ಸೋಂಕಿತರು ಬಳಸಿದ ವಸ್ತು ವಿದ್ಯಾರ್ಥಿಗಳಿಗೆ ಬೇಡ


Team Udayavani, Nov 23, 2020, 5:43 AM IST

ಸೋಂಕಿತರು ಬಳಸಿದ ವಸ್ತು ವಿದ್ಯಾರ್ಥಿಗಳಿಗೆ ಬೇಡ

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಮೆಟ್ರಿಕ್‌ ಅನಂತರದ ಹಾಸ್ಟೆಲ್‌ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿ, ಕೋವಿಡ್ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ‌ ಬಗ್ಗೆ ಪ್ರಮಾಣಿತ ಕಾರ್ಯಸೂಚಿ ವಿಧಾನ (ಎಸ್‌ಒಪಿ)ಯನ್ನು ಬಿಡುಗಡೆ ಮಾಡಿದೆ. ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗ‌ಳನ್ನು ಆರಂಭಿಸಲು ಇನ್ನು ಅನುಮತಿ ನೀಡಿಲ್ಲ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹೋಗಲು ಅಥವಾ ಆನ್‌ಲೈನ್‌ ತರಗತಿಯಲ್ಲಿ ಭಾಗವಹಿಸಲು ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಹಾಸ್ಟೆಲ್‌ಗ‌ಳನ್ನು ಆರಂಭಿಸಲಾಗಿದೆ. ಕೊರೊನಾ ಸೋಂಕಿತರು ಬಳಸಿರುವ ಹಾಸಿಗೆ, ದಿಂಬು, ಹೊದಿಕೆಗಳನ್ನೇ ವಿದ್ಯಾರ್ಥಿಗಳು ಬಳಸಬೇಕು ಎಂಬುದು ಎಷ್ಟು ಸರಿ?

ರಾಜ್ಯದ ಬಹುತೇಕ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳನ್ನು ಕ್ವಾರಂಟೈನ್‌ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿತ್ತು. ಲಾಕ್‌ಡೌನ್‌ಗೂ ಮೊದಲ ಮತ್ತು ಲಾಕ್‌ಡೌನ್‌ ಅವಧಿಯಲ್ಲಿ ಹೊರ ರಾಜ್ಯ ಮತ್ತು ವಿದೇಶಗಳಿಂದ ಬಂದಿರುವ ಕೊರೊನಾ ಶಂಕಿತರಿಗೆ ಕ್ವಾರಂಟೈನ್‌ ಕೇಂದ್ರದಲ್ಲೇ ವ್ಯವಸ್ಥೆ ಮಾಡಲಾಗಿತ್ತು, ಇದಾದ ಅನಂತರ ಸರಕಾರದಿಂದ ಆರಂಭಿಸಿರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ವಸತಿ ಶಾಲೆ ಹಾಗೂ ಹಾಸ್ಟೆಲ್‌ಗ‌ಳಲ್ಲಿ ತೆರೆಯಲಾಗಿತ್ತು. ಕೊರೊನಾ ಸೋಂಕಿತರು, ರೋಗ ಲಕ್ಷಣ ಇಲ್ಲದ ಸೋಂಕಿತರು ಸಹಿತವಾಗಿ ಕ್ವಾರಂಟೈನ್‌ನಲ್ಲಿದ್ದರು ಹಾಗೂ ಆರೈಕೆ ಕೇಂದ್ರದಲ್ಲಿದವರು ಹಾಸ್ಟೆಲ್‌ ವಿದ್ಯಾರ್ಥಿಗಳು ಬಳಸುತ್ತಿದ್ದ ಬೆಡ್‌, ಬೆಡ್‌ಸ್ಪ್ರೆಡ್‌, ದಿಂಬು, ದಿಂಬಿನ ಕವರ್‌, ಹೊದಿಕೆ ಇತ್ಯಾದಿಗಳನ್ನು ಉಪಯೋಗಿಸಿದ್ದಾರೆ. ಅದನ್ನೇ ಈಗ ಬಿಸಿ ನೀರು ಮತ್ತು ಡಿಟರ್ಜಂಟ್‌ನಿಂದ ಒಗೆದು ವಿದ್ಯಾರ್ಥಿಗಳಿಗೆ ಮರು ಬಳಕೆಗೆ ಎಸ್‌ಒಪಿಯಲ್ಲೇ ತಿಳಿಸಲಾಗಿದೆ.

