ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ವಿಧಿವಶ
Team Udayavani, Nov 25, 2020, 7:13 AM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹಮದ್ ಪಟೇಲ್ ಅಲ್ಪ ಕಾಲದ ಅನಾರೋಗ್ಯದ ಕಾರಣ ಇಂದು ಮುಂಜಾನೆ ನಿಧನ ಹೊಂದಿದರು. ಅಹಮದ್ ಪಟೇಲ್ ಅವರಿಗೆ 71 ವರ್ಷ ವಯಸ್ಸಾಗಿತ್ತು.
ಕೋವಿಡ್ ಪಾಸಿಟವ್ ಆದ ಕಾರಣ ತಿಂಗಳ ಹಿಂದೆ ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಂತರ ಪಟೇಲ್ ಅವರ ಆರೋಗ್ಯ ಕ್ಷೀಣಿಸಿದ್ದು, ಬಹುಅಂಗಾಂಗ ವೈಫಲ್ಯದಿಂದ ಇಂದು ಮುಂಜಾನೆ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅಹಮದ್ ಪಟೇಲ್ ಪುತ್ರ ಫೈಸಲ್ ಪಟೇಲ್ ತಿಳಿಸಿದ್ದಾರೆ.
ನಮ್ಮ ತಂದೆ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇನೆ. ಸುಮಾರು ಒಂದು ತಿಂಗಳ ಹಿಂದೆ ಕೋವಿಡ್-19 ಪಾಸಿಟಿವ್ ಬಂದ ನಂತರ, ಬಹುಅಂಗಾಂಗ ವೈಫಲ್ಯದಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಇಂದು ಮುಂಜಾನೆ 3.30ಕ್ಕೆ ಅವರು ನಿಧನ ಹೊಂದಿದರು ಎಂದು ಫೈಜಲ್ ಟ್ವೀಟ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ಬರಲಿದೆ ಪಂಚಾಯತ್‌ಗೊಂದು ಪವಿತ್ರ ವನ
ಅಹಮದ್ ಪಟೇಲ್ ಅವರು ಗುಜರಾತ್ ರಾಜ್ಯದಲ್ಲಿರುವ ಭರೂಚ್ನಲ್ಲಿ ಆಗಸ್ಟ್ 21ರ 1949ರಲ್ಲಿ ಜನಿಸಿದವರು. 1976ರಲ್ಲಿ ಭರೂಚ್ ಸ್ಥಳೀಯ ಸಂಸ್ಥೆ ಚುನಾವಣೆ ಮೂಲಕ ರಾಜಕಾರಣಕ್ಕೆ ಕಾಲಿಟ್ಟಿದ್ದರು.
ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಅಹಮದ್ ಪಟೇಲ್ ಒಟ್ಟು 8 ಬಾರಿ ಸಂಸದರಾಗಿದ್ದರು. ಎಐಸಿಸಿಯ ಖಜಾಂಚಿಯೂ ಆಗಿದ್ದ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರಲ್ಲೇ ಅತ್ಯಂತ ಹೆಚ್ಚು ಪ್ರಭಾವಿ ಎನಿಸಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಹಳ ವರ್ಷ ರಾಜಕೀಯ ಕಾರ್ಯದರ್ಶಿಯೂ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.