ತಂದೆ ಚೆಕ್ ಮೂಲಕ, ಮಗ ಆರ್ ಟಿಜಿಎಸ್ ಮೂಲಕ ಲಂಚ: ಬಿಎಸ್ ವೈ ಕುಟುಂಬದ ವಿರುದ್ಧ ಸಿದ್ದು ಟೀಕೆ
Team Udayavani, Nov 23, 2020, 4:09 PM IST
ರಾಯಚೂರು: ಹಿಂದೆ ಬಿ.ಎಸ್.ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆದರೆ ಅವರ ಮಗ ಈಗ ಆರ್ ಟಿಜಿಎಸ್ ಮೂಲಕವೇ ಲಂಚ ಪಡೆದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಸ್ಕಿಯಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡು ಸಾವಿರ ಕೋಟಿ ಲಂಚ ಹೊಡೆದಿದ್ದಾರೆ. ಕೋವಿಡ್ ನಿಯಂತ್ರಣ ನೆಪದಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ. ಇವರನ್ನು ಮನುಷ್ಯರು ಎನ್ನಬೇಕೊ? ಅಥವಾ ರಾಕ್ಷಸರು ಎನ್ನಬೇಕೊ? ಇವರೆಲ್ಲ ಮನುಷ್ಯತ್ವ ಇಲ್ಲದವರು ಎಂದ ಜರಿದರು.
ಭತ್ತಕ್ಕೆ ಬೆಂಬಲ ಬೆಲೆ ಕೊಡಲೇಬೇಕು. ಬೆಂಬಲ ಬೆಲೆ ನಿಮ್ಮಪ್ಪನ ಮನೆಯಿಂದ ಕೊಡುತ್ತಿಯಾ ಯಡಿಯೂರಪ್ಪ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ಈ ಕುರಿತು ಡಿಸೆಂಬರ್ ನಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರಶ್ನಿಸುತ್ತೇನೆ. ಕನಿಷ್ಠ 500 ರೂ. ಬೆಂಬಲ ಬೆಲೆ ನೀಡಲೆಬೇಕು. ಕೊಡದಿದ್ದಲ್ಲಿ ಅಧಿವೇಶನದಲ್ಲಿ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದರು.
ಇದನ್ನೂ ಓದಿ:ರೋಶನ್ ಬೇಗ್ ನಮ್ಮ ಪಕ್ಷದಲ್ಲಿಲ್ಲ, ನಮಗೂ ಅವರಿಗೂ ಸಂಬಂಧವಿಲ್ಲ: ಸಿದ್ದರಾಮಯ್ಯ
ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲಿಸುವ ಮೂಲಕ ಬಿಜೆಪಿಗೆ ಎಚ್ಚರಿಕೆ ನೀಡಬೇಕು ಎಂದು ಜನರಿಗೆ ಕರೆಕೊಟ್ಟ ಅವರು, ದೇಶದಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ನರೇಂದ್ರ ಮೋದಿ. ಕೋವಿಡ್ -19 ನಿಯಂತ್ರಣಕ್ಕೆ ಔಷಧ ಕಂಡು ಹಿಡಿಯುವುದು ಬಿಟ್ಟು ದೀಪ ಹಚ್ಚಿ ಗಂಟೆ ಬಾರಿಸಿದ್ರೆ ಸೋಂಕು ಹೋಗುತ್ತಾ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.