ಜಿಪಂ ಸೂಪರ್‌ಸೀಡ್‌ಗೆ ಶಿಫಾರಸು: ಎಚ್ಚರಿಕೆ

ಅಕ್ರಮ ಮದ್ಯಕಡಿವಾಣಕ್ಕೆ ಉಸ್ತುವಾರಿ ಸಚಿವ ಮಾಧುಸ್ವಾಮಿ ಸೂಚನೆ

Team Udayavani, Nov 18, 2020, 4:53 PM IST

ಜಿಪಂ ಸೂಪರ್‌ಸೀಡ್‌ಗೆ ಶಿಫಾರಸು: ಎಚ್ಚರಿಕೆ

ತುಮಕೂರು: ಜಿಪಂ ಸಾಮಾನ್ಯ ಸಭೆಯಲ್ಲಿ 500 ಕೋಟಿ ರೂ.ಗ ‌ಳಿಗೂ ಹೆಚ್ಚು ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ದೊರೆಯಬೇಕಾಗಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅನುಮೋದನೆನೀಡಬೇಕು ಇಲ್ಲದಿದ್ದರೆ ಜಿಪಂಗೆ ಸೂಪರ್‌ಸೀಡ್‌ಗೆ ಶಿಫಾರಸು ಮಾಡುವುದು ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದರು.

ನಗರದ ‌ ಜಿಪಂ  ಸ‌ಭಾಂಗ‌ಣದಲ್ಲಿ ಮಂಗಳವಾರ ‌ ಏರ್ಪಡಿಸಿದ ‌ 2ನೇ ತ್ರೆçಮಾಸಿಕ ‌ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಜಿಪಂ ಸಭೆ ನಡೆದು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಕ್ರಿಯಾ ಯೋಜನೆ ತಯಾರಿಸಲು ಅನುಮೋದನೆ ನೀಡದೇ ಇರುವುದು ಸ‌ರಿಯಲ್ಲ. ನ. 20ರಂದು ಜಿಪಂ ಸಾಮಾನ್ಯ ಸಭೆ ನಡೆಸಲು ನಿಗದಿಪಡಿಸಲಾಗಿದ್ದು, ಈ ಸ ಭೆಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಸಭೆಯಲ್ಲಿ ಹಾಜರಿದ್ದ ಶಾಸಕರಿಗೆ ಮನವಿ ಮಾಡಿದ‌ರು.

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಜಿಲ್ಲೆಯಲ್ಲಿ ಮದ್ಯದಂಗಡಿಯವರು ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕೈಬಿಡಲಾಗುತ್ತಿದೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕೆಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ತೊಗರಿ ಸೇರಿದಂತೆ ಮತ್ತಿತರ ಬೆಳೆ ಹಾನಿಯಾಗಿರುವ ಬಗ್ಗೆ ಶಾಸಕತಿಪ್ಪೇಸ್ವಾಮಿ ಅವರು ಸಚಿವರ ಗಮನ ಸೆಳೆದು, ಪರಿಹಾರ ಒದಗಿಸಬೇಕೆಂದರು. ಅಲ್ಲದೆ, ಎಣ್ಣೆಬೀಜ ಹಾಗೂ ಬೆಳೆಕಾಳುಗಳನ್ನು ಬೆಳೆಯಲು ಹೆಚ್ಚಿನ ಆದ್ಯತೆ ನೀಡಬೇಕೆಂದು ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನಾ ಅವರಿಗೆ ತಿಳಿಸಿದರು.

ಜಿಲ್ಲೆಯಎಲ್ಲ ತಾಲೂಕು ಸಾರ್ವಜನಿಕಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆರಿಗೆ ಮಾಡಿಸಬೇಕು ಅಲ್ಲಿ ನೊಂದಣಿಯಾಗಿರುವ ಸಂಖ್ಯೆ ಎಷ್ಟು ಹೆರಿಗೆ ಆಗಿರುವುದು ಎಷ್ಟು ಎಂದು ಪ್ರಶ್ನಿಸಿ ಪ್ರತಿ ತಿಂಗಳು ಆರೋಗ್ಯ ಶಿಬಿರವನ್ನು ಏರ್ಪಡಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗೆ ನಿರ್ದೇಶಿಸಿದರು.

ವಿಧಾನಪರಿಷತ್‌ ಶಾಸಕ ತಿಪ್ಪೇಸ್ವಾಮಿ ಮಾತನಾಡಿ,ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ನೋಂದಣಿ ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ಸಚಿವರಿಗೆ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಸಚಿವರು ಕಾರ್ಮಿಕರಕಲ್ಯಾಣ ಯೋಜನೆಗಳ ಬಗ್ಗೆ ಜನ ಜಾಗೃತಿ ಮೂಡಿಸಬೇಕಲ್ಲದೆ ನೋಂದಾಯಿತ ಗುತ್ತಿಗೆದಾರರಿಂದ ಕಟ್ಟಡ ಕಾರ್ಮಿಕರು ಹಾಗೂ ಗಾರೆ ಕೆಲಸಗಾರರ ಮಾಹಿತಿ ಪಡೆದು ಕಾರ್ಮಿಕರ ನೋಂದಣಿಗೆ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಯಾಂಕಿನಲ್ಲಿ ರೈತರಿಗೆ ಸಾಲ ನೀಡುವಾಗ ಸಾಲದ ಅರ್ಜಿಯ ಮೇಲೆ ನಿರ್ದೇಶಕರ ಸಹಿಯನ್ನು ಪಡೆಯಲೇಬೇಕೆಂಬ ನಿಯಮ  ವನ್ನು ಕೈಬಿಡಲು ಪಿಕಾರ್ಡ್‌ ಬ್ಯಾಂಕ್‌ಗಳಿಗೆ ಸೂಚನೆ ನೀಡಬೇಕು ಎಂದು ಕಾಸ್ಕರ್ಡ್‌ ಬ್ಯಾಂಕಿನ  ಜಿಲ್ಲಾ ವ್ಯಸ್ಥಾಪಕರಿಗೆ ಸಚಿವರು ನಿರ್ದೇಶನ ‌ ನೀಡಿದರು.

