ಟ್ರಕ್ ಗಳ ನಡುವೆ ಭೀಕರ ಅಪಘಾತ: 11 ಮಂದಿ ದಾರುಣ ಸಾವು, 17 ಜನರಿಗೆ ಗಂಭೀರ ಗಾಯ
Team Udayavani, Nov 18, 2020, 10:13 AM IST
ಗುಜರಾತ್: ಎರಡು ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, 11 ಮಂದಿ ಮೃತಪಟ್ಟು, 17 ಜನ ಗಾಯಗೊಂಡ ದಾರುಣ ಘಟನೆ ವಡೋದರದಲ್ಲಿ ನಡೆದಿದೆ.
ಟ್ರಕ್ ನಲ್ಲಿದ್ದ ಪ್ರಯಣಿಕರೆಲ್ಲಾ ಸೂರತ್ ನಿಂದ ಪಾವಗಢದ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ವಡೋದರದ ಎಸ್ ಎಸ್ ಜಿ ಹಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬುಧವಾರ ಮುಂಜಾನೆ (18-11-2020) ವಡೋದರ ಹೈವೇ ರಸ್ತೆಯ ವಾಘೋಡಿಯಾ ಕ್ರಾಸಿಂಗ್ ಬಳಿ ಎರಡು ಟ್ರಕ್ ಗಳ ಮುಖಾಮುಖಿ ಢಿಕ್ಕಿಯಾಗಿವೆ. ಈ ಭೀಕರ ಅವಘಡದಲ್ಲಿ 11 ಮಂದಿ ಪ್ರಾಣತ್ಯೆಜಿಸಿದ್ದಾರೆ.
ಇದನ್ನೂ ಓದಿ: ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿ, ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಸಬ್ ಇನ್ಸ್‌ಪೆಕ್ಟರ್
Gujarat: Nine people died, 17 injured in a collision between two trucks, at Waghodia Crossing Highway in Vadodara earlier this morning. The injured admitted to a hospital where they are undergoing treatment. https://t.co/z5HkSPfIo8 pic.twitter.com/kEdPcAkp98
— ANI (@ANI) November 18, 2020
ದುರ್ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಇದೊಂದು ಮನಕಲಕುವ ಘಟನೆ, ರಸ್ತೆ ಅಪಘಾತದಿಂದ ಹಲವು ಜೀವಗಳು ಬಲಿಯಾಗಿದೆ. ಈಗಾಗಲೇ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಲಾಗಿದೆ, ಗಾಯಗೊಂಡವರು ಶೀಘ್ರ ಚೇತರಿಕೆ ಕಾಣಲಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಯಕ್ಷಗಾನ ಕಲಾವಿದ, ಮಂದಾರ್ತಿ ಮೇಳದ ಜನಪ್ರಿಯ ಸ್ತ್ರೀ ವೇಷಧಾರಿ ಕೆರೆಗೆ ಬಿದ್ದು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.