ನಿನಗೆ ತಾಕತ್ತಿದ್ದರೆ ರಾಜ್ಯ ಬಂದ್ ಮಾಡು ನೋಡೋಣ: ವಾಟಾಳ್ ನಾಗರಾಜ್ ಗೆ ರೇಣುಕಾಚಾರ್ಯ ಸವಾಲು
Team Udayavani, Nov 24, 2020, 3:00 PM IST
ದಾವಣಗೆರೆ: “ಡೊಂಬರಾಟದ ವಾಟಾಳ್ ನಾಗರಾಜ್ ನಿನಗೆ ತಾಕತ್ತಿದ್ದರೆ ಈ ರಾಜ್ಯ ಬಂದ್ ಮಾಡು ನೋಡೋಣ. ಮುಖ್ಯಮಂತ್ರಿಗಳ ಬಗ್ಗೆ ಕೇವಲವಾಗಿ ಮಾತಾಡುತ್ತೀರಾ. ಹುಷಾರ್!” ಹೀಗೆ ಸವಾಲು ಹಾಕಿದವರು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ
ದಾವಣಗೆರೆಯಲ್ಲಿ ಮಾತನಾಡಿದ ಅವರು, ವಾಟಾಳ್ ನಾಗರಾಜ್ ಬೂಟಾಟಿಕೆಯ ವ್ಯಕ್ತಿ. ಎಷ್ಟು ಅಕ್ರಮ ಮಾಡಿದ್ದಾರೆ ಎಂದರೆ ಮೈಸೂರಿನ ವರುಣ ಕ್ಷೇತ್ರದಲ್ಲಿ 70 ಎಕರೆ ಭೂಮಿ ಅಕ್ರಮವಾಗಿ ವಶ ಪಡಿಸಿಕೊಂಡಿದ್ದಾರೆ. ಇವರ ಜಮೀನಿನಲ್ಲಿ ಕೆಲಸ ಮಾಡುತ್ತಿರುವುದು ತಮಿಳರು. ವಾಟಾಳ್ ಬೆಂಗಳೂರಿನಲ್ಲಿ ಎಷ್ಟು ಸೈಟ್ ಮಾಡಿದ್ದಾರೆ ಎಂಬ ಬಗ್ಗೆ ನನ್ನ ಕಡೆ ದಾಖಲೆಗಳಿವೆ. ಮುಖ್ಯಮಂತ್ರಿಗಳ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ರೆ ಹುಷಾರ್ ಎಂದು ಎಚ್ಚರಿಸಿದರು.
ಸಿಎಂ ಗೆ ಯತ್ನಾಳ್ ಡೆಡ್ ಲೈನ್ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪನವರ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಡೆಡ್ ಲೈನ್ ಕೊಡುವುದು ಎಷ್ಟರ ಮಟ್ಟಿಗೆ ಸರಿ? ಪಕ್ಷದ ವರಿಷ್ಠರು ಪಕ್ಷದ ಶಾಸಕಾಂಗದ ಸದಸ್ಯರು ಯಡಿಯೂರಪ್ಪನವರನ್ನು ನಮ್ಮ ನಾಯಕರೆಂದು ತೀರ್ಮಾನ ಮಾಡಿದ್ದೇವೆ. ಯತ್ನಾಳ್ ಡೆಡ್ ಲೈನ್ ಕೊಡುವುದು ಸರಿಯಲ್ಲ ಎಂದರು.
ನಮ್ಮ ಪಕ್ಷದ ಮುಖಂಡರನ್ನು ಗೌರವಿಸಬೇಕು
ಹಾದಿ- ಬೀದಿಯಲ್ಲಿ ನಿಂತು ಮಾತನಾಡುವುದರಿಂದ ಪಕ್ಷದ ಗೌರವ ಕಡಿಮೆಯಾಗುವುದಿಲ್ಲ. ಯಾರು ಮಾತನಾಡುತ್ತಾರೋ ಅವರ ವರ್ಚಸ್ಸು ಕಡಿಮೆಯಾಗುತ್ತದೆ. ಇದು ಪಕ್ಷಕ್ಕೆ ಶೋಭೆ ತರುವ ವಿಚಾರವಲ್ಲ. ಸಿಎಂ ಸೀಟ್ ಖಾಲಿ ಇಲ್ಲ. ಮುಖ್ಯಮಂತ್ರಿ ಗಳ ಕುರ್ಚಿ ಕೂಡ ಖಾಲಿ ಇಲ್ಲ ಎಂದು ಹೇಳಿದರು.
ಯಡಿಯೂರಪ್ಪ ಆಧುನಿಕ ಬಸವಣ್ಣ
ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಚರ್ಚೆ ಮಾಡಿ ಹಣ ಬಿಡುಗಡೆ ಮಾಡಿದ್ದಾರೆ. ಕೊಟ್ಟಿದ್ದು ತಪ್ಪೇನಿಲ್ಲ. ಅಂದು ಬಸವಣ್ಣನವರು ಸಾಮಾಜಿಕ ನ್ಯಾಯ ಕೊಟ್ಟಿದ್ದರು, ಅದೇ ರೀತಿ ಇಂದು ಯಡಿಯೂರಪ್ಪ ನವರು ನೀಡಿದ್ದಾರೆ. ಯಡಿಯೂರಪ್ಪ ಆಧುನಿಕ ಬಸವಣ್ಣ ಎಂದರು.
ಸಿ ಪಿ ಯೋಗೇಶ್ವರ ವಿರುದ್ಧ ಕಿಡಿ
ಪಕ್ಷದಲ್ಲಿ ಎರಡು ಮೂರು ಬಾರಿ ಗೆದ್ದವರಿಗೆ ಸಚಿವ ಸ್ಥಾನದ ಅವಕಾಶ ಕೊಡಿ. ಗೆದ್ದವರಿಗೆ ಮಾತ್ರ ಅವಕಾಶ ಕೊಡಿ ಎಂದು ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳು ಎಲ್ಲರಿಗೂ ಕೇಳಿದ್ದೇನೆ. ಸೋತ ವ್ಯಕ್ತಿಯಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ. 105 ಶಾಸಕರ ಬೆಂಬಲದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಸಿಪಿ ಯೋಗೇಶ್ವರ ವಿರುದ್ಧ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.