ಭೈರಾಮಡಗಿಯಲ್ಲಿ ಅಂಬೇಡ್ಕರ್ ‌ಪಂಚ ಲೋಹ ಮೂರ್ತಿ ಸ್ಥಾಪನೆ


Team Udayavani, Nov 18, 2020, 5:03 PM IST

ಭೈರಾಮಡಗಿಯಲ್ಲಿ ಅಂಬೇಡ್ಕರ್ ‌ಪಂಚ ಲೋಹ ಮೂರ್ತಿ ಸ್ಥಾಪನೆ

ಕಲಬುರಗಿ: ರಾಷ್ಟ್ರ ನಾಯಕರನ್ನು ಹಾಗೂ ತತ್ವಜ್ಞಾನಿಗಳನ್ನು ವರ್ಗಕ್ಕೆ ಹಾಗೂ ಪ್ರಾದೇಶಿಕತೆಗೆ ಸಿಮೀತ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದರು.

ಅಫಜಲಪುರ ತಾಲೂಕಿನ ಭೈರಾಮಡಗಿ ಗ್ರಾಮದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ಅವರ ನೂತನ ಪಂಚಲೋಹದ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು. ಬುದ್ಧ, ಬಸವ, ಅಂಬೇಡ್ಕರ್‌, ರವೀಂದ್ರನಾಥ ಟ್ಯಾಗೋರ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಸೇರಿದಂತೆ ಇತರರನ್ನು ಅವರ ವರ್ಗಕ್ಕೆ ಹಾಗೂ ಆಯಾ ಭಾಗಕ್ಕೆ ಸಿಮೀತ ಮಾಡಲಾಗಿದೆ ಎಂದರು.

ಬುದ್ಧನ ತತ್ವ ತಿಳಿದುಕೊಂಡರೆ, ಬಸವಣ್ಣ ಹೇಳಿದ ಮಾತು ಕೇಳಿದ್ದರೆ ಹಾಗೂ ಡಾ| ಅಂಬೇಡ್ಕರ್‌ ರಚಿಸಿದ ಸಂವಿಧಾನಸಮರ್ಪಕವಾಗಿ ಅನುಷ್ಠಾನಗೊಂಡಿದ್ದರೆ ದೇಶದಲ್ಲಿಂದು ಒಡಕಿನ ಮಾತುಗಳುಕೇಳಿ ಬರುತ್ತಿರಲಿಲ್ಲ. ಆದ್ದರಿಂದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಶಾಸಕ ಎಂ.ವೈ. ಪಾಟೀಲ ಮಾತನಾಡಿ, ಡಾ| ಅಂಬೇಡ್ಕರ್‌ ಪ್ರತಿಮೆ ಸಾರ್ಥಕತೆ ಪಡೆಯಬೇಕಾದರೆ ಅವರ ತತ್ವಗಳನ್ನುಅನುಸರಿಸಿದಾಗ ಮಾತ್ರ ಸಾಧ್ಯ. ಲೋಕಸಭೆ ಚುನಾವಣೆಯಲ್ಲಿ ಹಿರಿಯ ನಾಯಕ ಡಾ|ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ದೊಡ್ಡ ಅನ್ಯಾಯ ಮಾಡಿಕೊಂಡಿದ್ದೇವೆ. ಗೆದ್ದಿದ್ದರೆಈ ಭಾಗಕ್ಕೆ ಹಲವು ಅಭಿವೃದ್ಧಿ ಕಾರ್ಯಗಳು ಬರುತ್ತಿದ್ದವು ಎಂದರು.

