ನ.23 ರಿಂದ ಚಂದನ ವಾಹಿನಿಯಲ್ಲಿ 5-7ನೇ ತರಗತಿಗೆ ಸಂವೇದಾ ಇ-ಕ್ಲಾಸ್ ಆರಂಭ : ಸುರೇಶ್ ಕುಮಾರ್
Team Udayavani, Nov 18, 2020, 4:15 PM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ದೂರದರ್ಶನ ಚಂದನಾ ವಾಹಿನಿಯಲ್ಲಿ ನ.23 ರಿಂದ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಪ್ರಸಾರವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್-19 ಪ್ರಸರಣದ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕಾ ನಿರಂತರತೆಗಾಗಿ ಸಂವೇದಾ ತರಗತಿಗಳನ್ನು 5, 6 ಮತ್ತು 7ನೇ ತರಗತಿಗಳಿಗೂ ವಿಸ್ತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ.
5, 6 ಮತ್ತು 7ನೇ ತರಗತಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ ಹಾಗೂ ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳ ವಿಷಯಗಳಲ್ಲಿ ವಿಡಿಯೋ ಪಾಠಗಳ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ ಟಿ) ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಸರ್ಕಾರ ಅನುಮತಿ ನೀಡಿದರೂ ತೆರೆಯದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು
ತರಗತಿಗಳು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 8 ರಿಂದ 9.30 ಮತ್ತು ಸಂಜೆ 5.30 ರಿಂದ 6 ಗಂಟೆಯವರೆಗೆ ಪ್ರಸಾರವಾಗಲಿವೆ. ಪ್ರತಿ ದಿನ 4 ಪಾಠಗಳನ್ನು, ಪ್ರತಿ ಪಾಠ 30 ನಿಮಿಷಗಳ ಅವಧಿಯಂತೆ 2 ಗಂಟೆಗಳ ಕಾಲ ನಡೆಸಿಕೊಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ತರಗತಿಗಳು ನಿಗದಿತ ವೇಳಾಪಟ್ಟಿಯಂತೆ ಡಿ. 25 ರವರೆಗೆ 5 ವಾರಗಳ ಕಾಲ ನಡೆಯಲಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ಕಾರ್ಯಕ್ರಮದ ಅನುಪಾಲನೆ ಮಾಡಲಿದ್ದಾರೆ. ಈ ಪಾಠಗಳ ಕುರಿತಂತೆ ಆಯಾ ಜಿಲ್ಲೆಗಳ ಉಪನಿರ್ದೇಶಕರು ಮಕ್ಕಳಿಗೆ ತಲುಪುವಂತೆ ಹೆಚ್ಚಿನ ರೀತಿಯ ಪ್ರಚಾರ ಮಾಡಿ ಮಕ್ಕಳು ಸದುಪಯೋಗಪಡಿಸಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಸಂವೇದಾ ತರಗತಿಗಳು 8, 9 ಮತ್ತು 10ನೇ ತರಗತಿಗಳಿಗೆ ನಡೆಯುತ್ತಿರುವುದನ್ನು ಕೂಡಾ ಗಮನಿಸಬಹುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.