ ಬಳಗದ ಪದಾಧಿಕಾರಿ ಗೂಳೂರು ಬಾಬಾಜಾನ್‌ ತಿಳಿಸಿದರು. ಉದಯವಾಣಿಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ದಿನಗಳಲ್ಲಿ ತಾಲೂಕಿನ ಗಡಿ ಗ್ರಾಮಗಳಲ್ಲಿರುವ ಮತ್ತಷ್ಟು ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುತ್ತೇವೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಮಾದರಿ ಶಾಲೆಗಳನ್ನಾಗಿ ಪರಿವರ್ತನೆ ಮಾಡು ತ್ತಿರುವುದು ಸ್ವಾಗತಾರ್ಹ.ಶಾಲೆಯಲ್ಲಿ ಇನ್ನಷ್ಟು ಸಮಸ್ಯೆಗಳಿದ್ದು, ಸಮಾಜ ಸೇವಕರು,ಜನಪ್ರತಿನಿಧಿಗಳು, ಹಳೆ ವಿದ್ಯಾರ್ಥಿಗಳು ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾದರೆ ಶಾಲೆಯ ಅಭಿವೃದ್ಧಿಯ ಜೊತೆಗೆ ಮಕ್ಕಳ ದಾಖಲಾತಿಹೆಚ್ಚಳಕ್ಕೆ ಅನುಕೂಲವಾಗಲಿದೆ. ಸುಬ್ರಹ್ಮಣ್ಯ, ಮುಖ್ಯ ಶಿಕ್ಷಕ, ಗೂಳೂರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆ

 

ಪಿ.ಮಂಜುನಾಥರೆಡ್ಡಿ, ಬಾಗೇಪಲ್ಲಿ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.