ಜಲಜೀವನ್‌ ಮಿಷನ್‌ ಕಾರ್ಯಕ್ರಮದಡಿ ಮೊದಲ ಹಂತವಾಗಿ ಓವರ್‌ ಹೆಡ್‌ ಟ್ಯಾಂಕ್‌ ಇರುವ ಹಳ್ಳಿಗಳ ಪ್ರತಿಯೊಂದು ಮನೆ-ಮನೆಗೂ  ನ‌ಲ್ಲಿಗಳ ಮೂಲಕ ನೀರು  ಸರ‌ಬರಾಜು ಮಾಡಲಾಗುವುದು. ಇಂತಹ ಹಳ್ಳಿಗಳನ್ನು ಗುರುತಿಸುವಂತೆ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ  ನೀಡಿದರು.

ತುಮಕೂರು ಜಿಲ್ಲೆಯಲ್ಲಿ ನಿವೇಶನ ರಹಿತರಿಗೆನಿವೇಶನಕಲ್ಪಿಸಲುಕೈಗೊಂಡಿರುವಕ್ರಮಗಳ ಮಾಹಿತಿ ನೀಡುವಂತೆ ಸಂಸದ ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಪೊದೆಗಳ ನಿವಾರಣೆಗೆ ಕ್ರಿಯಾಯೋಜನೆ: ಜಿಲ್ಲೆಯಲ್ಲಿ ಚಿರತೆಗಳು ಜನ-ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳ ಬಗ್ಗೆ ಕುಣಿಗಲ್‌ ಶಾಸಕ ರಂಗನಾಥ್‌ ಹಾಗೂ ತುರುವೇಕೆರೆ ಶಾಸಕ ಜಯರಾಮ್‌ ಅವರು ಸಭೆಯಲ್ಲಿ ಸಚಿವರ ಗಮನ ಸೆಳೆದರು.

ಚಿರತೆ ಹಾವಳಿ ಇರುವ ಪ್ರದೇಶಗಳಲ್ಲಿ ಬೆಳೆದಿರುವ ಪೊದೆ(ಜಂಗಲ್‌)ಗಳನ್ನು ತೆರವುಗೊಳಿಸಲು ಗ್ರಾಪಂಗಳು ಕ್ರಿಯಾ ಯೋಜನೆ ರೂಪಿಸಬೇಕು. ಅಲ್ಲದೆ ಹಿಡುವಳಿ ಜಮೀನಿನಲ್ಲಿರುವ ಪೊದೆಗಳನ್ನು ಜಮೀನಿನ ಮಾಲೀಕರು ತೆರವುಗೊಳಿಸಬೇಕು. ಒಂದು ವೇಳೆ ತೆರವುಗೊಳಿಸದಿದ್ದಲ್ಲಿ ಕಂದಾಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಿಇಓಗಳಿಗೆ ಸೂಚನೆ ನೀಡಿದರು.

ಜಲಜೀವನ್‌ ಮಿಷನ್‌ ಯೋಜನೆಯಡಿ ಜಿಲ್ಲೆಯ ಶಾಲೆ, ಅಂಗನವಾಡಿ, ಆಶ್ರಯ ಮತ್ತು ವಸತಿಶಾಲೆಗಳಿಗೆಕೊಳವೆ ನೀರು ಸಂಪರ್ಕ ಕಲ್ಪಿಸುವ ವಿಶೇಷ ಆಂದೋಲನಕ್ಕೆ ಸಚಿವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಸಭೆಯಲ್ಲಿಸಂಸದನಾರಾಯಣಸ್ವಾಮಿ,ಶಾಸಕರಾದ ಜ್ಯೋತಿಗಣೇಶ್‌, ಮಸಾಲಾ ಜಯರಾಂ,ಡಾ ರಾಜೇಶ್‌ ಗೌಡ, ಡಾ. ರಂಗನಾಥ್‌, ಬೆಮೆಲ್‌ ಕಾಂತರಾಜ್‌,ಚಿದಾನಂದ ಗೌಡ, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ಇತರರಿದ್ದರು.

ಭೂ ಸ್ವಾಧೀನಕ್ಕೆ ಪರಿಹಾರಕಂಡುಕೊಳ್ಳಿ :  ಎತ್ತಿನ ಹೊಳೆ ಯೋಜನೆಯ ಸರ್ವೆ ಕಾರ್ಯ ನಡೆಯುತ್ತಿದ್ದು, ಮುಂಬರುವ ಜನವರಿ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜಂಟಿ ಸರ್ವೆ ಇನ್ನೊಂದು ವಾರದಲ್ಲಿ ಮುಗಿಯಲಿದೆ ಎಂದು ವಿಶೇಷ ಭೂಸ್ವಾಧೀನ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಿಪಟೂರು ತಾಲೂಕಿನ ನಾಲ್ಕು ಹಳ್ಳಿ ಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಿದೆ.ಇದನ್ನು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ತುಮಕೂರು-ರಾಯದುರ್ಗ,ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಬೇಗ ಭೂ ಸ್ವಾಧೀನಪಡಿಸಿಕೊಂಡು ಹಸ್ತಾಂತರ ಮಾಡಬೇಕು. ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನಕ್ಕೆ ಯಾವುದೇ ಹಣದ ಕೊರತೆ ಇಲ್ಲ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.