ಆನ್ ಲೈನ್ ಆರ್ಡರ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ತಾಜಾ ಮೀನು; ಬರಲಿದೆ ಹೊಸ ಆ್ಯಪ್
Team Udayavani, Nov 19, 2020, 2:21 PM IST
ಬೆಂಗಳೂರು: ಇನ್ನು ಮುಂದೆ ತಾಜಾ ಮೀನು ಖರೀದಿಸಲು ಮಾರುಕಟ್ಟೆಗೆ ಹೋಗಬೇಕಾಗಿಲ್ಲ, ಆನ್ ಲೈನ್ ಮೂಲಕ ಆರ್ಡರ್ ಮಾಡಿದರೆ ಸಾಕು ಮನೆ ಬಾಗಿಲಿಗೆ ತಾಜಾ ಮೀನು ಬರಲಿದೆ. ಇಂತದ್ದೊಂದು ಆ್ಯಪ್ ಅನ್ನು ಮೀನುಗಾರಿಕೆ ಇಲಾಖೆ ಸಿದ್ದಪಡಿಸಿದೆ.
ಬಂದರು ಮತ್ತು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ಆನ್ ಲೈನ್ ಮುಖಾಂತರ ಆರ್ಡರ್ ಮಾಡಿದರೆ ಮನೆ ಬಾಗಿಲಿಗೆ ಮೀನು ತಂದುಕೊಡುವ ಯೋಜನೆ ರೂಪಿಸಲಾಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ:ಡಿಕೆಶಿ ಪುತ್ರಿ ಐಶ್ವರ್ಯ- ಸಿದ್ದಾರ್ಥ ಹೆಗಡೆ ಪುತ್ರ ಅಮರ್ಥ್ಯ ನಿಶ್ಚಿತಾರ್ಥ ಸಂಭ್ರಮ
ಈ ಬಗ್ಗೆ ಈಗಾಗಲೇ ಅಪ್ ಸಿದ್ದ ಪಡಿಸಲಾಗುತ್ತಿದೆ. ನವೆಂಬರ್ 21 ರಂದು ಮತ್ಸ್ಯ ಸಂಪದ ಕಾರ್ಯಗಾರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.
ಹೆಸರುಘಟ್ಟದಲ್ಲಿರುವ ಮೀನುಗಾರಿಕೆ ಸಾಕಾಣಿಕೆ ಕೇಂದ್ರದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಮೀನು ಕ್ವಾರೈಂಟ್ನ್ ಕೇಂದ್ರ ಸ್ಥಾಪಿಸಲಾಗಿದೆ. ಇಲ್ಲಿ ವಿದೇಶದ ಬಣ್ಣದ ಮೀನು ಸಾಕಾಣಿಕೆ ಮಾಡಲಾಗುವುದು. ವಿದೇಶದಿಂದ ಆಮದು ಮಾಡಿದ ಮೀನನ್ನು ಒಂದು ವಾರ ಪ್ರತ್ಯೇಕವಾಗಿಟ್ಟು ರೋಗ ಮುಕ್ತವೆಂದು ನಿರ್ಧರಿಸಿದ ನಂತರ ಸಾಕಾಣಿಕೆ ಮಾಡಲಾಗುತ್ತದೆ. ಈ ವ್ಯವಸ್ಥೆ ಚೆನ್ನೈನಲ್ಲಿ ಮಾತ್ರ ಇತ್ತು. ಈಗ ನಮ್ಮ ರಾಜ್ಯಕ್ಕೂ ವಿಸ್ತರಣೆಯಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.