ಲಸಿಕೆ ವಿತರಣೆಗೆ ಸಿದ್ಧತೆ; ಸಂಗ್ರಹ, ದಾಸ್ತಾನು, ನೀಡಿಕೆಗೆ ರಾಜ್ಯ ಸರಕಾರ ಸನ್ನದ್ಧ
Team Udayavani, Nov 25, 2020, 6:35 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಹಾವಳಿ, ಲಾಕ್‌ಡೌನ್, ಸೋಂಕು ನಿಯಂತ್ರಣದ ಮಹಾ ಹೋರಾಟದ ಬಳಿಕ ಇನ್ನೀಗ ಲಸಿಕೆ ವಿತರಣೆಯ ಸಮರ ಆರಂಭವಾಗಲಿದೆ. ಅತ್ತ ಲಸಿಕೆಯ ಬ್ರಹ್ಮಾಸ್ತ್ರ ಸಿದ್ಧಗೊಳ್ಳುತ್ತಿರುವಂತೆಯೇ ದೇಶವಾಸಿಗಳಿಗೆ ಸಮರೋ ಪಾದಿಯಲ್ಲಿ ಲಸಿಕೆ ವಿತರಿಸುವ “ಆಪರೇಷನ್ ಲಸಿಕೆ’ ಪ್ರಕ್ರಿಯೆಗೆ ಕೇಂದ್ರ-ರಾಜ್ಯ ಸರಕಾರಗಳು ಸನ್ನದ್ಧವಾಗಿವೆ.
ದೇಶ- ವಿದೇಶಗಳಲ್ಲಿ ಕೊರೊನಾ ಹತ್ತಿಕ್ಕುವಂಥ ಲಸಿಕೆಗಳು ಅಭಿವೃದ್ಧಿಯ ಹಂತದಲ್ಲಿವೆ. ಅವುಗಳ ಬಳಕೆಗೆ ವಿಜ್ಞಾನಿಗಳು – ಸರಕಾರದ ಒಪ್ಪಿಗೆಯ ಮುದ್ರೆ ಬೀಳುತ್ತಿದ್ದಂತೆ ದೇಶಾದ್ಯಂತ ಲಸಿಕೆ ಹಂಚಿಕೆಯ ಪ್ರಕ್ರಿಯೆ ವೇಗ ಪಡೆದುಕೊಳ್ಳಲಿದೆ. ರಾಜ್ಯ ಸರಕಾರವೂ ವ್ಯಾಕ್ಸಿನ್ ಸಂಗ್ರಹ ಮತ್ತು ಕ್ಷಿಪ್ರ ಹಂಚಿಕೆಗೆ ಸಜ್ಜಾಗಿದೆ.
ರಾಜ್ಯ ಮಟ್ಟದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನ ಸಮಿತಿ ರಚನೆಯಾಗಲಿದ್ದು, ಚುನಾವಣೆ ಮಾದರಿಯಲ್ಲೇ ಬೂತ್ ಮಟ್ಟದಲ್ಲಿ ಲಸಿಕೆ ಹಂಚಿಕೆ ಮಾಡಲು ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ತಮ್ಮ ಸಿಬಂದಿಗಾಗಿ ಲಸಿಕೆ ಪಡೆಯಲು 24 ಸಾವಿರಕ್ಕೂ ಅಧಿಕ ಆರೋಗ್ಯ ಕೇಂದ್ರಗಳು ಆರೋಗ್ಯ ಕಾರ್ಯಕರ್ತರ ಮಾಹಿತಿ ನೀಡುವ ಮೂಲಕ ನೋಂದಣಿ ಮಾಡಿಕೊಂಡಿವೆ.
ಮೊದಲ ಹಂತ: 3 ಲಕ್ಷಕ್ಕೂ ಅಧಿಕ ಮಂದಿಗೆ
ಸದ್ಯ ರಾಜ್ಯದಲ್ಲಿ ಆರೋಗ್ಯ ಇಲಾಖೆ ಖಾಯಂ ಸಿಬಂದಿ, ಗುತ್ತಿಗೆ, ಹೊರ ಗುತ್ತಿಗೆ ನೌಕರರು, ಖಾಸಗಿ ಆಸ್ಪತ್ರೆ ವೈದ್ಯರು, ಸಿಬಂದಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಸೇರಿ ಅಂದಾಜು 3.4 ಲಕ್ಷಕ್ಕೂ ಅಧಿಕ ಮಂದಿ ಆರೋಗ್ಯ ಕಾರ್ಯಕರ್ತರಿದ್ದಾರೆ.
ಕೇಂದ್ರದ ಮಾಹಿತಿ ನೆರವಿಗೆ ಮನವಿ
ಶೀತಲಾಗಾರ ಮತ್ತು ಸಂಗ್ರಹಕ್ಕೆ ಸಂಬಂಧಿಸಿ, ಡೋಸ್‌ಗಳು ಮತ್ತಿತರ ಮಾಹಿತಿ ಅಗತ್ಯವಿದೆ. ಇದನ್ನು ಶೀಘ್ರ ಒದಗಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೋರಲಾಗಿದೆ. ಕೇಂದ್ರ ಸರಕಾರವು ಈಗಾಗಲೇ ಡೀಪ್ ಫ್ರೀಜರ್ ಮತ್ತು ರೆಫ್ರಿಜರೇಟರ್‌ಗಳನ್ನು ಮಂಜೂರು ಮಾಡಿದೆ. ಹೆಚ್ಚುವರಿ ಅಗತ್ಯಗಳ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ.
ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ
ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಶೀತಲ ಕೇಂದ್ರಗಳು ಲಭ್ಯವಿವೆ. ಜತೆಗೆ 10 ವಾಕ್ ಇನ್ ಕೂಲರ್ ಮತ್ತು 4 ವಾಕ್ ಇನ್ ಫ್ರೀಜರ್ ಇವೆ. ಹೆಚ್ಚುವರಿಯಾಗಿ ಕೇಂದ್ರ ಆರೋಗ್ಯ ಸಚಿವಾಲಯವು 3 ವಾಕ್ ಇನ್ ಕೂಲರ್, 2 ವಾಕ್ ಇನ್ ಫ್ರೀಜರ್ ನೀಡಲಿದೆ. ಇದರಿಂದ ಶೀಘ್ರ, ಲಸಿಕೆ ಸಾಗಣೆ ಮತ್ತು ವಿತರಣೆ ಸಾಧ್ಯ. ಜತೆಗೆ ಪಶು ಸಂಗೋಪನೆ ಇಲಾಖೆಯಲ್ಲಿ ಲಭ್ಯವಿರುವ ಶೀತಲ ಸಂಗ್ರಹ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕಾರ್ಪೊರೆಟ್ ಖಾಸಗಿ ಆಸ್ಪತ್ರೆಗಳ ಶೀತಲ ಸಂಗ್ರಹ ಸೌಲಭ್ಯಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.