ನಿಯಮಗಳ ಉಲ್ಲಂಘನೆ: ಪಕ್ಷಗಳ ಪಟ್ಟಿ ಕೇಳಿದ ಹೈಕೋರ್ಟ್
ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿರುವುದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಹೈ ಅಸಮಾಧಾನ
Team Udayavani, Nov 20, 2020, 12:06 PM IST
ಬೆಂಗಳೂರು: ರಾಜಕೀಯ ಪಕ್ಷಗಳು ರ್ಯಾಲಿ ಹಾಗೂ ಕಾರ್ಯಕ್ರಮಗಳಲ್ಲಿ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಅರ್ಜಿಯಲ್ಲಿ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.
ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಸೇರಿ ಕೋವಿಡ್ -19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿ ಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಲೆಟ್ಟ್ ಕಿಟ್ ಫೌಂಡೇಶನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ನ.24ಕ್ಕೆ ಮುಂದೂಡಿತು. ಅರ್ಜಿಯ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳು ಹಾಗೂ ರಾಜಕೀಯ ನಾಯಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸುವ ಹಾಗೂ ಎಫ್‌ಐಆರ್ ದಾಖಲಿಸುವಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದರೆ, ರಾಜ್ಯ ಸರ್ಕಾರ ಈವರೆಗೆ ಯಾವುದೇ ಕಠಿಣ ಕ್ರಮ ಜರುಗಿಸಿಲ್ಲ.
ಅರ್ಜಿ ಗುರುವಾರ ಮತ್ತೆ ವಿಚಾರಣೆ ಬಂದ ವೇಳೆ ರಾಜ್ಯಕೀಯಪಕ್ಷಗಳ ರ್ಯಾಲಿಹಾಗೂಕಾರ್ಯ ಕ್ರಮಗಳಲ್ಲಿ ಭಾಗವಹಿಸಿದ ರಾಜಕಾರಣಿಗಳು ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರಕಾಯ್ದುಕೊಳ್ಳುತ್ತಿಲ್ಲ. ಆದರೂ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿತು.
ದಂಡ ಕಟ್ಟಿಸಿಕೊಳ್ಳಲು ಅವಕಾಶ: ಸರ್ಕಾರಿ ವಕೀಲ ವಿಕ್ರಮ್ ಹುಯಿಲಗೋಳ್ ಉತ್ತರಿಸಿ, ಮಾಸ್ಕ್ ಹಾಕದವರನ್ನು ಜೈಲಿಗೆ ಕಳುಹಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಈ ಬಗ್ಗೆ ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ದಂಡ ಕಟ್ಟಿಸಿಕಕೊಳ್ಳಲು ಅವಕಾಶವಿರುವಂತೆ ತಿದ್ದುಪಡಿ ತರಲಾಗುವುದು. ರಾಜಕೀಯ ಪಕ್ಷಗಳ ರ್ಯಾಲಿಗಳಲ್ಲಿ ಭಾಗವಹಿಸಿ ಕೋವಿಡ್-19 ನಿಯಮ ಉಲ್ಲಂ ಸಿದ ಒಟ್ಟು 680 ಜನರಿಗೆ ದಂಡ ವಿಧಿಸಲಾಗಿದೆ. ನಿಯಮ ಉಲ್ಲಂಘಿಸಿದ ರಾಜಕಾರಣಿಗಳಿಗೂ ದಂಡ ವಿಧಿಸಲಾಗಿದೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮಾಹಿತಿ ನೀಡಿದರು.
ಅದಕ್ಕೆ ಅಸಮಾಧಾನಗೊಂಡ ಮುಖ್ಯ ನ್ಯಾಯ ಮೂರ್ತಿಗಳು, ರಾಜಕಾರಣಿಗಳ ವಿರುದ್ಧ ಕ್ರಮ ಜರುಗಿಸದೆ ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಕಾನೂನು ಮಾಡಿರುವುದು ಎಲ್ಲರಿಗಾಗಿ. ಆದರೆ, ಸರ್ಕಾರ ಮಾತ್ರ ಜನ ಸಾಮಾನ್ಯರು ಮತ್ತು ರಾಜಕಾರಣಿಗಳು ನಡುವೆ ತಾರತಮ್ಯ ನಡೆಸುತ್ತಿದೆ. ಕಾನೂನಿನಿಂದಕೆಲವರಿಗೆ ವಿನಾಯ್ತಿ ನೀಡಲಾಗುತ್ತಿದೆ ಎಂದುಕಟುವಾಗಿ ನುಡಿಯಿತು.
ಯಾರಿಗೂ ವಿನಾಯ್ತಿ ನೀಡುತ್ತಿಲ್ಲ: ಸರ್ಕಾರಿ ವಕೀಲರು, ಕಾನೂನಿನಿಂದ ಯಾರಿಗೂ ವಿನಾಯ್ತಿ ನೀಡುತ್ತಿಲ್ಲ. ಮಾರ್ಗಸೂಚಿ ಉಲ್ಲಂಘಿಸಿದ ಎಲ್ಲರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ತಿಳಿಸಿದರು.
ಕಾನೂನು ಪ್ರಕಾರ ಕ್ರಮ ಜರುಗಿಸಿಲ್ಲ: ನ್ಯಾಯ ಪೀಠ ಪ್ರತಿಕ್ರಿಯಿಸಿ, ತೇಜಸ್ವಿ ಸೂರ್ಯ ಅವರ ರ್ಯಾಲಿ ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದೆ. ಆದರೆ, ಈವರೆಗೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಿಲ್ಲ. ನಂತರ ರಾಜಕೀಯ ಪಕ್ಷಗಳ ರ್ಯಾಲಿಗಳಲ್ಲಿ ಕೋವಿಡ್-19 ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂ ಸಲಾಗುತ್ತಿದೆ. ಆದರೂ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸುವಲ್ಲಿ ಸರ್ಕಾರ ವಿಫಲವಾಗಿದೆ.
ಸರ್ಕಾರ ರಾಜಕೀಯ ಪಕ್ಷಗಳ ಮೇಲೆ ನಿಯಂತ್ರಣ ಹೊಂದಿಲ್ಲ. ಆದ್ದರಿಂದ ರಾಜ್ಯದಲ್ಲಿಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳ ಪಟ್ಟಿಯಲ್ಲಿ ಸೇರಿಸಿ, ಅವುಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ನೀಡಿ ವಿವರಣೆ ಪಡೆಯಲಾಗುವುದು. ಅದಕ್ಕಾಗಿ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅರ್ಜಿದಾರ ವಕೀಲ ಪುತ್ತಿಗೆ ರಮೇಶ್ ಅವರಿಗೆ ನ್ಯಾಯಪೀಠ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.