![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 21, 2020, 4:43 PM IST
ಧಾರವಾಡ: ಜಮ್ಮು ಮತ್ತು ಕಾಶ್ಮೀರದಲ್ಲಿ 320 ನೇ ವಿಧಿಯನ್ನು ಪುನರ್ ಸ್ಥಾಪಿಸುವ ಉದ್ದೇಶ ಹೊಂದಿರುವ ಗುಪ್ಕಾರ್ ಒಕ್ಕೂಟಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ಕಿಡಿಕಾರಿದ್ದಾರೆ.
ಧಾರವಾಡದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಸಂವಿಧಾನದ 320ನೇ ವಿಧಿ ತೀವ್ರ ಅಡ್ಡಿಯಾಗಿತ್ತು. ನರೇಂದ್ರ ಮೋದಿ ಸರ್ಕಾರ ಈ ವಿಧಿಯನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ರಚಿಸಿದೆ ಎಂದರು.
320 ನೇ ವಿಧಿಯ ನೆರಳಿನಲ್ಲಿ ಜಮ್ಮು ಕಾಶ್ಮೀರದ ಕೆಲವೇ ಕೆಲವು ಪಟ್ಟಭದ್ರ ಹಿತಾಸಕ್ತಿಯ ಕುಟುಂಬಗಳು ಜಮ್ಮು ಕಾಶ್ಮೀರವನ್ನು ಅಧೋಗತಿಗೆ ತಂದಿದ್ದವು. 320ನೇ ವಿದಿಯ ರದ್ದತಿಯ ನಂತರ ಈ ಕುಟುಂಬಗಳ ಆಟ ನಿಂತಿದೆ ಎಂದರು.
ಗೃಹ ಬಂಧನದಿಂದ ಹೊರ ಬಂದ ನಂತರ ಪಿಡಿಪಿಯ ಮೆಹಬೂಬಾ ಮುಫ್ತಿ ಎನ್ ಸಿಪಿಯ ಫಾರೂಕ್ ಅಬ್ದುಲ್ಲಾ ಹಾಗೂ ಸಿಪಿಎಂ ಸೇರಿ ಗುಪ್ಕಾರ್ ಒಕ್ಕೂಟ ರಚಿಸಿಕೊಂಡು 370 ನೇ ವಿಧಿ ಪುನರ್ ಸ್ಥಾಪಿಸುವುದಾಗಿ ಹೇಳಿವೆ. ಅಲ್ಲದೇ ಈ ಕೆಲಸಕ್ಕೆ ಚೀನಾ ನೆರವನ್ನೂ ಪಡೆಯಲು ಹಿಂಜರಿಯುವುದಿಲ್ಲ ಎಂದು ಹೇಳಿವೆ ಎಂದರು.
ಇದನ್ನೂ ಓದಿ:ತಮಿಳುನಾಡು: ಅಮಾನತುಗೊಂಡ ಡಿಎಂಕೆ ಮುಖಂಡ ರಾಮಲಿಂಗಂ ಸಿಟಿ ರವಿ ಸಮ್ಮುಖದಲ್ಲಿ ಬಿಜೆಪಿಗೆ
ಗುಪ್ಕಾರ್ ಒಕ್ಕೂಟದ ಈ ಕೆಲಸಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಹೇಳುತ್ತಿರುವುದು ಆ ಪಕ್ಷದ ದ್ವಂದ್ವ ನೀತಿ ತೋರಿಸುತ್ತದೆ. ಹಾಗಾದರೆ ಕಾಂಗ್ರೆಸ್ ಚೀನಾ ಪರವೇ? ದೇಶದ್ರೋಹಿಗಳ ಪರವೇ? ಪ್ರತ್ಯೇಕವಾದಿಗಳ ಪರವೇ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಅವರು ಸವಾಲು ಹಾಕಿದರು. ರಾಹುಲ್ ಗಾಂಧಿ ಅವರು ಈ ವಿಚಾರದ ಬಗ್ಗೆ ದೇಶದ ಜನತೆ ಮುಂದೆ ತಮ್ಮ ನಿಲುವು ಏನು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.
ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಗೊಂಡ ನಂತರ ಅಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ. ಇದೇ ಮೊದಲ ಬಾರಿಗೆ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿವೆ. ಕೇಂದ್ರ ಸರ್ಕಾರದ ಸವಲತ್ತುಗಳು ಮನೆ ಮನೆಗೆ ತಲುಪುತ್ತಿವೆ ಎಂದು ಪ್ರಹ್ಲಾದ ಜೋಶಿ ಹೇಳಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.