ಗುಜರಾತ್-ಕೋವಿಡ್ ಎಫೆಕ್ಟ್: ಅಹಮದಾಬಾದ್ ನಲ್ಲಿ ನ.20ರಿಂದ 23ರವರೆಗೆ ರಾತ್ರಿ ಕರ್ಫ್ಯೂ ಜಾರಿ
ಹಾಲು ಮತ್ತು ಔಷಧ ಮಾರಾಟ ಹೊರತುಪಡಿಸಿ ಉಳಿದೆಲ್ಲವೂ ಅಹಮದಾಬಾದ್ ನಲ್ಲಿ ಬಂದ್
Team Udayavani, Nov 20, 2020, 11:16 AM IST
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಕೋವಿಡ್ 19 ಸೋಂಕಿನ ಪ್ರಮಾಣ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರದಿಂದಲೇ (ನವೆಂಬರ್ 20, 2020) ಜಾರಿಗೆ ಬರುವಂತೆ ಅಧಿಕಾರಿಗಳು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.
ನವೆಂಬರ್ 20ರ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರಲಿದೆ. ಇದು ನವೆಂಬರ್ 23ರ ಬೆಳಗ್ಗೆ 6ಗಂಟೆವರೆಗೆ ಮುಂದುವರಿಯಲಿದ್ದು, ಸುಮಾರು 57 ಗಂಟೆಗಳ ಮ್ಯಾರಥಾನ್ ಕರ್ಫ್ಯೂ ಜಾರಿಗೊಳಿಸಲು ಅಧಿಕಾರಿಗಳು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಗುಪ್ತಾ ರಾತ್ರಿ ಕರ್ಫ್ಯೂ ಅವಧಿ ಬಗ್ಗೆ ಟ್ವೀಟರ್ ನಲ್ಲಿ ಘೋಷಿಸಿದ್ದು, ಹಾಲು ಮತ್ತು ಔಷಧ ಮಾರಾಟ ಹೊರತುಪಡಿಸಿ ಉಳಿದೆಲ್ಲವೂ ಅಹಮದಾಬಾದ್ ನಲ್ಲಿ ಬಂದ್ ಎಂದು ತಿಳಿಸಿದ್ದಾರೆ.
ಅಹಮದಾಬಾದ್ ನಗರದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು 300 ವೈದ್ಯರನ್ನು ಹಾಗೂ 300 ವೈದ್ಯಕೀಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ. ಅಹಮದಾಬಾದ್, ಸಾಬರಮತಿ, ಚಾಂದ್ ಖೇಡಾ ಮತ್ತು ಮೋಟೇರಾ ಪ್ರದೇಶದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.