ಬೆಳೆ ವಿಮೆ ಪ್ರಚಾರ ವಾಹನ ತಡೆದು ಆಕ್ರೋಶ

Team Udayavani, Nov 18, 2020, 7:30 PM IST

gadaga-tdy-1

ಲಕ್ಷ್ಮೇಶ್ವರ: ಹಿಂಗಾರು ಹಂಗಾಮಿನ ಬೆಳೆ ವಿಮೆ ಪಾವತಿ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ವಾಹನವನ್ನು ಮಂಗಳವಾರ ಲಕ್ಷ್ಮೇಶ್ವರದ ಕೃಷಿ ಇಲಾಖೆ ಕಚೇರಿ ಮುಂದೆ ರೈತರು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿತು.

ಕರ್ನಾಟಕ ರೈತ ಸುರûಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯ ಹಿಂಗಾರುಬೆಳೆಗಳ ಪ್ರಚಾರಾರ್ಥವಾಗಿ ಆಗಮಿಸಿದ್ದ ವಾಹನ ಹಾಗೂ ವಿಮಾ ಕಂಪನಿಯ ಪ್ರತಿನಿ ಧಿಯನ್ನು ತಡೆದು ನಿಲ್ಲಿಸಿದರು. ರೈತರಿಂದ ಬೆಳೆ ವಿಮೆ ಕಂತು ಮಾತ್ರ ತುಂಬಿಸಿಕೊಳ್ಳುವ ಕಂಪನಿಗಳು ರೈತರಿಗೆ ನಷ್ಟವಾದಾಗ ಪರಿಹಾರ ಕೊಡುವುದಿಲ್ಲ. ಬೆಳೆ ವಿಮೆ ಪಾವತಿಸಿದ ರೈತರು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಈಗ ಮತ್ತೆ ಬರಿಗೈಯಲ್ಲಿರುವ ರೈತರ ಮನವೊಲಿಸಿ, ಸಾಲಗಾರರನ್ನಾಗಿಸಿ ವಿಮೆ ಪಾವತಿಸಿಕೊಳ್ಳುವ ಕಂಪನಿಗಳ ಬಗ್ಗೆ ಭರವಸೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕು ಪಕ್ಷಾತೀತ ರೈತಪರ ಹೋರಾಟ ವೇದಿಕೆ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಮಾತನಾಡಿದರು. ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿ ರೈತರ ಸಮಸ್ಯೆಗಳಿಗೆ ಜಿಲ್ಲಾ ಮಟ್ಟದಲ್ಲಿ ಕೃಷಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಮೊದಲೇ ಹಲವಾರು ಸಂಕಷ್ಟಗಳಿಂದ ನೊಂದಿರುವ ರೈತರ ಜತೆ ಅಧಿಕಾರಿಗಳು ಸಹಾನುಭೂತಿಯಿಂದ ವರ್ತಿಸಬೇಕು ಮತ್ತು ಸೂಕ್ತ ಮಾಹಿತಿ ನೀಡಬೇಕು ಎಂದು ರೈತ ಶಿವಾನಂದ ಲಿಂಗಶೆಟ್ಟಿ ಆಗ್ರಹಿಸಿದರು.

ಈ ವೇಳೆ ರೈತರಾದ ಶ್ರೀಕಾಂತ ವಾಲ್ಮೀಕಿ, ರಾಮಣ್ಣ ಫಲದಡ್ಡಿ, ಹನುಮಂತಪ್ಪ ವಾಲ್ಮೀಕಿ, ಕರೆಯಪ್ಪ ಹುರಕನವರ, ಸುರೇಶ ಕುಂದಳ್ಳಿ, ಮಂಜುನಾಥ ಭಾವಿಕಟ್ಟಿ, ಪರಮೇಶಪ್ಪ ಕಿತ್ತಲಿ, ಟಾಕಪ್ಪ ಸಾತಪೂತೆ, ಖಾನಸಾಬ ಸೂರಣಗಿ ಸೇರಿ ಅನೇಕ ರೈತರಿದ್ದರು. ವಿಮಾ ಕಂಪನಿ ತಾಲೂಕು ಪ್ರತಿನಿಧಿ ಮಹಾಂತೇಶ ಪ್ರಭಯನ್ನವರಮಠ, ಕೃಷಿ ಅಧಿಕಾರಿ ಎನ್‌. ಎಚ್‌.ಹಣಗಿ ರೈತರಿಗೆ ಮಾಹಿತಿ ನೀಡಿದರು.

ಈಗಾಗಲೇ ಜಿಲ್ಲೆಯ ಬಹುತೇಕ ರೈತರಿಗೆ ಹಿಂದಿನ ವರ್ಷಗಳ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಜಮೆಯಾಗಿದೆ. ವಿಮೆ ಪಾವತಿ ಕಡ್ಡಾಯವಲ್ಲ. ಆದರೆ ರೈತರ ಹಿತದೃಷ್ಟಿಯಿಂದ ಸೂಕ್ತ ಮಾಹಿತಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ವಿಮೆ ಪಾವತಿ ಮತ್ತು ವಿಮೆ ಪರಿಹಾರದ ಬಗ್ಗೆ ರೈತರಿಗೆ ಸರಿಯಾದ ಮಾಹಿತಿ ಕೊರತೆಯಿಂದ ಸಮಸ್ಯೆ ಉಂಟಾಗುತ್ತವೆ. ಈ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡಲಾಗುವುದು. –ರುದ್ರೇಶಪ್ಪ ಟಿ.ಎಸ್‌., ಜಂಟಿ ಕೃಷಿ ನಿರ್ದೇಶಕ

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Waqf

Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.