ನಿವಾರ್ ಅಬ್ಬರ-ಜನಜೀವನ ತತ್ತರ: ತ. ನಾಡು, ಪುದುಚೇರಿಯಲ್ಲಿ ಭಾರೀ ವರ್ಷಧಾರೆ !

Team Udayavani, Nov 26, 2020, 8:05 AM IST

nivar

ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿವಾರ್  ಚಂಡಮಾರುತ ಅಬ್ಬರಿಸಿದ್ದು ಭಾರೀ ವರ್ಷಧಾರೆಯಾಗುತ್ತಿದೆ. ಮಧ್ಯರಾತ್ರಿ 1  ರಿಂದ 2:30 ರ ನಡುವೆ ಅಪ್ಪಳಿಸಿದ ಸೈಕ್ಲೋನ್  ಬಳಿಕ ದುರ್ಬಲವಾಗಿದೆ.

ಚಂಡಮಾರುತ ಅಪ್ಪಳಿಸಿದ ಸಮಯದಲ್ಲಿ ಗಂಟೆಗೆ 100-130 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಚೆನ್ನೈ ನಗರದಿಂದ 115 ಕಿ.ಮೀ ದಕ್ಷಿಣಕ್ಕೆ ಹಾಗೂ ಪುದುಚೇರಿಯಿಂದ 30 ಕಿಮೀ ಉತ್ತರಕ್ಕೆ ಇರುವ ಮರಕ್ಕಣಮ್ ಸಮೀಪ ಚಂಡಮಾರುತ ಅಪ್ಪಳಿಸಿದೆ. ಚೆನ್ನೈ ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು ಹಲವೆಡೆ ಭೂಕುಸಿತಗೊಂಡಿದೆ. ಚಂಡಮಾರುತದ ಪರಿಣಾಮವಾಗಿ ಇವತ್ತು ಮಧ್ಯಾಹ್ನದವರೆಗೂ ತಮಿಳುನಾಡಿನ ಕೆಲವೆಡೆ ದೊಡ್ಡ ಪ್ರಮಾಣದಲ್ಲಿ ಮಳೆ ಗಾಳಿ ಇರಲಿದೆ. ನಾಳೆ ಶುಕ್ರವಾರದವರೆಗೂ ಮಳೆ ಮುಂದುವರಿಯಲಿದೆ  ಎನ್ನಲಾಗಿದೆ.

ಧಾರಾಕಾರ ಮಳೆಯಿಂದ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಚೆನ್ನೈನ ಚೆಂಬರಂಬಕ್ಕಂ ಸರೋವರದ ಗೇಟ್‌ಗಳನ್ನು 2015ರ ನಂತರ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ತೀವ್ರ ಚಂಡಮಾರುತ  ನಿವಾರ್, ಬಂಗಾಳಕೊಲ್ಲಿಯಲ್ಲಿಯಿಂದ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ.

ಈಗಾಗಲೇ ತಗ್ಗು ಪ್ರದೇಶಗಳು ಅಸುರಕ್ಷಿತ ಕಟ್ಟಡಗಳಿಂದ ಜನರನ್ನು ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ. 13 ಲಕ್ಷ ಜನರಿಗೆ ಸುರಕ್ಷತೆ ಕಲ್ಪಿಸಬಲ್ಲ 4,733 ಪರಿಹಾರ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೆ 28 ಸಾವಿರ ಮಕ್ಕಳು ಸೇರಿ 1.38 ಲಕ್ಷ ಜನರನ್ನ ಈ ಕೇಂದ್ರಗಳಿಗೆ ಕಳುಹಿಸಲಾಗಿದೆ. 13 ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯಿಂದ ಎಂಟು ತಂಡಗಳು ಇವತ್ತು ಚೆನ್ನೈಗೆ ಬಂದಿಳಿಯುತ್ತಿದ್ದು, ಒಂದೊಂದು ತಂಡದಲ್ಲಿ 10 ಮಂದಿ ಇದ್ದಾರೆ. ಇದರ ಜೊತೆಗೆ ಇನ್ನೂ ಆರು ತಂಡಗಳು ತಿರುಚ್ಚಿಗೆ ಹೋಗುತ್ತಿವೆ. ಹಾಗೆಯೇ, ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆಗಳೂ ಕೂಡ ತಮ್ಮ ಹಲವು ತಂಡಗಳನ್ನ ರಕ್ಷಣಾ ಕಾರ್ಯಕ್ಕಾಗಿ ತಮಿಳುನಾಡಿನಲ್ಲಿ ನಿಯೋಜಿಸಿವೆ.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.