![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 19, 2020, 8:30 AM IST
ಶ್ರೀನಗರ: ಜಮ್ಮುವಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಸ್ಥಳದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭಾರತೀಯ ಸೇನೆ ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ಶೋಧ ಕಾರ್ಯಾಚರಣೆ ನಡೆಸಿದರು.
ಭದ್ರತಾ ಪಡೆಗಳು ಬಾನ್ ಟೋಲ್ ಪ್ಲಾಜಾ ಬಳಿ ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್ ಕೌಂಟರ್ ಆರಂಭಿಸಿದೆ.
ಇದನ್ನೂ ಓದಿ:ಪುಲ್ವಾಮಾದಲ್ಲಿ ಉಗ್ರರಿಂದ ಸೇನೆಯ ಮೇಲೆ ಗ್ರೆನೇಡ್ ದಾಳಿ: ತಪ್ಪಿದ ಗುರಿ, 12 ನಾಗರಿಕರಿಗೆ ಗಾಯ
ಬಾನ್ ಟೋಲ್ ಪ್ಲಾಜಾ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್ಲಾ 4 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ನಾಗ್ರೋಟಾದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.