ಪಿಎಂಎಸ್‌ವೈಎಂ, ಪಿಂಚಣಿ ಅಭಿಯಾನಕ್ಕೆ ಡೀಸಿ ಚಾಲನೆ
Team Udayavani, Nov 24, 2020, 4:36 PM IST
ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ (ಪಿಎಂಎಸ್‌ವೈಎಂ) ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಚಾಲನೆ ನೀಡಿದರು.
ಜಿಲ್ಲಾಡಳಿತಮುಂಭಾಗದಲ್ಲಿಜಿಲ್ಲಾಡಳಿತಮತ್ತುಕಾರ್ಮಿಕ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ (ಪಿಎಂ ಎಸ್‌ವೈಎಂ) ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿಯೋಜನೆ ಅಭಿಯಾನದ ಅಂಗವಾಗಿ ಜಿಲ್ಲಾದ್ಯಂತ ಅರಿವುಮೂಡಿಸುವ ಸಂಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
18 ರಿಂದ 40 ವರ್ಷದವರೆಗಿನ ವಯೋಮಾನದವರು ಈ ಯೋಜನೆ ಸೌಲಭ್ಯ ಪಡೆದುಕೊಳ್ಳಬಹುದು. ಪ್ರತಿಯೊಬ್ಬ ಕಾರ್ಮಿಕ ರು ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳು ಈಸೌಲಭ್ಯ ಪಡೆದುಕೊಳ್ಳುವಂತೆ ಸೂಚಿಸಲು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು,ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಹೆಸರು ನೋಂದಾಯಿಸಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ತಿಳಿಸಿದರು.
ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಕೈಮಗ್ಗ ಕಾರ್ಮಿಕರು, ಧ್ವನಿ ಮತ್ತುದೃಶ್ಯಕಾರ್ಮಿಕರು,ಚರ್ಮೋದ್ಯಮಕಾರ್ಮಿಕರು,ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು ಸೇರಿದಂತೆ ಮುಂತಾದ ಕಾರ್ಮಿಕರು ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಿ ಎಂದರು.
ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಮಾತನಾಡಿ, ಡಿ.6 ರವರೆಗೆ ವಾಹನ ಸಂಚರಿಸಲಿದೆ. ಈ ಸೌಲಭ್ಯ ಪಡೆದುಕೊಳ್ಳಲು ಮಾಸಿಕ ಆದಾಯ 15,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಬ್ಯಾಂಕ್ ಉಳಿತಾಯ ಖಾತೆ ಹಾಗೂ ಆಧಾರ್ ಸಂಖ್ಯೆ ಹೊಂದಿರಬೇಕು. ಅರ್ಹ ಫಲಾನುಭವಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ಗಳಲ್ಲಿ ನೋಂದಾಯಿಸ ಬಹುದು. ಸಿಎಸ್‌ಸಿಗಳ ವಿವರಗಳನ್ನು ಹತ್ತಿರದ ಎಲ್‌ಐಸಿಶಾಖೆ, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್‌ಐ ಕಾರ್ಪೋ ರೇಷನ್, ಹಾಗೂ ಭವಿಷ್ಯನಿಧಿ ಇಲಾಖೆ ಹಾಗೂ ಅವರ ವೆಬ್ ವಿಳಾಸ < < http://locator.csccloud.in/ ಗಳಲ್ಲಿ ಪಡೆಯಬಹುದು ಎಂದು ಮಾಹಿತಿ ನೀಡಿದರು.
ಫಲಾನುಭವಿಗಳು ತಮ್ಮೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಐಎಫ್‌ಎಸ್‌ಸಿ ಕೋಡ್ ವಿವರಗಳೊಂದಿಗೆ(ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್ ಮೆಂಟ್) ಮತ್ತು ಮೊಬೈಲ್‌ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್‌ಗಳಿಗೆ ತೆರಳುವುದು. ಫಲಾ ನುಭವಿ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ಮಾಸಿಕ ಪಿಂಚ ಣಿಗೆ ಅರ್ಹರು. ಚಂದದಾರರು10 ವರ್ಷ ದೊಳಗಾಗಿ ಯೋಜನೆಯಿಂದ ನಿರ್ಗಮಿಸಿ ದ್ದಲ್ಲಿ, ಅವರು ಪಾವತಿಸಿರುವವಂತಿಕೆ ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸ ಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ 1800-267-6888 ಸಂಪರ್ಕಿಸಿ ಎಂದು ಹೇಳಿದರು.
ಈ ವೇಳೆ ಜಿಲ್ಲಾಧಿಕಾರಿ ಮೂವರು ಕಾರ್ಮಿಕರಿಗೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಕಾರ್ಡ್ ವಿತರಿಸಿದರು. ಕಾರ್ಮಿಕ ನಿರೀಕ್ಷಕರಾದ ಮಂಜುಳಾ, ಕಲಾವಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.