ಮಂಗಳೂರು ವಿ.ವಿ. ಪದವಿ ಫಲಿತಾಂಶ; ಸರ್ವರ್ ಸಮಸ್ಯೆ ನಿವಾರಣೆ
Team Udayavani, Nov 21, 2020, 7:50 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪದವಿ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಉಂಟಾಗಿದ್ದ ಗೊಂದಲವು ಶೇ. 99ರಷ್ಟು ನಿವಾರಣೆಯಾಗಿದೆ. ಶನಿವಾರ ಮಧ್ಯಾಹ್ನದೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ದೊರಕುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿ.ವಿ. ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿ.ವಿ.ಯ ಅಂತಿಮ ಪದವಿ ಫಲಿತಾಂಶ ಕಳೆದ ರವಿವಾರ ಮತ್ತು ಸೋಮವಾರ ಪ್ರಕಟಿಸಲಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದಾಗಿ ಕೆಲವೇ ವಿದ್ಯಾರ್ಥಿಗಳು ಫಲಿತಾಂಶ ಪಡೆದರೆ, ಬಹುತೇಕರಿಗೆ ಫಲಿತಾಂಶ ಲಭ್ಯವಾಗಿರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ವಿ.ವಿ. ಸಂಬಂಧಪಟ್ಟವರು ಸಮಸ್ಯೆ ನಿವಾರಣೆಗೆ ಪ್ರಯತ್ನ ಪಡುತ್ತಿದ್ದು, ಈಗಾಗಲೇ ಶೇ. 99ರಷ್ಟು ನಿವಾರಣೆಯಾಗಿದೆ. ವಿದ್ಯಾರ್ಥಿಗಳ ಗೊಂದಲ ಪರಿಹರಿಸಿ ಫಲಿತಾಂಶ ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿ.ವಿ. ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ. ಎಲ್. ಧರ್ಮ ತಿಳಿಸಿದ್ದಾರೆ.
ದಾಖಲಾತಿ ನ. 30ರ ವರೆಗೆ ವಿಸ್ತರಣೆ
ಫಲಿತಾಂಶ ಪ್ರಕಟನೆಯಲ್ಲಿ ಉಂಟಾದ ಗೊಂದಲದ ಕಾರಣ ದಿಂದಾಗಿ ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪ್ರಕ್ರಿಯೆಯನ್ನು ವಿವಿ ಮುಂದೂಡಿದೆ.
ಸ್ನಾತಕೋತ್ತರ ಪದವಿ ಸೇರ್ಪಡೆಗೆ ದಾಖಲಾತಿ ಪ್ರಕ್ರಿಯೆಗೆ ಕೊನೆಯ ದಿನಾಂಕವನ್ನು ನ. 21ಕ್ಕೆ ನಿಗದಿ ಪಡಿಸಲಾಗಿತ್ತು. ಆದರೆ ಸರ್ವರ್ ಸಮಸ್ಯೆ ಯಿಂದಾಗಿ ಬಹುತೇಕ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯ ವಾಗದ ಕಾರಣ ನ. 30ರ ವರೆಗೆ ದಾಖಲಾತಿ ಅವಧಿಯನ್ನು ವಿಸ್ತರಿಸಲಾಗಿದೆ. ಮಂಗಳೂರು ವಿ.ವಿ.ಯ ಸ್ನಾತಕೋತ್ತರ ವಿಭಾಗಗಳು/ವಿ.ವಿ. ಕಾಲೇಜು ಮಂಗಳೂರು/ವಿ.ವಿ. ಸಂಧ್ಯಾ ಕಾಲೇಜು ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪಕಾಲೇಜು ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿವಿಯ ಸಂಯೋಜಿತ ಕಾಲೇಜುಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತ ಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ನ. 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಪಿ.ಜಿ. ಡಿಪ್ಲೊಮಾ ಮತ್ತು ಸರ್ಟಿಫಿಕೆಟ್ ಕಾರ್ಯಕ್ರಮಗಳ ಭರ್ತಿ ಮಾಡಿದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರವೇಶ ಪರೀಕ್ಷೆ ಹಾಗೂ ಇನ್ನಿತರ ಮಾಹಿತಿಗಳನ್ನು ಮಂಗಳೂರು ವಿ.ವಿ. ವೆಬ್‌ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ಕುಲಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.