ಚುನಾವಣೆಯಲ್ಲಿ ಒವೈಸಿಗೆ ನೀಡುವ ಪ್ರತಿ ಮತವೂ ಭಾರತ ವಿರೋಧಿ ಮತವಾಗಿರಲಿದೆ : ತೇಜಸ್ವಿ
Team Udayavani, Nov 23, 2020, 9:02 PM IST
ಹೈದರಾಬಾದ್: ಸಂಸದ ಅಸಾದುದ್ದೀನ್ ಒವೈಸಿಗೆ ನೀಡುವ ಪ್ರತಿ ಮತವೂ ಭಾರತದ ವಿರೋಧವಾಗಿರುವ ಮತ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ, ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಸೂರ್ಯ ಈ ಅಂಶ ಪ್ರಸ್ತಾಪಿಸಿದ್ದಾರೆ.
ಅಸಾದುದ್ದೀನ್ ಒವೈಸಿ ಮತ್ತು ಅವರ ಸಹೋದರ ಅಕ್ಬರುದ್ದೀನ್ ಒವೈಸಿ ವಿಭಜನಾತ್ಮಕ ಮತ್ತು ಕೋಮು ರಾಜಕೀಯ ನಡೆಸುತ್ತಿದ್ದಾರೆ. ಎಂಐಎಂ ನಾಯಕರು ಕೇವಲ ರೊಹಿಂಗ್ಯಾ ಮುಸ್ಲಿಮರ ಬಗ್ಗೆ ಮಾತ್ರ ಚಿಂತಿಸುತ್ತಾರೆಯೇ ಹೊರತು ಅಭಿವೃದ್ಧಿಯ ಪರ ಅಲ್ಲವೆಂದು ಟೀಕಿಸಿದ್ದಾರೆ.
ಇದನ್ನೂ ಓದಿ:2014ರಿಂದ 2029 ಭಾರತದ ಪಾಲಿಗೆ ಮಹತ್ವದ ವರ್ಷ : ಪ್ರಧಾನಿ ಮೋದಿ ಪ್ರತಿಪಾದನೆ
ಆಪ್ ಪ್ರೇರಣೆ?: ಇದೇ ವೇಳೆ ಟಿಆರ್‌ಎಸ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 20,000 ಲೀ.ಗಿಂತ ಕಡಿಮೆ ನೀರನ್ನು ಬಳಸುವ ಮನೆಗಳು ಬಿಲ್ ಪಾವತಿಸುವ ಅಗತ್ಯವಿಲ್ಲ. ಈ ಕ್ರಮ ಡಿಸೆಂಬರ್‌ನಿಂದಲೇ ಜಾರಿಯಾಗಲಿದೆ ಎಂದು ಸಿಎಂ ಕೆ.ಚಂದ್ರಶೇಖರ ರಾವ್ ತಿಳಿಸಿದ್ದಾರೆ. ಸಲೂನ್‌ಗೆ, ಲಾಂಡ್ರಿಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವುದಾಗಿ ವಾಗ್ಧಾನ ಮಾಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕೂಡ ಆಮ್ ಆದ್ಮಿ ಪಕ್ಷ ಇದೇ ಮಾದರಿಯ ಭರವಸೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.