ಇಂದು ಸಿಎಂ ದಿಲ್ಲಿಗೆ; ಎಲ್ಲರ ಚಿತ್ತ ವರಿಷ್ಠರತ್ತ
Team Udayavani, Nov 18, 2020, 6:21 AM IST
ಬೆಂಗಳೂರು: ನಿರೀಕ್ಷೆಯಂತೆ ಸಿಎಂ ಬಿಎಸ್‌ವೈ ಅವರು ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಪೈಕಿ ವರಿಷ್ಠರು ಯಾವುದಕ್ಕೆ ಹಸುರು ನಿಶಾನೆ ತೋರಲಿದ್ದಾರೆ ಎಂಬುದೇ ಕುತೂಹಲ.
ಇತ್ತೀಚೆಗೆ ವರಿಷ್ಠರೊಂದಿಗೆ ದೂರವಾಣಿ ಕರೆಯ ಮೂಲಕ ನಡೆದಿದೆ ಎನ್ನಲಾದ ಮಾತುಕತೆಯಂತೆ ಯಡಿಯೂರಪ್ಪ ದಿಲ್ಲಿ ಪ್ರವಾಸಕ್ಕೆ ಮುಂದಾಗಿದ್ದಾರೆ. ಈ ಬಾರಿ ಕೆಲವರನ್ನು ಕೈಬಿಟ್ಟು ಮತ್ತೆ ಕೆಲವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ದೊಡ್ಡ ಮಟ್ಟದಲ್ಲಿ ಯೋಚಿಸುತ್ತಿರುವುದಾಗಿ ಯಡಿಯೂರಪ್ಪ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಹಾಗಾಗಿ ಸಚಿವರು ಮತ್ತು ಸಚಿವಾಕಾಂಕ್ಷಿಗಳ ಚಿತ್ತ ವರಿಷ್ಠರತ್ತ ನೆಟ್ಟಿದೆ.
ಬುಧವಾರ ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಬೆಳಗ್ಗೆ 11.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಯಡಿಯೂರಪ್ಪ ಅವರು ವಿಶೇಷ ವಿಮಾನದಲ್ಲಿ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಲವರನ್ನು ಸಂಪುಟದಿಂದ ಕೈಬಿಡಬೇಕಾದ ಅನಿವಾರ್ಯದ ಬಗ್ಗೆ ಸಿಎಂ ಸಭೆಯಲ್ಲಿ ಪ್ರಸ್ತಾವಿಸುವ ಸಾಧ್ಯತೆ ಇದೆ.
ಸದ್ಯ ಏಳು ಸ್ಥಾನ ಖಾಲಿ
ಸಂಪುಟದಲ್ಲಿ ಸದ್ಯ ಏಳು ಸಚಿವ ಸ್ಥಾನಗಳು ಖಾಲಿ ಇವೆ. ನಾಲ್ಕೈದು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಯಡಿಯೂರಪ್ಪ ಗಂಭೀರವಾಗಿ ಚಿಂತಿಸಿದ್ದಾರೆ. ಇದರಿಂದ ಖಾಲಿ ಉಳಿಯುವ ಸಚಿವ ಸ್ಥಾನಗಳ ಸಂಖ್ಯೆ 11 ಇಲ್ಲವೇ 12ಕ್ಕೆ ಏರಿಕೆಯಾಗಲಿದೆ. ಈ ಪೈಕಿ ಯಡಿಯೂರಪ್ಪ ಸೂಚಿಸುವ ಐವರು ಮತ್ತು ವರಿಷ್ಠರು ಇಲ್ಲವೇ ಪಕ್ಷ ಸೂಚಿಸುವ ಮೂರ್‍ನಾಲ್ಕು ಮಂದಿಗೆ ಅವಕಾಶ ಕಲ್ಪಿಸಿ ಮೂರು ಸ್ಥಾನ ಖಾಲಿ ಉಳಿಸಿಕೊಳ್ಳಲು ಚಿಂತನೆ ಇದೆ ಎನ್ನಲಾಗಿದೆ.
ವಿಧಾನ ಪರಿಷತ್ ಸದಸ್ಯರಾದ ಆರ್. ಶಂಕರ್, ಎಂ.ಟಿ.ಬಿ. ನಾಗರಾಜ್ ಜತೆಗೆ ಇತ್ತೀಚೆಗಷ್ಟೇ ಉಪಚುನಾವಣೆಯಲ್ಲಿ ಗೆದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ಖಚಿತ. ಉಳಿದ ಸ್ಥಾನಗಳನ್ನು ಜಾತಿ, ಪ್ರಾದೇಶಿಕತೆ, ಹಿರಿತನ, ಹೊಸ ಅವಕಾಶ ಇತರೆ ಆಧಾರದಲ್ಲಿ ಸಮತೋಲನ ಸಾಧಿಸುವ ಚಿಂತನೆಯಲ್ಲಿ ಯಡಿಯೂರಪ್ಪ ಇದ್ದಾರೆ ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.