ನಾಗಮಾರಪಳ್ಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ
Team Udayavani, Nov 18, 2020, 5:14 PM IST
ಬೀದರ: ನಗರದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ 67ನೇ ಅಖೀಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಇರುವ ಉಮಾಕಾಂತನಾಗಮಾರಪಳ್ಳಿ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದವರೆಗಿನ ವಿವಿಧ ಹುದ್ದೆ ಸಮರ್ಥವಾಗಿ ನಿಭಾಯಿಸಿದ್ದಾರೆ.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ, ರಾಜ್ಯಸಹಕಾರ ಮಹಾಮಂಡಳ ನಿರ್ದೇಶಕ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಎರಡನೇ ಅವಧಿ ಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಸಹಕಾರ ವಸತಿ ಮಹಾಮಂಡಳ ನಿರ್ದೇಶಕಹಾಗೂ ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಸಹಕಾರ ಚಳವಳಿ ಬಲಗೊಳಿಸಲು ಹಾಗೂ ಜಿಲ್ಲೆಯ ಜನರ ಅರ್ಥಿಕ ಮಟ್ಟ ಸುಧಾರಿಸಲು ಅವಿರತ ಶ್ರಮಿಸುತ್ತಿದ್ದಾರೆ. ತಂದೆ ಹಾಕಿಕೊಟ್ಟ ದಾರಿಯಲ್ಲೇ ಡಿಸಿಸಿ ಬ್ಯಾಂಕ್ ಯಶಸ್ವಿಯಾಗಿಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸಲು ಎಟಿಎಂ ಹೊಂದಿರುವ ಸುಸಜ್ಜಿತ ಮೊಬೈಲ್ ಬ್ಯಾಂಕಿಂಗ್ ವ್ಯಾನ್, ಎಟಿಎಂ ಸೇವೆ ಶುರು ಮಾಡಿದ ಶ್ರೇಯಸ್ಸು ಉಮಾಕಾಂತ ನಾಗಮಾರಪಳ್ಳಿ ಅವರಿಗೆ ಸಲ್ಲುತ್ತದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬ್ಯಾಂಕ್ ದೇಶದ ಸಹಕಾರ ಬ್ಯಾಂಕ್ಗಳಲ್ಲೇ ಮೊದಲ ಸ್ಥಾನದಲ್ಲಿರುವುದು ಅವರ ರೈತ ಸ್ನೇಹಿ ಕಾರ್ಯಕ್ಕೆ ಹಿಡಿದ ಕೈಗನ್ನಡಿ.
ಗಣ್ಯರ ಉಪಸ್ಥಿತಿ: ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ, ನಗರಾಭಿವೃದ್ಧಿ ಸಚಿವ ಭೈರತಿಬಸವರಾಜ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
ಸಹಕಾರ ಸಚಿವರ ಪ್ರಶಂಸೆ : ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ಕಾರ್ಯಶೈಲಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಉಮಾಕಾಂತ ಅವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಲಬುರ್ಗಿ ವಿಭಾಗದಲ್ಲೇ ಬೀದರನಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಮಾದರಿಯಾಗಿ ಸಂಘಟಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.