ದ್ವಿತೀಯ ಭಾಷೆಯಾಗಿ ಕನ್ನಡ ಬೋಧಿಸಿ: ನಾಗಾಭರಣ
Team Udayavani, Nov 18, 2020, 10:06 PM IST
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಶೈಕ್ಷಣಿಕ ಸಂಸ್ಥೆಗಳು 2015ರ ಕನ್ನಡ ಭಾಷಾ ಕಲಿಕಾ ಅಧಿ ನಿಯಮದಂತೆ ಕನ್ನಡವನ್ನು ದ್ವಿತೀಯ ಭಾಷೆಯಾಗಿ ಬೋಧಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ ಅವರು ತಾಕೀತು ಮಾಡಿದರು.
ಆಡಳಿತದಲ್ಲಿ ಸಂಪೂರ್ಣ ಕನ್ನಡ ಅನುಷ್ಠಾನ ಕುರಿತಂತೆ ಬುಧವಾರ ವಿಧಾನಸೌಧದಲ್ಲಿ ಕೇಂದ್ರೀಯ ವಿದ್ಯಾಲಯ ಸಂಘಟನೆಯೊಂದಿಗೆ ವರ್ಚುವಲ್ ಸಭೆ ನಡೆಸಿದ ಅವರು, ರಾಜ್ಯದ ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಕಡೆಗಣಿಸುವುದು ಸರಿಯಲ್ಲ ಎಂದರು.
ಕೇಂದ್ರೀಯ ವಿದ್ಯಾಲಯಕ್ಕೆ ಸೇರುವ ಮಕ್ಕಳಲ್ಲಿ ಕನ್ನಡ ಕಲಿಯುವ ಆಸಕ್ತಿಯಿದ್ದರೂ ಬಲವಂತವಾಗಿ ಹಿಂದಿ, ಸಂಸ್ಕೃತವನ್ನು ಕಲಿಯಲು ಪ್ರೋತ್ಸಾಹಿಸುತ್ತಿರುವ ಕ್ರಮ ಒಳ್ಳೆಯದಲ್ಲ ಎಂದರು. ಶಿಕ್ಷಣ ತಜ್ಞ ಡಾ| ವಿ. ಪಿ. ನಿರಂಜನಾ ರಾಧ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ| ಕೆ. ಮುರಳೀಧರ, ಕೇಂದ್ರೀಯ ವಿದ್ಯಾಲಯ ಸಂಘಟನೆಯ ಉಪ ಆಯುಕ್ತರಾದ ಡಾ| ಎನ್. ವಸಂತ್, ಅಧ್ಯಕ್ಷರ ಅಪ್ತ ಕಾರ್ಯದರ್ಶಿ ಡಾ| ವೀರಶೆಟ್ಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.