ತಜ್ಞರ ಸಮಿತಿ ರಚಿಸಿ ವರದಿ ಸಿದ್ಧಪಡಿಸಿ


Team Udayavani, Nov 26, 2020, 6:20 PM IST

ತಜ್ಞರ ಸಮಿತಿ ರಚಿಸಿ ವರದಿ ಸಿದ್ಧಪಡಿಸಿ

ದಾವಣಗೆರೆ: ಜಿಲ್ಲೆಯ ಹರಿಹರ, ಹೊನ್ನಾಳಿಸೇರಿದಂತೆ ವಿವಿಧ ತಾಲೂಕುಗಳಲ್ಲಿಫ್ಲೊರೈಡ್‌ಯುಕ್ತ ನೀರಿನಿಂದ ಜನರು ಬಳಲುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ತಜ್ಞರನ್ನೊಳಗೊಂಡ ಸಮಿತಿ ರಚಿಸಿ, ಸಮಗ್ರ ಅಧ್ಯಯನ ವರದಿ ಸಿದ್ಧಪಡಿಸಲು ಎಂದು ಜಿಪಂ ಎರಡನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿಬಸವರಾಜ್‌ ಅಧ್ಯಕ್ಷತೆಯಲ್ಲಿ ಬುಧವಾರ ಜಿಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, “ಉದಯವಾಣಿ’ ಪತ್ರಿಕೆಯಲ್ಲಿಪ್ರಕಟವಾದ “ಫ್ಲೊರೈಡ್‌ ನೀರಿಗೆ ನಲುಗಿದ ಜನ’ ವಿಶೇಷ ವರದಿಯ ಪ್ರತಿ ಪ್ರದರ್ಶಿಸಿ, ಈ ವಿಚಾರವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಈ ವಿಷಯ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌, ಹರಿಹರ ತಾಲೂಕಿನಲ್ಲಿ ನದಿನೀರು, ಹೊನ್ನಾಳಿಯಲ್ಲಿಯೂ ಉತ್ತಮ ನೀರಿನ ಮೂಲಗಳಿವೆ. ಹೀಗಿದ್ದಾಗ್ಯೂ ನೀರು ಫ್ಲೋರೈಡ್‌ಯುಕ್ತ ಹೇಗಾಯಿತು? ಇದರ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ಪದ್ಮಾ ಬಸವಂತಪ್ಪಮಾತನಾಡಿ, ಹರಿಹರ ಭಾಗದಲ್ಲಿ ರೈತರು ಕೃಷಿಗೆ ಹೆಚ್ಚಾಗಿ ರಸಗೊಬ್ಬರ ಹಾಗೂ ಕೀಟನಾಶಕ ಬಳಸುತ್ತಿರುವುದರಿಂದ ನೀರಿನಲ್ಲಿ ಫ್ಲೊರೈಡ್‌ ಅಂಶ ಹೆಚ್ಚಾಗಿರಬಹುದು ಎಂದು ಆರೋಗ್ಯ ಇಲಾಖೆ ಹೇಳಿದೆ. ಹೊನ್ನಾಳಿ ಭಾಗದಲ್ಲಿ ನೀರು ಯಾವಕಾರಣದಿಂದ ಫ್ಲೊರೈಡ್‌ಯುಕ್ತವಾಗಿದೆ ಎಂಬುದನ್ನು ಅರಿಯಬೇಕಾಗಿದೆ. ಇದಕ್ಕಾಗಿ ಕೂಡಲೇ ತಜ್ಞರ ತಂಡ ರಚಿಸಿ, ಅಧ್ಯಯನ ಮಾಡಿ, ವರದಿ ತಯಾರಿಸಲಾಗುವುದು. ಸದ್ಯ ಹೆಚ್ಚು ಫ್ಲೊರೈಡ್‌ ಕಂಡು ಬಂದ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಬಳಸದೆ ಉಪಕರಣ ಹಾಳು: ಕೊವಿಡ್‌ -19 ಸೋಂಕಿನ ಕಾರಣದಿಂದ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಬಿಟ್ಟು ಉಳಿದ ವೈದ್ಯಕೀಯ ಸೇವೆ ಸ್ಥಗಿತಗೊಳಿಸಲಾಗಿತ್ತು. ಎಂಟು ತಿಂಗಳಿಂದ ಕೋವಿಡ್‌ಗೆ ಚಿಕಿತ್ಸೆಗೆ ಹೊರತಾದ ವೈದ್ಯಕೀಯ ಉಪಕರಣಗಳನ್ನು ಬಳಸದೇ ಇರುವುದರಿಂದ ಲಕ್ಷಾಂತರ ರೂ.ಗಳ ಉಪಕರಣಗಳು ಹಾಳಾಗಿದ್ದು ಅವುಗಳದುರಸ್ತಿಗೆ 42ಲಕ್ಷ ರೂ. ಕ್ರಿಯಾಯೋಜನೆ ತಯಾರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯ ಗಮನಸೆಳೆದರು. ಇದಕ್ಕೆ ಸಚಿವರು ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಅಕ್ರಮ ಪಂಪ್‌ಸೆಟ್‌ ತೆಗೆಸಿ: ನದಿ ಹಾಗೂ ನದಿ ಕಾಲುವೆಗಳಿಗೆ ಹಾಕಿರುವ ಅಕ್ರಮ ಪಂಪ್‌ಸೆಟ್‌ ತೆರವುಗೊಳಿಸುವಂತೆ ಉತ್ಛ ನ್ಯಾಯಾಲಯ ಆದೇಶ ಹೊರಡಿಸಿರುವುದರಿಂದ ಕಟ್ಟುನಿಟ್ಟಾಗಿ ಎಲ್ಲ ಅಕ್ರಮ ಪಂಪ್‌ ಸೆಟ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ನ್ಯಾಯಾಲಯ ಆದೇಶ ಉಲ್ಲಂಘನೆಯಾಗುತ್ತದೆ ಎಂದು ಸಚಿವ ಬಸವರಾಜ್‌ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ನೀರಾವರಿ, ಲೋಕೋಪಯೋಗಿ, ಬೆಸ್ಕಾಂ ಹಾಗೂ ಪೊಲೀಸ್‌ ಅಧಿಕಾರಿಗಳ ತಂಡ ಮಾಡಿ ತೆರವುಗೊಳಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದರು.

