ಮಮತೆಯ ತೊಟ್ಟಿಲು ತೂಗಿದ ನ್ಯಾಯಾಧೀಶೆ
ಪರಿತ್ಯಕ್ತ ಮಗುವಿನ ನಾಮಕರಣ
Team Udayavani, Nov 25, 2020, 7:06 PM IST
ಉಡುಪಿ: ಹೆತ್ತಮ್ಮನಿಗೆ ಬೇಡವಾದ ಮಗುವನ್ನು ಹಾದಿ ಬೀದಿಯಲ್ಲಿ ಬಿಟ್ಟು ಹೋಗುವುದಕ್ಕಿಂತ ಮಮತೆಯ ತೊಟ್ಟಿಲಲ್ಲಿ ಹಾಕುವುದು ಉತ್ತಮ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ನ್ಯಾಯಾಧೀಶೆ ಕಾವೇರಿ ತಿಳಿಸಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಪೊಲೀಸ್ ಠಾಣೆ, ನಾಗರಿಕ ಸಮಿತಿ ಟ್ರಸ್ಟ್ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಬುಧವಾರ ಸಂತೆಕಟ್ಟೆ ಶ್ರೀ ಕೃಷ್ಣಾನುಗೃಹದಲ್ಲಿ ಆಯೋಜಿಸಿದ್ದ “ಮಡಿಲ ಬೆಳಗು’- ದತ್ತು ಹಾಗೂ ನಗರದಲ್ಲಿ ಪತ್ತೆಯಾದ ಪರಿತ್ಯಕ್ತ ನವಜಾತ ಶಿಶುವಿನ ನಾಮಕರಣದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಯಿಗೆ ಬೇಡವಾದ ಶಿಶುವನ್ನು ಮಮತೆಯ ತೊಟ್ಟಿಲಲ್ಲಿ ಹಾಕಿದರೆ, ಅವರನ್ನು ಯಾರೊಬ್ಬರೂ ಪ್ರಶ್ನಿಸುವು ದಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬಂದಿಯೇ ಆ ಮಗುವನ್ನು ಆರೈಕೆ ಮಾಡುವ ಜತೆಗೆ ನಾಮಕರಣ ಕೂಡ ಮಾಡುತ್ತಾರೆ. ಮಕ್ಕಳಿಲ್ಲದ ದಂಪತಿಗೆ ಮಗುವನ್ನು ದತ್ತು ನೀಡಿ, ಆಸ್ತಿ ಹಕ್ಕಿನ ಜತೆಗೆ ಕುಟುಂಬದ ವಾತಾವರಣ ಕಲ್ಪಿಸುವ ಕೆಲಸ ಮಾಡು ತ್ತಾರೆ. ಪ್ರಾಣಿ- ಪಕ್ಷಿಗಳು ತಮ್ಮ ಮರಿ ಗಳು ತಾವೇ ಆಹಾರ ಹುಡುಕುವ ತನಕ ನೋಡಿಕೊಳ್ಳುತ್ತದೆ. ಮನುಷ್ಯರು ಈ ಗುಣವನ್ನು ಮರೆತಿದ್ದಾರೆ ಎಂದು ವಿಷಾದ ವ್ಯಕ್ತ ಪಡಿಸಿದರು.
ಮಗುವಿನ ನಾಮಕರಣ
ನಗರದ ಕಸದ ಡಬ್ಬಿಯಲ್ಲಿ ಆ.10 ರಂದು ಪತ್ತೆಯಾದ ಪರಿತ್ಯಕ್ತ ನವಜಾತ ಹೆಣ್ಣು ಮಗುವಿಗೆ ಕೃಷ್ಣಾನುಗ್ರಹದಲ್ಲಿ “ಪ್ರಜ್ವಲಾ’ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯ ಮಕ್ಕಳಂತೆ ನಾಮಕರಣದ ಧಾರ್ಮಿಕ ವಿಧಿಗಳನ್ನು ನಡೆಸಿಕೊಡಲಾಯಿತು.
ಪರಿತ್ಯಕ್ತ ಶಿಶುಗಳಿಗೆ ಬದುಕು ಕಲ್ಪಿಸಿಕೊಡುವ ಉದಾತ್ತ ಆಶಯದಿಂದ ರಾಜ್ಯ ಸರಕಾರ “ಮಮತೆಯ ತೊಟ್ಟಿಲು’ ಪ್ರಾರಂಭಿಸಿದೆ. ಜಿಲ್ಲೆಯಲ್ಲಿ ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ಕಾನೂನು ಪರಿವೀಕ್ಷಕ ಪ್ರಭಾಕರ್ ತಿಳಿದರು.
ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ, ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಮಹಿಳಾ ಪೊಲೀಸ್ ಠಾಣಾಧಿಕಾರಿ ಫಿಲೋಮಿನಾ, ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನ ನಿತ್ಯಾನಂದ ಒಳಕಾಡು ಮತ್ತಿತರರು ಉಪಸ್ಥಿತರಿದ್ದರು.
ದತ್ತು ಕಾರ್ಯಕ್ರಮದ ಮಾಹಿತಿ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಉದಯ ಕುಮಾರ್ ಸ್ವಾಗತಿಸಿದರು. ಸಂಯೋಜಕಿ ಮರೀನಾ ವಂದಿಸಿದರು.
ಕರ್ತವ್ಯಪ್ರಜ್ಞೆ ಮೂಡಿಸಿದ ಎಸ್‌ಐ
ಕಾರ್ಯಕ್ರಮದ ಉದ್ಘಾಟನೆ ಸಂದರ್ಭ ಮಹಿಳಾ ಪೊಲೀಸ್ ಠಾಣಾ ಉಪನಿರೀಕ್ಷಕಿ ವೈಲೆಟ್ ಫಿಲೋಮಿನಾ ಅವರು ಮಗುವನ್ನು ಎತ್ತಿಕೊಂಡು ಮುದ್ದಾಡಿದ ದೃಶ್ಯ ನೆರೆದಿರುವವರಲ್ಲಿ ಕರ್ತವ್ಯಪ್ರಜ್ಞೆಯನ್ನು ಮೂಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.