ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್,ಹಾಲು ಒಕ್ಕೂಟ: ಎಸ್.ಟಿ.ಸೋಮಶೇಖರ್
st somashekar
Team Udayavani, Nov 17, 2020, 2:26 PM IST
ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿರುವ ಡಿಸಿಸಿ ಬ್ಯಾಂಕ್ ಹಾಗೂ ಕೋಚಿಮುಲ್ ಹಾಲು ಒಕ್ಕೂಟಗಳನ್ನು ಪ್ರತ್ಯೇಕಗೊಳಿಸುವ ವಿಚಾರ ರಾಜ್ಯ ಸಚಿವ ಸಂಪುಟದ ಮುಂದಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ರಾಜ್ಯ ಸಹಕಾರ ಸೌಹಾರ್ದ ಮಹಾಮಂಡಲ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 67 ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡಲು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸಂಕಲ್ಪ ಮಾಡಿದ್ದಾರೆ ಇವರ ಬೇಡಿಕೆಗಳನ್ಮು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸ್ತು ಎನ್ನುತಾರೆ ಜಿಲ್ಲೆಯ ಪ್ರಮುಖ ಬೇಡಿಕೆಗಳಾದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿರುವ ಡಿಸಿಸಿ ಬ್ಯಾಂಕ್ ಹಾಗೂ ಕೋಚಿಮುಲ್ ಹಾಲು ಒಕ್ಕೂಟಗಳನ್ನು ಪ್ರತ್ಯೇಕಗೊಳಿಸುವ ವಿಚಾರ ರಾಜ್ಯ ಸಚಿವ ಸಂಪುಟದ ಮುಂದಿದೆ ಅದು ಅತಿ ಶೀಘ್ರದಲ್ಲಿ ಈಡೇರಲಿದೆ ಎಂದರು.
ಕೋವಿಡ್ ಪ್ರಕರಣಗಳ ಕುರಿತು ಮಾತಾನಾಡಿದ ಅವರು,ದೇಶ ವಿದೇಶಗಳಲ್ಲಿ ಜನರ ನೆಮ್ಮದಿ ಭಂಗ ಮಾಡಿರುವ ಕೋವಿಡ್ ಸೋಂಕು ರಾಜ್ಯದಲ್ಲಿ ದಿನೇ ದಿನೇ ಕಡಿಮೆಯಾಗುತ್ತಿದೆ ಮೈಸೂರಿನಲ್ಲಿ ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಾಡಿನ ದಸರಾ ಉತ್ಸವವನ್ನು ಆಚರಿಸಿದ್ದೇವೆ ಎಂದರು. ರಾಜ್ಯದಲ್ಲಿ ಸಹಕಾರ ಕ್ಷೇತ್ರವನ್ನು ಬಲಪಡಿಸಲು ಕ್ರಮ ಕೈಗೊಂಡಿದ್ದು ಭವಿಷ್ಯದಲ್ಲಿ ರಾಜ್ಯದ ಸಹಕಾರ ವ್ಯವಸ್ಥೆಯನ್ನು ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಇದನ್ನೂ ಓದಿ :ಕೋವಿಡ್ ಮಾರ್ಗಸೂಚಿ ಅನುಸರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಬೇಕು : ಸಚಿವ ಜಗದೀಶ ಶೆಟ್ಟರ್
ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾತಾನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಆತ್ಮನಿರ್ಭರ ಯೋಜನೆಯ ಮೂಲಕ ಸಹಕಾರ ಕ್ಷೇತ್ರಕ್ಕೆ 600 ಕೋಟಿ ರೂ.ಗಳ ನೆರವು ಪಡೆಯಲು ಮುಂದಾಗಿರುವ ರಾಜ್ಯ ಅದು ಕರ್ನಾಟಕ ಮಾತ್ರ ಎಂದರು. ಕಳೆದ ಸಾಲಿನಲ್ಲಿ ಡಿಸಿಸಿ ಬ್ಯಾಂಕಿನ ಮೂಲಕ 13 ಸಾವಿರ ಕೋಟಿ ರೂ.ಗಳ ಸಾಲವನ್ನು ನೀಡಿದ್ದೇವೆ ಪ್ರಸಕ್ತ ಸಾಲಿನಲ್ಲಿ 15 ಸಾವಿರ ಕೋಟಿ ಸಾಲ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದರು.
ಜಿಲ್ಲಾ ಒಕ್ಕೂಟದ ಕಟ್ಟಡವನ್ನು ನಿರ್ಮಿಸಲು ರಾಜ್ಯ ಸಹಕಾರ ಇಲಾಖೆಯಿಂದ ಅಗತ್ಯ ನೆರವು ಕಲ್ಪಿಸಲು ಬದ್ದವಾಗಿದ್ದು ಕಟ್ಟಡವನ್ನು ಮಾದರಿಯಾಗಿ ನಿರ್ಮಿಸಬೇಕೆಂದು ಸಲಹೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಸಂಸದ ಬಿ.ಎನ್.ಬಚ್ಚೇಗೌಡ,ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು,ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಸಹಕಾರ ಇಲಾಖೆಯ ನಿಬಂಧಕರಾದ ಝೀಯಾಉಲ್ಲಾ, ಕೋಚಿಮುಲ್ ಅಧ್ಯಕ್ಷ ನಂಜೇಗೌಡ,ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ,ಉಪಾಧ್ಯಕ್ಷ ತೋಪಡ ನಾಗರಾಜ್, ಮಾಜಿ ಶಾಸಕ ಕೆಪಿ ಬಚ್ಚೇಗೌಡ,ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ (ಚಿನ್ನಿ) ಜಿಲ್ಲಾಧಿಕಾರಿ ಆರ್.ಲತಾ,ಜಿಲ್ಲಾ ಎಸ್ಪಿ ಮಿಥುನ್ ಕುಮಾರ್,ರಾಜ್ಯ ಸೌಹಾರ್ದ ಸಹಕಾರ ಮಂಡಳದ ಅಧ್ಯಕ್ಷ ಕೃಷ್ಣರೆಡ್ಡಿ,ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.