ಕೊರೊನಾ ಸೋಂಕಿತರು ಬಳಸಿರುವ ವಸ್ತುಗಳನ್ನು ಮನೆಯಲ್ಲೇ ಮರು ಬಳಕೆ ಮಾಡಲು ಜನ ಸಾಕಷ್ಟು  ಬಾರಿ ಯೋಚನೆ ಮಾಡುತ್ತಾರೆ. ಈ ಸಾಂಕ್ರಾಮಿಕ ರೋಗ ತುಂಬ ಅಪಾಯಕಾರಿ, ಎಚ್ಚರ ತಪ್ಪಿದರೇ ಆಪತ್ತು ಕಟ್ಟಿಟ್ಟ ಬುತ್ತಿ ಎಂದು ವೈದ್ಯಕೀಯ ವಲಯವೇ ಸಾರಿ ಹೇಳುತ್ತಿದೆ. ಇವೆಲ್ಲದರ ನಡುವೆ ಕೊರೊನಾ ಸೋಂಕಿತರು, ಶಂಕಿತರು ಬಳಸಿರುವ ಹೊದಿಕೆ, ದಿಂಬು, ಬೆಡ್‌, ಬೆಡ್‌ಶೀಟ್‌ ಇತ್ಯಾದಿಗಳನ್ನು ವಾಶ್‌ ಮಾಡಿ ವಿದ್ಯಾರ್ಥಿಗಳಿಗೆ ಮರು ಬಳಕೆಗೆ ನೀಡುವುದು ಸರಿಯೇ? ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಹಾಸ್ಟೆಲ್‌ಗ‌ಳಲ್ಲಿ ಈ ರೀತಿ ಮಾಡುತ್ತಿರುವುದು ವಿದ್ಯಾರ್ಥಿಗಳಲ್ಲಿ ಮತ್ತು ಪಾಲಕ, ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.

ಇಲಾಖೆಯಿಂದ ಮಕ್ಕಳಿಗೆ ಹೊಸ ಬೆಡ್‌, ಬೆಡ್‌ಸ್ಪ್ರೆಡ್‌, ಹೊದಿಕೆ ಇತ್ಯಾದಿಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕು. ಕಾಲೇಜುಗಳಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಏರಿಕೆಯಾಗದೇ ಇರುವುದರಿಂದ ಹಾಸ್ಟೆಲ್‌ಗ‌ಳಲ್ಲೂ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಹಾಜರಾಗಿಲ್ಲ. ಹೀಗಾಗಿ ಹಂತ ಹಂತವಾಗಿಯಾದರೂ ಹೊಸ ಬೆಡ್‌, ಬೆಡ್‌ಶೀಟ್‌, ಬೆಡ್‌ಸ್ಪ್ರೆಡ್‌ ಇತ್ಯಾದಿಗಳನ್ನು ಪೂರೈಕೆ ಮಾಡುವ ಕಾರ್ಯವನ್ನು ಸಮಾಜ ಕಲ್ಯಾಣ ಇಲಾಖೆ ಮಾಡಬೇಕು. ಇಲ್ಲವಾದರೆ, ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುವ ಜತೆಗೆ ಮಕ್ಕಳನ್ನು ಹಾಸ್ಟೆಲ್‌ಗೆ ಕಳುಹಿಸುವ ಪಾಲಕ ಪೋಷಕರಲ್ಲೂ ಆತಂಕ ಹೆಚ್ಚಾಗಲಿದೆ. ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗ‌ಳು ಇನ್ನಷ್ಟೇ ಆರಂಭವಾಗಬೇಕಿದೆ. ಆಗ ಶಾಲಾ ಮಕ್ಕಳು ಹಾಸ್ಟೆಲ್‌ ಅಥವಾ ವಸತಿ ಶಾಲೆಗೆ ಬರಲಿದ್ದಾರೆ. ಅಷ್ಟರೊಳಗಾಗಿ ಇಲಾಖೆ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡು, ಮಕ್ಕಳ ಸುರಕ್ಷತೆಗೆ ಇನ್ನಷ್ಟು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.