ಸೌಲಭ್ಯ ಕಲ್ಪಿಸಲು ಸಹಕಾರ ಸಂಘ ಪೂರಕ
Team Udayavani, Nov 20, 2020, 12:49 PM IST
ಹೊಸಕೋಟೆ: ಹಾಲು ಉತ್ಪಾದಕರ ಹಿತ ಕಾಪಾಡುವುದರೊಂದಿಗೆ ಗ್ರಾಮಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಸಹಕಾರ ಸಂಘ ಗಳ ಪಾತ್ರ ಅಭಿ ನಂದನಾರ್ಹ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ತಾಲೂಕಿನ ಓಬಳಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.
ಕೇವಲ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವುದ ರೊಂದಿಗೆ ಗ್ರಾಮ ಸ್ಥರ ಆರೋಗ್ಯ ಕಾಪಾಡಿಕೊಳ್ಳಲು ಅನುವಾಗುವಂತೆ ಶುದ್ಧ ಕುಡಿಯುವ ನೀರಿನ ಘಟಕ ವನ್ನು ಸ್ಥಾಪಿಸುವ ಮೂಲಕ ಸಾಮಾಜಿಕ ಕಾಳಜಿಯನ್ನು ಪ್ರದರ್ಶಿಸಿದಂತಾಗಿದೆ ಎಂದರು.
ತಾಲೂಕಿನಲ್ಲಿ ಈಗಾಗಲೇ ತಮ್ಮ ಸ್ವಂತ ವೆಚ್ಚದಲ್ಲಿ ಹಾಗೂ ದಾನಿಗಳ ಸಹಕಾರದೊಂದಿಗೆ 100ಕ್ಕೂ ಹೆಚ್ಚು ಘಟಕಗಳನ್ನು ಪ್ರಾರಂಭಿಸಿ ಅನು ಕೂಲ ಕಲ್ಪಿಸಲಾಗಿದೆ.ಸಂಘವು ಗಳಿಸಿದ ಲಾಭಾಂಶದಲ್ಲಿ ಗ್ರಾಮಗಳ ಬೆಳವಣಿಗೆಗೂ ಸಹ ಗಮನಹರಿಸಲಾಗುತ್ತಿದೆ. ನೀರು ಅತ್ಯ ಮೂಲ್ಯವಾದ ನೈಸರ್ಗಿಕ ಸಂಪತ್ತಾಗಿದ್ದು ಮಿತವಾಗಿ ಬಳಸಬೇಕಾದ್ದು ಅತ್ಯವಶ್ಯ ವಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದಾಗಲೂ ಅಂತರ್ಜಲ ಮಟ್ಟದಲ್ಲಿ ನಿರೀಕ್ಷಿತ ಸುಧಾರಣೆ ಕಂಡು ಬಂದಿಲ್ಲ. ಈಗಲೂ ಸಹ ಕೊಳವೆಬಾವಿಗಳಿಂದ ನೀರು ಪಡೆಯಲು 2 ಸಾವಿರ ಅಡಿಗಳಷ್ಟು ಕೊರೆಯಬೇಕಾದ ಪರಿಸ್ಥಿತಿಯಿದೆ ಎಂದರು.
ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ. ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ 198 ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿದಿನ 1.5 ಲಕ್ಷ ಲೀ.ಗಳಷ್ಟು ಹಾಲು ಸಂಗ್ರಹಗೊಳ್ಳುತ್ತಿದ್ದು ಗುಣಮಟ್ಟ ಕಾಪಾಡಿಕೊಳ್ಳಲು ಆದ್ಯತೆ ನೀಡಲಾಗಿದೆ. ಒಕ್ಕೂಟದ ವ್ಯಾಪ್ತಿಯಲ್ಲಿನ 175ರಲ್ಲಿ ತಾಲೂಕಿನಲ್ಲಿ ಇದುವರೆವಿಗೂ 49 ಶುದ್ಧ ಕುಡಿಯುವ ನೀರಿನ ಘಟಕ ಗಳು ಕಾರ್ಯನಿರ್ವಹಿಸುತ್ತಿದ್ದು 2 ಲಕ್ಷ ರೂ.ಗಳ ಸಹಾಯಧನ ಸಹ ನೀಡಲಾಗುತ್ತಿದೆ. ಒಕ್ಕೂಟದಿಂದ ಕೋವಿಡ್ ಸೋಂಕು ತಡೆಗಟ್ಟುವ ಸಲುವಾಗಿ ಎಲ್ಲಾ 298ಗ್ರಾಮಗಳಲ್ಲೂಸಹಸೋಡಿಯಂಹೈಪೊಕ್ಲೋರೈಟ್ ರಾಸಾಯನಿಕ ದ್ರಾವಣ ಸಿಂಪಡಿಸುವ ಕಾರ್ಯ ಸಹ ಕೈಗೊಳ್ಳಲಾಗಿತ್ತು ಎಂದರು.
ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಪಶು ಆಹಾರ ಒಳಗೊಂಡಂತೆ ವಿಮಾ ಯೋಜನೆಗೆ ನೋಂದಣಿಗೂ ಸಹ ಅವಕಾಶ ಮಾಡಿಕೊಡ ಲಾಗಿದೆ. ಕಳೆದ 6-7 ತಿಂಗಳುಗಳಲ್ಲಿ ಹಾಲಿನ ಮಾರಾಟ ಸಹ ಕಡಿಮೆಯಾಗಿದ್ದಾಗ್ಯೂ ಸಹ ಉತ್ಪಾದಕರ ಹಿತ ಕಾಪಾಡುವ ಉದ್ದೇಶದಿಂದ ನಿರಂತರವಾಗಿ ಹಾಲು ಸಂಗ್ರಹಣೆ ಮಾಡಲಾಗುತ್ತಿದೆ. ಪರಿಸ್ಥಿತಿ ಇದೀಗ ಸುಧಾರಣೆಗೊಳ್ಳುತ್ತಿದ್ದು ಮಾರಾಟ ದರ ಏರಿಕೆ ಮಾಡಿದ್ದಲ್ಲಿ ಉತ್ಪಾದಕರಿಗೂ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.
ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿದ್ದಲಿಂಗಾರಾಧ್ಯ ಸ್ಥಾಪಿಸಲು ಸೂಲಿಬೆಲೆ ಹೋಬಳಿ ರಾಂಪುರ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಧರ್ಮೇಶ್, ತಾಪಂ ಮಾಜಿ ಅಧ್ಯಕ್ಷ ಟಿ.ಎಸ್. ರಾಜಶೇಖರ್, ಗ್ರಾಪಂ ಮಾಜಿ ಉಪಾಧ್ಯಕ್ಷ ಜಗದೀಶ್, ಬೆಂಗಳೂರು ಹಾಲು ಒಕ್ಕೂಟದ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ವಿಜಯಭಾಸ್ಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.