ಶಾಲಾ ಆರಂಭದೊಳಗೆ ಕೆಲಸ ಮುಗಿಸಿ: ಶಾಲೆಗಳು ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಆರಂಭವಾಗುವ ಸಾಧ್ಯತೆ ಇದ್ದು, ಶಾಲೆ ಪ್ರಾರಂಭವಾಗುವುದರೊಳಗೆ ಕಟ್ಟಡ ದುರಸ್ತಿ, ಶೌಚಾಲಯ ದುರಸ್ತಿ ಹಾಗೂ ನಿರ್ಮಾಣ ಸೇರಿದಂತೆ ಶಾಲೆಗಳ ಕೆಲಸ ಪೂರ್ಣಗೊಳಿಸಿಕೊಳ್ಳಬೇಕು. ಇನ್ನು ಶಾಲಾ ಶೌಚಾಲಯಕ್ಕಾಗಿ ಶಾಸಕರ ಅನುದಾನ ಪಡೆದು ದುರಸ್ತಿ ಇಲ್ಲವೇ ಹೊಸದಾಗಿ ಕಟ್ಟಿಸಿಕೊಳ್ಳುವ ವ್ಯವಸ್ಥೆ ಮಾಡಬೇಕು.ಜಿಪಂನಿಂದ ಜಲಜೀವನ್‌ ಮಿಷನ್‌ಯೋಜನೆಯಡಿ ಶೌಚಾಲಯಗಳಿಗೆನಲ್ಲಿ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.ಬೇರೆ ಅನುದಾನದಲ್ಲಿ ಟ್ಯಾಂಕ್‌ ವ್ಯವಸ್ಥೆಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಅನುದಾನ ಲ್ಯಾಪ್ಸ್‌ ಆದರೆ ಶಿಸ್ತುಕ್ರಮ: ಅಧಿಕಾರಿಗಳು ಸರಕಾರಕ್ಕೆ ಕೆಟ್ಟ ಹೆಸರು ತರುವಕೆಲಸ ಮಾಡಬಾರದು. ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮುಂದೆ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳು ಬರಲಿದ್ದು ಎಲ್ಲ ಜನನಾಯಕರು ಗ್ರಾಮಗಳಿಗೆಬರುತ್ತಾರೆ. ಇಂಥ ಸಂದರ್ಭದಲ್ಲಿ ಜನರು ಮೂಲಸೌಕರ್ಯಕ್ಕೆ ಸಂಬಂಧಿಸಿ ದೂರು ನೀಡುವಂತಾಗಬಾರದು. ಉನ್ನತ ಅಧಿಕಾರಿಗಳು ಆಗಾಗಸ್ಥಳ ಪರಿಶೀಲನೆಮಾಡಿ ಪ್ರಗತಿ ಪರಿಶೀಲಿಸಬೇಕು. ಯಾವ ಇಲಾಖೆಯ ಒಂದು ಪೈಸೆಯೂ ಲ್ಯಾಪ್ಸ್‌ಆಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದೇ ಅನುದಾನ ಲ್ಯಾಪ್ಸ್‌ ಆದರೆ, ಸಂಬಂಧಿಸಿದ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಸವರಾಜ್‌ ಕಟ್ಟುನಿಟ್ಟಿನ ಆದೇಶ ನೀಡಿದರು.

