ಟೊಯೋಟ-ಕಿರ್ಲೋಸ್ಕರ್ ಬಿಕ್ಕಟ್ಟು; ಮುಷ್ಕರ ನಿಷೇಧ, ಲಾಕ್‌ಔಟ್ ತೆರವಿಗೆ ಮುಂದಾದ ಸರ್ಕಾರ
Team Udayavani, Nov 17, 2020, 5:03 PM IST
ಬೆಂಗಳೂರು: ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಕಗ್ಗಂಟಾಗಿದ್ದ ಬಿಡದಿ ಸಮೀಪದ ಟೊಯೋಟ-ಕಿರ್ಲೋಸ್ಕರ್ ಸಂಸ್ಥೆಯ ಬಿಕ್ಕಟ್ಟು ನಿವಾರಣೆಗೆ ಸರಕಾರ ಯತ್ನಿಸಿದ್ದು, ಇದೇ ವೇಳೆ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ, ಲಾಕ್‌ಔಟ್ ತೆರವುಗೊಳಿಸಲು ಸರಕಾರ ಮಂದಾಗಿದೆ.
ರಾಜ್ಯದ ಏಕೈಕ ಬೃಹತ್ ಆಟೋಮೊಬೈಲ್ ಕೈಗಾರಿಕೆಯಾಗಿರುವ ಟೊಯೋಟ-ಕಿರ್ಲೋಸ್ಕರ್ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉಂಟಾದ ತಿಕ್ಕಾಟದಿಂದ ಸುಮಾರು 39 ಕಾರ್ಮಿಕರನ್ನು ಅಮಾನತು ಮಾಡಲಾಗಿತ್ತು. ಇದರಿಂದ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರೆ, ಕಂಪನಿಯೂ ಲಾಕ್‌ಔಟ್ ಘೋಷಣೆ ಮಾಡಿತ್ತು.
ಇದರಿಂದ ಕೂಡಲೇ ಮಧ್ಯಪ್ರವೇಶ ಮಾಡಿದ ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾರ್ಮಿಕರು ಮತ್ತು ಆಡಳಿತ ಮಂಡಳಿ ಒಳಗೊಂಡಂತೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮುಂತಾದವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಕಾರ್ಮಿಕ ವ್ಯಾಜ್ಯ ಕಾಯ್ದೆ ಸೆಕ್ಷನ್ 10(3)ರ ಪ್ರಕಾರ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ ಲಾಕ್‌ಔಟ್ ತೆರವುಗೊಳಿಸುವ ಮಹತ್ವದ ಆದೇಶವನ್ನು ಹೊರಡಿಸಲಾಗುವುದು ಎಂದು ಪ್ರಕಟಿಸಿದರು.
ನಾಳೆ ಬೆಳಗ್ಗೆಯಿಂದಲೇ ಕಂಪನಿಯ ಉತ್ಪಾದನಾ ಚಟುವಟಿಕೆ ಪುನಾರಂಭ ಆಗಬೇಕು. ಕೂಡಲೇ ಕೆಲಸಕ್ಕೆ ಹಾಜರಾಗಿ ಎಂದು ಕಾರ್ಮಿಕರಿಗೆ ಹಾಗೂ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಡಳಿತ ಮಂಡಳಿಗೆ ಡಿಸಿಎಂ ಸೂಚಿಸಿದರು.
ಮುಷ್ಕರ, ಲಾಕ್‌ಔಟ್ ಎರಡೂ ಸರಿಯಲ್ಲ: ಮೊದಲಿನಿಂದಲೂ ರಾಜ್ಯದಲ್ಲಿ ಉತ್ತಮ ಶ್ರಮ ಸಂಸ್ಕೃತಿ ಇದೆ. ಇದರಿಂದ ಕೈಗಾರಿಗೆಗಳ ಬೆಳವಣಿಗೆ ಉತ್ತಮವಾಗಿ ಆಗಿದೆ ಎಂದು ಹೇಳಬಹುದು. ಇಡೀ ಏಷ್ಯಾದಲ್ಲಿಯೇ ಉತ್ತಮ ಹೂಡಿಕೆ ಹಾಗೂ ಕೈಗಾರಿಕೆಗಳಿಗೆ ಪೂರಕ ವಾತಾವರಣ ರಾಜ್ಯದಲ್ಲಿದೆ. ಕೋವಿಡ್ ನಂತರ ಕುಸಿತ ಕಂಡಿರುವ ಆರ್ಥಿಕತೆಯನ್ನು ಮತ್ತೆ ಮೇಲೆತ್ತುವ ಕೆಲಸ ಎಲ್ಲರೂ ಮಾಡಬೇಕಿದೆ. ಆದರೆ, ಮುಷ್ಕರ ಮತ್ತು ಲಾಕ್‌ಔಟ್‌ನಿಂದ ನಾವು ಎಂಥ ಸಂದೇಶ ನೀಡಲು ಸಾಧ್ಯ ಎಂದು ಡಿಸಿಎಂ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕ ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳನ್ನು ಖಾರವಾಗಿ ಪ್ರಶ್ನಿಸಿದರು.
ಚೀನಾಕ್ಕೆ ಪರ್ಯಾಯವಾಗಿ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಆದರಲ್ಲೂ ಕರ್ನಾಟಕದಲ್ಲಿ ಇನ್ನಷ್ಟು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಜಪಾನ್, ದಕ್ಷಿಣ ಕೊರಿಯಾ, ತೈವಾನ್‌ನಂಥ ದಕ್ಷಿಣ ಆಸಿಯಾ ದೇಶಗಳು ತುದಿಗಾಲ ಮೇಲೆ ನಿಂತಿವೆ. ಇಂಥ ಹೊತ್ತಿನಲ್ಲಿ ಮುಷ್ಕರ, ಲಾಕ್‌ಡೌನ್‌ನಂಥ ಮಾತುಗಳು ಬರಲೇಬಾರದು ಎಂದ ಅವರು, ಜಪಾನಿಯರಲ್ಲಿ ಇರುವ ವರ್ಕ್ ಕಲ್ಚರ್ ನಮ್ಮಲ್ಲೂ ಬರಬೇಕು. ಇದು ಸ್ಪರ್ಧಾತ್ಮಕ ಜಗತ್ತು. ಮಾರಕಟ್ಟೆಯಲ್ಲಿ ನೂರೆಂಟು ಕಾರುಗಳಿವೆ. ಗ್ರಾಹಕನಿಗೆ ಆಯ್ಕೆ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು ಎಂದು ಕಾರ್ಮಿಕ ಪ್ರತಿನಿಧಿಗಳಿಗೆ ಸೂಕ್ಷ್ಮವಾಗಿ ತಿಳಿಹೇಳಿದರು.
ಸಭೆಯಲ್ಲಿ ಮಾಗಡಿ ಶಾಸಕ ಮಂಜುನಾಥ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ್, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಗಿರೀಶ್, ಹೆಚ್ಚುವರಿ ಕಾರ್ಮಿಕ ಆಯುಕ್ತ ಮಂಜುನಾಥ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.