ದಂಪತಿಗೆ ಸಮಗ್ರ ಕೃಷಿಯೇ ಜೀವನ

ಪತ್ನಿಯ  ಅರಣ್ಯ ಕೃಷಿಗೆ ಪತಿ ಸಾಥ್‌

Team Udayavani, Nov 25, 2020, 2:17 PM IST

farming-life

ಮಂಡ್ಯ: ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದ ವಿದ್ಯಾವಂತ ದಂಪತಿ ಸಮಗ್ರ ಕೃಷಿಗೆ ಆದ್ಯತೆ ನೀಡುವ ಮೂಲಕ ಉತ್ತಮ ಜೀವನಕಂಡುಕೊಂಡಿದ್ದಾರೆ. ಹೊನಗಹಳ್ಳಿ ಗ್ರಾಮದ ಎಚ್‌.ಬಿ.ಮಹೇಶ್‌ ಹಾಗೂ ಗೀತಾ ದಂಪತಿ ತಮಗಿರುವ 15 ಎಕರೆ ಜಮೀನಿನಲ್ಲಿ ಬಹುಬೆಳೆಗಳನ್ನು ಬೆಳೆದಿದ್ದಾರೆ. ಜೊತೆಗೆ ಅರಣ್ಯ ಕೃಷಿಗೆ ಆದ್ಯತೆ ನೀಡುವ ಮೂಲಕ ಮಾದರಿ ರೈತ ದಂಪತಿಯಾಗಿದ್ದಾರೆ.

ಅರಣ್ಯ ಕೃಷಿಗೆ ಸಾಥ್‌: ಇರುವ ಜಮೀನನ್ನು ಪಾಳು ಬಿಡದೆ ಸಮಗ್ರ ಕೃಷಿ ಮಾಡಲು ಪತ್ನಿ ಗೀತಾ ಅವರ ಯೋಜನೆಗೆ ಪತಿ ಮಹೇಶ್‌ ಪೋ›ತ್ಸಾಹ ನೀಡಿದ್ದಾರೆ. ಇದರಿಂದ ಅರಣ್ಯ ಕೃಷಿ ಮಾಡಿದ್ದಾರೆ. ಹರ್ಕ್ಯಲೆಸ್‌ 40, ಶ್ರೀಗಂಧ 5, ರಕ್ತ ಚಂದನ 10, ಹೊನ್ನೆ10 ಸೇರಿದಂತೆ ಇತರೆ ಮರಗಳನ್ನು ಬೆಳೆದಿದ್ದಾರೆ.

ತೋಟಗಾರಿಕೆ ಬೆಳೆ: ಅರಣ್ಯ ಕೃಷಿ ಜೊತೆಯಲ್ಲಿಯೇ ತೋಟಗಾರಿಕೆ ಬೆಳೆಗಳಿಗೂ ಒತ್ತು ನೀಡಿದ್ದಾರೆ. ತೆಂಗು 600, ನಿಂಬೆಗಿಡ 60, ಸಪೋಟ 140, ಚಕೋತಾ ಹಣ್ಣಿನ ಗಿಡಗಳನ್ನು ಹಾಕಿದ್ದಾರೆ. ಬದನೆಕಾಯಿ, ಮೆಣಸಿನ ಕಾಯಿ ಹಾಗೂ ಹೂವು ಬೆಳೆಗಳನ್ನು ತಲಾ ಅರ್ಧ ಎಕರೆಯಿಂದ 1 ಎಕರೆವರೆಗೂ ಬೆಳೆದಿದ್ದಾರೆ. ಇದರ ಜತೆಗೆ ನೆಲ್ಲಿಗಿಡ, ಬಿಲ್ವಪತ್ರೆ, ಮಧು ಮೇಹ ರೋಗಿಗಳಿಗೆ ಅಗತ್ಯವಾಗಿ ಬೇಕಾಗಿರುವ ಚಕ್ರಮುನಿಗಿಡ ಸೇರಿದಂತೆ ಆಯುರ್ವೇದ ಗಿಡಗಳನ್ನು ಬೆಳೆಸಿದ್ದಾರೆ. ನೀರಿನ ಸಮರ್ಪಕ ಬಳಕೆ: ಬೆಳೆಗಳಿಗೆ ಬೇಕಾದ ನೀರಿಗೆ ಕೃಷಿ ಹೊಂಡ, ಕೊಳವೆ ಬಾವಿಗಳಿವೆ. ಬೆಳೆಗಳಿಗೆ ನೀರಿನ ಕೊರತೆ ಇಲ್ಲದಿದ್ದರೂ, ನೀರನ್ನು ಪೋಲು ಮಾಡಬಾರದು ಎಂಬ ಉದ್ದೇಶದಿಂದ ಹನಿ ನೀರಾವರಿ ಮೂಲಕ ನೀರಿನ ಸಮರ್ಪಕ ಬಳಕೆ ಮಾಡುತ್ತಿದ್ದಾರೆ. ಇದರ ಜೊತೆಗೆ ಚಿಮ್ಮುವ ನೀರಿನ ಚಿಲುಮೆಗಳನ್ನು ಅಳವಡಿಸಿದ್ದಾರೆ.

