ರೈತ ಆತ್ಮಹತ್ಯೆ: 3 ಪ್ರಕರಣ ಪರಿಹಾರಕ್ಕೆ ಒಪ್ಪಿಗೆ
Team Udayavani, Nov 20, 2020, 3:15 PM IST
ಯಾದಗಿರಿ: ರೈತ ಆತ್ಮಹತ್ಯೆ ಪ್ರಕರಣಗಳ ಪರಿಶೀಲನೆ ನಡೆಸಿ ಸಂಬಂಧಿಸಿದವರ ಕುಟುಂಬದ ಸದಸ್ಯರಿಗೆ ಆದಷ್ಟು ಶೀಘ್ರ ಪರಿಹಾರದ ಮೊತ್ತವನ್ನು ಪಾವತಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ಆತ್ಮಹತ್ಯೆ ಪ್ರಕರಣಗಳ ಪರಿಹಾರಕ್ಕೆ ಅನುಮತಿ ನೀಡುವ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ರೈತ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ಕಾರಣ, ಮರಣೋತ್ತರ ವರದಿ, ಎಫ್‌ಎಸ್‌ಎಲ್ ವರದಿ, ಅವರು ಬ್ಯಾಂಕುಗಳಲ್ಲಿ ಮಾಡಿಕೊಂಡ ಸಾಲದ ವಿವರಗಳು ಸೇರಿದಂತೆ ಸರ್ಕಾರಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ವರದಿ ಸಂಗ್ರಹಿಸಿ ನೈಜ ಕಾರಣವನ್ನು ಪತ್ತೆ ಹಚ್ಚಬೇಕು, ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಕೂಡಲೇ ಪರಿಹಾರ ಧನ ವಿತರಿಸಬೇಕು, ಇಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದೇವಿಕಾ ಅವರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರೈತಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ವಿವರ ನೀಡಿ, ಆತ್ಮಹತ್ಯೆಯ ಮೂರು ಪ್ರಕರಣಗಳಲ್ಲಿ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಸಮಿತಿಗೆ ಮಂಡಿಸಲಾಗಿದೆ. ಉಳಿದಂತೆ ಸಹಾಯಕ ಆಯುಕ್ತರ ಅಧ್ಯಕ್ಷತೆಯ ಸಮಿತಿಯಲ್ಲಿ 5 ಪ್ರಕರಣಗಳು ಇತ್ಯರ್ಥವಾಗಿದ್ದು, ಅವರಿಗೆ ಪರಿಹಾರ ಧನ ವಿತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮೂರು ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಮಂಜೂರು ಮಾಡಲು ಸಮ್ಮತಿ ನೀಡಿದರು. ಸಹಾಯಕ ಆಯುಕ್ತರಾದ ಶಂಕರ ಸೋಮನಾಳ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದೇವಿಕಾ, ಸಹಾಯಕ ನಿರ್ದೇಶಕರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.