ಆಸೀಸ್ ಸರಣಿಗೆ ಪೂರ್ತಿ ಫಿಟ್: ರೋಹಿತ್ ಶರ್ಮಾ ವಿಶ್ವಾಸ
Team Udayavani, Nov 23, 2020, 9:12 AM IST
ಬೆಂಗಳೂರು: ಗಾಯದ ಸಮಸ್ಯೆಗೆ ಸಿಲುಕಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಫಿಟ್‌ನೆಸ್ ಟ್ರೈನಿಂಗ್ ನಡೆಸುತ್ತಿರುವ ರೋಹಿತ್ ಶರ್ಮ ಚೇತರಿಕೆಯ ಹಾದಿಯಲ್ಲಿದ್ದಾರೆ. “ನಾನು ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದು, ಆಸ್ಟ್ರೇಲಿಯ ವಿರುದ್ಧದ ಸರಣಿಗೆ ಪೂರ್ತಿ ಫಿಟ್‌ನೆಸ್‌ನೊಂದಿಗೆ ಸಜ್ಜಾಗಲಿದ್ದೇನೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಐಪಿಎಲ್ ವೇಳೆ ಗಾಯಾಳಾಗಿ ಆಸ್ಟ್ರೇಲಿಯ ಪ್ರವಾಸದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯಿಂದ ಬೇರ್ಪಟ್ಟ ರೋಹಿತ್ ಶರ್ಮ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರೆ.
“ಪಾರ್ಶ್ವ ಸ್ನಾಯು ಸೆಳೆತದಿಂದ ಗುಣಮುಖನಾಗಿದ್ದೇನೆ. ಫಿಟ್‌ನೆಸ್ ಕಾಯ್ದುಕೊಂಡು ಇನ್ನಷ್ಟು ಬಲಿಷ್ಠಗೊಳ್ಳುವ ಪ್ರಯತ್ನ ನಡೆಸುತ್ತಿದ್ದೇನೆ. ಸುದೀರ್ಘ ಮಾದರಿಯ ಕ್ರಿಕೆಟ್ ಆರಂಭಿಸುವುದಕ್ಕೂ ಮೊದಲು ಮಾನಸಿಕವಾಗಿ ಗಟ್ಟಿಯಾಗಬೇಕು. ಇದೇ ಕಾರಣಕ್ಕೆ ನಾನು ಎನ್‌ಸಿಎಯಲ್ಲಿದ್ದೇನೆ’ ಎಂದು ರೋಹಿತ್ ಹೇಳಿದರು.
ಯಾವುದೇ ಕ್ರಮಾಂಕದಲ್ಲಿ ಆಡಲು ಸಿದ್ದ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತನ್ನ ಬ್ಯಾಟಿಂಗ್ ಕ್ರಮಾಂಕದ ಕುರಿತಂತೆ ಮ್ಯಾನೇಜ್‌ಮೆಂಟ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಮತ್ತು ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್ ಮಾಡಲು ಸಿದ್ಧನಾಗಿದ್ದೇನೆ ಎಂದು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ರೋಹಿತ್ ಶರ್ಮ ಹೇಳಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಈಗಾಗಲೇ ಕಾಲಿಟ್ಟಿರುವ ಟೀಮ್ ಇಂಡಿಯಾ ವಿರಾಟ್ ಅನುಪಸ್ಥಿತಿಯಲ್ಲಿ ಏನು ಮಾಡಬೇಕೆಂಬ ರಣತಂತ್ರ ರೂಪಿಸಿರುತ್ತದೆ ಎಂದು ನಾನು ನಂಬಿದ್ದೇನೆ. ಯಾರು ಓಪನಿಂಗ್ ಮಾಡಬೇಕು, ವಿರಾಟ್ ಜಾಗದಲ್ಲಿ ಯಾರು ಆಡಬೇಕು ಎಂಬುದರ ಬಗ್ಗೆ ನಿರ್ಧಾರ ಮಾಡಿರುತ್ತಾರೆ. ಅಲ್ಲಿಗೆ ಹೋದ ಬಳಿಕವಷ್ಟೇ ನನಗೆ ಸ್ಪಷ್ಟ ಮಾಹಿತಿ ಸಿಗಲಿದೆ. ಆದರೆ ಯಾವುದೇ ಕ್ರಮಾಂಕದಲ್ಲಿ ಆಡಲು ನಾನು ಸಿದ್ಧ ಎಂದು ರೋಹಿತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Football ಮೈದಾನಕ್ಕೆ ಬಡಿದ ಸಿಡಿಲು; ಆಟಗಾರ ಮೃ*ತ್ಯು, ಹಲವರಿಗೆ ಗಾಯ
BGT Series: ಇಂಡಿಯಾ ಎ ಪಂದ್ಯಕ್ಕಾಗಿ ಆಸೀಸ್ ಗೆ ಹೊರಟ ಕೆಎಲ್ ರಾಹುಲ್, ಜುರೆಲ್
Team India: ಗಂಭೀರ್ ಅಧಿಕಾರಕ್ಕೆ ಕುತ್ತು ತಂದ ಸರಣಿ ಸೋಲು; ಬಿಸಿಸಿಐ ಮಹತ್ವದ ನಿರ್ಧಾರ
Retirement: ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಭಾರತದ ವಿಕೆಟ್ ಕೀಪರ್
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.