ಕರ್ನಾಟಕ ಬಂದ್ ಕೈ ಬಿಡಲು ಡಿಸಿಎಂ ಲಕ್ಷ್ಮಣ ಸವದಿ ಮನವಿ
Team Udayavani, Nov 20, 2020, 6:11 PM IST
ಬೀದರ್: ಮರಾಠಾ ಅಭಿವೃದ್ಧಿ ನಿಗಮವನ್ನು ಒಂದು ಭಾಷೆ ಹೆಸರಿನಲ್ಲಿ ರಚನೆ ಮಾಡಿದಲ್ಲ. ಹಿಂದುಳಿದ ಸಮುದಾಯವನ್ನು ಮೇಲೆತ್ತಲು ಈ ನಿಗಮ ಸ್ಥಾಪಿಸಲಾಗಿದೆ. ಇದರಿಂದ ಮರಾಠಾ ಏಕೀಕರಣ ಸಮಿತಿಗೆ ಶಕ್ತಿ ಸಿಕ್ಕಂತಾಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ನಿರ್ಧಾರವನ್ನು ಕೈಬಿಡಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದರು.
ಬಸವಕಲ್ಯಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರಾಠಾ ಸಮಾಜದಲ್ಲಿ ಬಡವರು ಮತ್ತು ಹಿಂದುಳಿದವರು ಸಾಕಷ್ಟು ಸಂಖ್ಯೆಯಲ್ಲಿದ್ದು, ಇದೇ ನೆಲದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಆ ಸಮುದಾಯ ಸಹ ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲಿ ಎಂಬುದು ಸರ್ಕಾರದ ಆಶಯ. ನಿಗಮದ ವಿಷಯದಲ್ಲಿ ಅನಗತ್ಯವಾಗಿ ಗೊಂದಲ ಮೂಡಿಸುವುದನ್ನು ಬಿಡಬೇಕು ಎಂದರು.
ಇವ ನಮ್ಮವ ಎಂದು ಬಸವಣ್ಣ ಸಾರಿದ ನಾಡು ಕರ್ನಾಟಕ. ನೊಂದ ಸಮುದಾಯಕ್ಕಾಗಿ ಸರ್ಕಾರ ನಿಗಮ ರಚಿಸುವ ನಿರ್ಣಯ ಕೈಗೊಂಡಿದೆ. ಹಾಗಾಗಿ ಬಂದ್ ಕುರಿತು ಅಧಿಕೃತವಾಗಿ ಘೋಷಿಸಿದವರು ಕೂಡಲೇ ಹಿಂದೆ ಸರಿಯಬೇಕು. ಡಿ. 5ರಂದು ಯಾವುದೇ ಕಾರಣಕ್ಕೂ ಬಂದ್ ಇರವುದಿಲ್ಲ, ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರ ಸಹ ಎಂದಿನಂತೆ ಇರಲಿವೆ ಎಂದು ಸಚಿವ ಸವದಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಜೈಶ್ ಉಗ್ರರ 26/11 ಮಾದರಿ ದಾಳಿ ಸಂಚು ವಿಫಲ: ನಗ್ರೋಟಾ ಎನ್ ಕೌಂಟರ್ ಬಗ್ಗೆ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.