2021ರ ಸಪ್ಟೆಂಬರ್ ಒಳಗೆ ದೇಶದ 25-30 ಕೋಟಿ ಜನರಿಗೆ ಕೋವಿಡ್ ಲಸಿಕೆ ಸಿಗಲಿದೆ: ಹರ್ಷವರ್ಧನ್
Team Udayavani, Nov 23, 2020, 2:55 PM IST
ಹೊಸದಿಲ್ಲಿ: ಮುಂದಿನ ವರ್ಷದ ಸಪ್ಟೆಂಬರ್ ಒಳಗೆ ದೇಶದ 25ರಿಂದ 30 ಕೋಟಿ ಜನರಿಗೆ ಕೋವಿಡ್-19 ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು.
ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ಅವರು, 2021ರ ಮೊದಲ ಮೂರು ತಿಂಗಳಲ್ಲಿ ಭಾರತ ಕೋವಿಡ್ ಲಸಿಕೆಯನ್ನು ಪಡೆಯಲಿದೆ. ಸಪ್ಟೆಂಬರ್ ಒಳಗೆ 25ರಿಂದ 30 ಕೋಟಿ ಜನರಿಗೆ ಲಸಿಕೆ ಸಿಗಲಿದೆ ಎಂದು ಹೇಳಿದರು.
ಯಾರು ಮೊದಲು ಲಸಿಕೆ ಪಡೆಯುತ್ತಾರೆ ಎನ್ನುವುದರ ಕುರಿತು ಮಾತನಾಡಿದ ಅವರು, ಆರೋಗ್ಯ ಕಾರ್ಯಕರ್ತರ ದತ್ತಾಂಶಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಅಪ್‌ಲೋಡ್ ಮಾಡಲಾಗುವುದು ಎಂದರು. ಮುಂಚೂಣಿಯ ಕಾರ್ಯಕರ್ತರಾದ ಪೋಲಿಸ್, ಅರೆಸೈನಿಕ, ನೈರ್ಮಲ್ಯೀಕರಣದಲ್ಲಿ ತೊಡಗಿರುವವರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರನ್ನು ಮೊದಲು ಪರಿಗಣಿಸಲಾಗುತ್ತದೆ ಎಂದರು.
ಇದನ್ನೂ ಓದಿ:ಆ್ಯಂಟಿ ಬಯೋಟಿಕ್ ಈ ಶುಂಠಿ! : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ
ಹೊಸದಿಲ್ಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, ದಿಲ್ಲಿಯ ಕೆಲವು ವಿದ್ಯಾವಂತ ಜನರ ನಿರ್ಲಕ್ಯವೂ ಇದಕ್ಕೆ ಕಾರಣ. ಆರ್ ಟಿ- ಪಿಸಿಆರ್ ಗಳ ಸಾಮರ್ಥ್ಯ ಹೆಚ್ಚಿಸಲಾಗಿದೆ. ಸಂಚಾರಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ನಮ್ಮಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಿದ್ದೇವೆ ಎಂದು ಹರ್ಷವರ್ಧನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.