ಇದನ್ನೂ ಓದಿ:ಅಪಾಯದಲಿದೆ ಮಹದೇವಪುರ ಸಂಪರ್ಕ ಸೇತುವೆ

ಹೈನುಗಾರಿಕೆಗೂ ಆದ್ಯತೆ: ಸಮಗ್ರ ಕೃಷಿಯೊಂದಿಗೆ ಹೈನುಗಾರಿಕೆಯಲ್ಲೂ ತೊಡಗಿಕೊಂಡಿದ್ದಾರೆ. 3 ಸೀಮೆ ಹಸುಗಳನ್ನು ಸಾಕಿದ್ದು, ಪ್ರತಿನಿತ್ಯ 10 ಲೀಟರ್‌ ಹಾಲು ಉತ್ಪಾದಿಸುತ್ತಿದ್ದಾರೆ. ಜೊತೆಗೆ12 ಆಡು, 12 ಕುರಿ, 12 ಕೋಳಿಗಳ ಸಾಕಾಣಿಕೆ ಮಾಡಿದ್ದಾರೆ. ಹಸು, ಆಡು,ಕುರಿಗಳಿಗೆ ಬೇಕಾದ ಮೇವು ಬೆಳೆದುಕೊಂಡಿದ್ದಾರೆ. ನೇರವಾಗಿ ಗ್ರಾಹಕರಿಗೆ ಮಾರಾಟ: ಸ್ವಂತ ಮಿನಿ ಟ್ರ್ಯಾಕ್ಟರ್‌ ಹೊಂದಿರುವ ಇವರು, ತಾವು ಬೆಳೆದ ತರಕಾರಿ, ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಾರೆ. ಕಿರುಗಾವಲಿನಲ್ಲಿ ಪ್ರತಿ ವಾರ ನಡೆಯುವ ಸಂತೇಮಾಳದಲ್ಲಿ ಮಾರಾಟ ಮಾಡುತ್ತಾರೆ. ಜೊತೆಗೆ ಮಂಡ್ಯ, ಮೈಸೂರು ಸೇರಿದಂತೆ ವಿವಿಧೆಡೆಗೂ ಸರಬರಾಜು ಮಾಡುತ್ತಾರೆ.

ಪ್ರತಿ ತಿಂಗಳು ಆದಾಯ

ಸಮಗ್ರ ಕೃಷಿ ಮಾಡುತ್ತಿರುವ ದಂಪತಿ, ಪ್ರತಿ ತಿಂಗಳು ಆದಾಯ ಪಡೆಯುತ್ತಿದ್ದಾರೆ. ತರಕಾರಿ ಮಾರಾಟದಿಂದ ನಿತ್ಯ ಹಣಗಳಿಸುತ್ತಿ ದ್ದಾರೆ. ಹಾಲು ಉತ್ಪಾದನೆಯಿಂದ ವಾರ,15 ದಿನಗಳಿಗೊಮ್ಮೆ ಡೇರಿಯಿಂದ ಹಣ ಪಾವತಿಸಲಾಗುತ್ತದೆ. ಇದರ ಜೊತೆಗೆ ಎಳ ನೀರು ಮಾರಾಟ, ಪ್ರತಿ ವರ್ಷ ಎರಡು ಬಾರಿ ಸಪೋಟ ಫ‌ಲ, ನಿಂಬೆ ಹಣ್ಣು, ತೆಂಗಿನ ಕಾಯಿ ಮಾರಾಟದಿಂದಲೂ ಆದಾಯ ಗಳಿಸುತ್ತಾ ಮೂರು ಮಕ್ಕಳೊಂದಿಗೆ ನೆಮ್ಮದಿ ಜೀವನ ಕಂಡುಕೊಂಡಿದ್ದಾರೆ.

ಯುವ ರೈತ ಮಹಿಳೆ ಪ್ರಶಸ್ತಿ

ರೈತ ಮಹಿಳೆ ಗೀತಾ ಅವರು ಸಮಗ್ರ ಹಾಗೂ ಅರಣ್ಯಕೃಷಿಗೆ ಆದ್ಯತೆ ನೀಡಿ ಪ್ರಗತಿಪರ ರೈತ ಮಹಿಳೆಯಾಗಿ ಹೊರ ಹೊಮ್ಮಿದ್ದಾರೆ. ಇದನ್ನು ಗುರುತಿಸಿದ ಬೆಂಗಳೂರುಕೃಷ ವಿಶ್ವವಿದ್ಯಾಲಯ ಕೃಷಿ ಮೇಳದಲ್ಲಿ ತಾಲೂಕು ಪ್ರಗತಿಪರ ಯುವ ರೈತ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಿದೆ.

-ಎಚ್‌.ಶಿವರಾಜು

ನಾನು ಐಟಿಐ, ನನ್ನ ಪತ್ನಿ ಎಸ್ಸೆಸ್ಸೆಲ್ಸಿ ಓದಿದ್ದಾರೆ. ಇಬ್ಬರೂ ಕೃಷಿಗೆ ಆದ್ಯತೆ ನೀಡಿದ್ದೇವೆ.ಕಬ್ಬು, ಭತ್ತದ ವಾಣಿಜ್ಯ ಬೆಳೆಗಳಿಗೆ ನಾವು ಮುಂದಾಗದೆ ಸಮಗ್ರ ಕೃಷಿಗೆ ಆದ್ಯತೆ ನೀಡಿದ್ದೇವೆ. ಒಂದೊಂದು ಬಾರಿ ತರಕಾರಿ ಬೆಲೆಗಳಲ್ಲಿ ಏರಿಳಿಉಂಟಾಗುತ್ತದೆ. ಆದರೆ, ಮತ್ತೂಂದು ಬೆಳೆ ಅದರ ನಷ್ಟ ಸರಿದೂಗಿಸುತ್ತೆ. ನನ್ನ ಪತ್ನಿಯ ಅರಣ್ಯಕೃಷಿಯಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಲಾಭ ಬರುವ ನಿರೀಕ್ಷೆ ಇದೆ.

-ಎಚ್‌.ಬಿ.ಮಹೇಶ್‌, ಗೀತಾ ಅವರ ಪತಿ, ಹೊನಗನಹಳ್ಳಿ

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.