ಗೊಂದಿ ನೀರಾವರಿ ಯೋಜನೆ ಪೂರ್ಣಕ್ಕೆ ಕ್ರಮ
Team Udayavani, Nov 16, 2020, 8:11 PM IST
ಚಿಕ್ಕಮಗಳೂರು: ಗೊಂದಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಮುಂದಿನ 18 ತಿಂಗಳೊಳಗಾಗಿ ಬೈರಾಪುರ ಪಿಕಪ್‌ನಿಂದ ಮಾದರಸನ ಕೆರೆ ಹಾಗೂ ದಾಸರಹಳ್ಳಿ ಕೆರೆಗಳಿಗೆನೀರು ಒದಗಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಸಿ.ಟಿ. ರವಿ ಹೇಳಿದರು.
ನಗರದಲ್ಲಿ ಲಕ್ಯಾ ಹೋಬಳಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಜಿಲ್ಲೆಯ ಬಯಲುಸೀಮೆ ಪ್ರದೇಶಗಳಿಗೆ ನೀರು ತುಂಬಿಸುವುದು ಬಹಳ ದಿನಗಳ ಕನಸು. ಭದ್ರಾ ಜಲಾಶಯದಿಂದ 197 ಕೆರೆಗಳಿಗೆ ನೀರು ತುಂಬಿಸುವ 1,281.8 ಕೋಟಿ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದ್ದು ಚಿಕ್ಕಮಗಳೂರು ತಾಲೂಕು ಲಕ್ಯಾ ಗ್ರಾಪಂ ವ್ಯಾಪ್ತಿಯಲ್ಲಿ ಮಾದರಸನ ಕೆರೆ ಹಾಗೂ ದಾಸರಹಳ್ಳಿ ಕೆರೆಗೆ ಬೈರಾಪುರ ಪಿಕಪ್‌ನಿಂದ ನೀರು ಒದಗಿಸುವ ಯೋಜನೆಗೆ ಟೆಂಡರ್ ಕರೆಯಲಾಗಿದೆ. ನ.27ಕ್ಕೆ ಟೆಂಡರ್ ಪ್ರಕ್ರಿಯೆ ಮುಗಿಯಲಿದ್ದು ಮುಂದಿನ 18 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.
ನೀರಾವರಿ ಸಮಿತಿ ಅಧ್ಯಕ್ಷ ಎಲ್.ಆರ್. ಈಶ್ವರಪ್ಪ ಮಾತನಾಡಿ, ಬಯಲುಸೀಮೆ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆಗೆ ಸಿ.ಟಿ. ರವಿ ಅವರು, ಮುಖ್ಯಮಂತ್ರಿಗಳೊಂದಿಗೆಚರ್ಚಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿಸಿಕೊಟ್ಟಿರುವುದು ಈ ಭಾಗದ ರೈತರಿಗೆ ಹರ್ಷದಾಯಕ ವಿಷಯ ಎಂದರು. ಕೆರೆಗಳನ್ನು ತುಂಬಿಸುವುದರಿಂದ ಚಿಕ್ಕಮಗಳೂರುತಾಲೂಕು ಹಿರೇಗೌಜ, ಲಕುಮನಹಳ್ಳಿ, ಲಕ್ಯಾ ಗ್ರಾಪಂ ವ್ಯಾಪ್ತಿಯ ಭಾಗದ ಜನರಿಗೆ ಹಾಗೂ ಸಖರಾಯಪಟ್ಟಣ ಭಾಗದ ಹಳ್ಳಿಗಳಿಗೂಅನುಕೂಲವಾಗಲಿದ್ದು, ಮಾದರಸ ಕೆರೆಗೆ ಒಟ್ಟು ರೂ.17 ಕೋಟಿ ಹಾಗೂ ದಾಸರಹಳ್ಳಿ ಕೆರೆಯ ಕಾಮಗಾರಿಗೆ ರೂ.11 ಕೋಟಿ ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ಜಿಪಂ ಉಪಾಧ್ಯಕ್ಷ ಬಿ.ಜೆ. ಸೋಮಶೇಖರಪ್ಪ, ಜಿಪಂ ಸದಸ್ಯ ರವೀಂದ್ರ ಬೆಳವಾಡಿ, ವೀರಭದ್ರಪ್ಪ, ದಿನೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.