ಸಾನ್ನಿಧ್ಯ ವಹಿಸಿದ್ದ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಮಹಾ ಸ್ವಾಮೀಜಿ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್‌ ಒಂದು ವರ್ಗಕ್ಕೆಸಿಮೀತವಾಗಿಲ್ಲ. ಬುದ್ಧ ಶಾಂತಿ-ಸಮಾಧಾನಕಲಿಸಿದ್ದರೆ, ಬಸವಣ್ಣ ಸಮಾಜಕ್ಕೆ ಕ್ರಾಂತಿ ನೀಡಿದ್ದರೆ, ಡಾ| ಅಂಬೇಡ್ಕರ್‌ ಜಾÒನದೀಪ ಹಚ್ಚಿದ್ದಾರೆ. ಇವರ ತತ್ವ, ಮಾರ್ಗದರ್ಶನ ಎಲ್ಲ ವರ್ಗಕ್ಕೆ ಸಂಬಂಧಿಸಿದೆಯಲ್ಲದೇ ಇಡೀ ಮಾನವ ಸಂಕುಲಕ್ಕೆ ಜ್ಞಾನದೀವಿಗೆಯಾಗಿದೆ ಎಂದರು.

ಸಮಾಜ ಸೇವಕ ಜೆ.ಎಂ. ಕೊರಬು ಮಾತನಾಡಿ, ಚುನಾವಣೆಯಲ್ಲಿ ಅನ್ಯ ವಿಷಯಗಳತ್ತ ಗಮನ ಕೊಡದೇ ಅಭಿವೃದ್ಧಿ ವಿಷಯಗಳ ಗಮನ ಕೊಟ್ಟಿದ್ದೆಯಾದರೆ ಸರ್ವ ನಿಟಿxನಲ್ಲೂ ಅಭಿವೃದ್ಧಿ ಆಗುತ್ತದೆ ಎಂದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಮಾತನಾಡಿ, ಸರ್ಕಾರ ಅತಿವೃಷ್ಟಿಗೆ ಪರಿಹಾರವಾಗಿ ನಯಾ ಪೈಸೆ ಕೊಟ್ಟಿಲ್ಲ ಎಂದು ಹೇಳಿದರು. ವಿಧಾನ ಪರಿಷತ್‌ ಮಾಜಿ ಸದಸ್ಯತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಶೋಷಿತರು ತೀವ್ರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಕಷ್ಟಕ್ಕೆ ನಾಂದಿ ಹಾಡಬೇಕೆಂದರು.

ಜಿ.ಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ತಾ.ಪಂ ಉಪಾಧ್ಯಕ್ಷ ಸಿದ್ಧರಾಮ ಹೊನ್ನಿಕೇರಿ, ಶಿವಕುಮಾರ ನಾಟಿಕಾರ, ಮಹಾಂತೇಶ ಪಾಟೀಲ, ಗುರುಶಾಂತ ಪಟ್ಟೇದಾರ, ರಾಜಕುಮಾರ ಕಪನೂರ, ರಾಜೇಂದ್ರ ಪಾಟೀಲ, ಜಿ.ಪಂ ಸದಸ್ಯರಾದ ಶರಣಗೌಡ ಪಾಟೀಲ, ವಿ.ಕೆ.  ಸಲಗರ, ದಿಲೀಪ ಪಾಟೀಲ, ಸಿದ್ದರಾಮ ಪ್ಯಾಟಿ, ಶಿವಾನಂದ ಪಾಟೀಲ ಮರತೂರ, ಪ್ರಮುಖರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ, ಡಾ| ಎಂ.ಎಸ್‌. ಜೋಗದ ಮುಂತಾದವರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಶರಣ ಗೌಡ ಪಾಟೀಲ ಪ್ರಾಸ್ತಾವಿಕ ಮಾತನಾಡಿ, ಡಾ| ಅಂಬೇಡ್ಕರ್‌ ಜೀವನ ಚರಿತ್ರೆಯನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು ಎಂದರು. ಶರಣಬಸಪ್ಪ ಚಕ್ರವರ್ತಿ ನಿರೂಪಿಸಿದರು. ಮಚೇಂದ್ರ ಎಸ್‌. ಅಳ್ಳಗಿ ನಿರೂಪಿಸಿದರು.

ಟಾಪ್ ನ್ಯೂಸ್

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.