KPSC ಮತ್ತುUPSC ಅಭ್ಯರ್ಥಿಗಳಿಗೆ ಸಿಹಿಸುದ್ದಿ: ಮುಖ್ಯ ಪರೀಕ್ಷೆ ಮುಂಡೂಡಿದ ರಾಜ್ಯ ಸರ್ಕಾರ
Team Udayavani, Nov 19, 2020, 4:17 PM IST
ಬೆಂಗಳೂರು: ಕೆ.ಪಿ.ಎಸ್.ಸಿ ಹಾಗೂ ಯು.ಪಿ.ಎಸ್.ಸಿ ಎರಡೂ ಪರೀಕ್ಷೆಗಳು ಒಂದೇ ಸಮಯದಲ್ಲಿ ನಿಗದಿಪಡಿಸಿದ ಹಿನ್ನೆಲೆ ಪರೀಕ್ಷಾ ಅಭ್ಯರ್ಥಿಗಳಲ್ಲಿ ಗೊಂದಲ ಮನೆಮಾಡಿತ್ತು. ಪರೀಕ್ಷೆಯ ತಯಾರಿ ಕುರಿತಾಗಿಯೂ ಸಮಸ್ಯೆ ತಲೆದೋರಿತ್ತು. ಇದೀಗ ಈ ಎಲ್ಲಾ ಗೊಂದಲಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಹಿಂದೆ 2020 ರ ಡಿಸೆಂಬರ್ 21 ರಿಂದ 24 ಮತ್ತು ಜನವರಿ 2 ರಿಂದ 5 ರ ವರೆಗೆ ನಿಗದಿ ಪಡಿಸಲಾಗಿದ್ದ ಕೆ.ಪಿ.ಎಸ್.ಸಿ ಪರೀಕ್ಷೆಯನ್ನು ಫೆಬ್ರವರಿ 13 ರ ರಿಂದ16 ರ ವರೆಗೆ ನಡೆಸುವಂತೆ ಆದೇಶ ಹೊರಡಿಸಿದೆ. ಹಾಗೆಯೇ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳು 2021ರ ಜನವರಿ 8 ರಿಂದ 10ರ ವರೆಗೆ ಹಾಗೂ 16 ಮತ್ತು 17 ರಂದು ನಡೆಯಲಿವೆ.
ಯು.ಪಿ.ಎಸ್.ಸಿ ಪರೀಕ್ಷೆಗಳಿಗೆ ತಯಾರಿ ನಡೆಸುವವರು ಜೊತೆ ಜೊತೆಗೆ ಕೆ.ಪಿ.ಎಸ್.ಸಿ ಪರೀಕ್ಷೆಗಳಿಗೂ ತಯಾರಿ ನಡೆಸುತ್ತಿರುತ್ತಾರೆ. ಇಲ್ಲಿ ಎರಡೂ ಪರೀಕ್ಷೆಗಳ ತಯಾರಿ ಬೇರೆ ಬೇರೆ ರೀತಿಯದ್ದಾಗಿರುತ್ತದೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ನಿಗದಿಪಡಿಸಬೇಕಾಗಿ ಆಭ್ಯರ್ಥಿಗಳು ಒತ್ತಾಯಿಸಿದ್ದರು. ಇದೀಗ ಅಭ್ಯರ್ಥಿಗಳ ಒತ್ತಾಯಕ್ಕೆ ಮಣಿದ ಸರ್ಕಾರ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.