ಮದುವೆಗೆ ನಿರಾಕರಣೆ: ವಿಧವೆಯ ಮೂಗು ನಾಲಿಗೆ ಕತ್ತರಿಸಿದ ಅತ್ತಿಗೆ !
Team Udayavani, Nov 18, 2020, 12:48 PM IST
ರಾಜಸ್ಥಾನ: ಸಂಬಂಧಿಯೊಂದಿಗೆ ಮದುವೆಯಾಗಲು ನಿರಾಕರಿಸಿದ ವಿಧವೆಯ ಮೂಗು ಬಾಯನ್ನು ಅತ್ತಿಗೆಯೇ ಕತ್ತರಿಸಿದ ಕ್ರೂರ ಘಟನೆ ರಾಜಸ್ಥಾನದ ಜೈಸಲ್ಮೇರ್ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಘಟನೆಗೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು ಕೃತ್ಯದಲ್ಲಿ ಭಾಗಿಯಾಗಿರುವ ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಸ್ಥಳೀಯ ಪೊಲೀಸ್ ಆಧಿಕಾರಿ ಕಂಠ ಸಿಂಗ್ ತಿಳಿಸಿದ್ದಾರೆ.
ಆರು ವರ್ಷಗಳ ಹಿಂದೆ ಸಂತ್ರಸ್ತೆ ಮದುವೆಯಾಗಿದ್ದು ಕಳೆದ ವರ್ಷ ಈಕೆಯ ಪತಿ ಸಾವನ್ನಪ್ಪಿದ್ದ. ಇದೀಗ ಸಂಬಂಧಿಯೊಬ್ಬನ ಜೊತೆ ಮರು ಮದುವೆ ಮಾಡಲು ಮಹಿಳೆಯ ಅತ್ತಿಗೆ ಪ್ರಯತ್ನಿಸುತ್ತಿದ್ದಳು ಎಂದು ತಿಳಿದು ಬಂದಿದೆ.
ಅತ್ತಿಗೆಯ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕಾಗಿ ಮನೆಗೆ ಧಾವಿಸಿ ನನ್ನ ಅಕ್ಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಕ್ಕನ ಮೂಗು, ನಾಲಿಗೆ ಕತ್ತರಿಸಲಾಗಿದ್ದು ಮಾತ್ರವಲ್ಲದೆ ಬಲಗೈ ಕೂಡ ಮುರಿದಿದ್ದಾರೆ. ಈ ನಡುವೆ ಆಕೆಯ ರಕ್ಷಣೆಗೆಂದು ಹೋದ ತನ್ನ ಅಮ್ಮನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾನೆ.
ಇದನ್ನೂ ಓದಿ: ಕಾಶ್ಮೀರದ ಕುಪ್ವಾರದಲ್ಲಿ ಭಾರೀ ಹಿಮಪಾತ: ಓರ್ವ ಯೋಧ ಸಾವು, ಇಬ್ಬರಿಗೆ ಗಾಯ
ಇದನ್ನೂ ಓದಿ: ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.