ಶಾಸಕರಾದ ಎಸ್‌.ಎ. ರವೀದ್ರನಾಥ್‌, ಮಾಡಾಳ್‌ ವಿರೂಪಾಕ್ಷಪ್ಪ, ಪ್ರೊ.ನಿಂಗಣ್ಣ, ಎನ್‌. ರವಿಕುಮಾರ್‌ ಚರ್ಚೆಯಲ್ಲಿ ಪಾಲ್ಗೊಂಡರು. ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌, ಉಪಾಧ್ಯಕ್ಷೆ ಸಾಕಮ್ಮ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಒ ಪದ್ಮಾ ಬಸವಂತಪ್ಪ ಸಭೆಯಲ್ಲಿದ್ದರು.

ಅಧಿಕಾರಿಗಳಿಗೆ ತರಾಟೆ… :  ಕಳೆದ ಸಾಲಿನಲ್ಲಿ ಬಿಡುಗಡೆಯಾದ ನೆರೆ ಪರಿಹಾರ ಅನುದಾನದಲ್ಲಿ ಯಾವೆಲ್ಲ ಕೆಲಸ ಮಾಡಿದ್ದೀರಿ ಹಾಗೂ ಎಷ್ಟು ಅನುದಾನ ಖರ್ಚಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಲುತಡವರಿಸಿದ ಅಧಿಕಾರಿಗಳನ್ನು ಸಚಿವ ಬಿ. ಬಸವರಾಜ ತೀವ್ರ ತರಾಟೆ ತೆಗೆದುಕೊಂಡರು. ಬಳಿಕ ಜಿಲ್ಲಾಧಿಕಾರಿಗಳು ನೆರೆ ಪರಿಹಾರ ಅನುದಾನಕ್ಕೆ ಸಂಬಂಧಿಸಿ ಎರಡೂ¾ರು ದಿನಗಳಲ್ಲಿ ಎಲ್ಲ ವಿಭಾಗದ ಅಧಿಕಾರಿಗಳ ಸಭೆ ನಡೆಸಿ, ವರದಿ ಸಲ್ಲಿಸುವುದಾಗಿ ಭರವಸೆ ನೀಡಿ, ಚರ್ಚೆಗೆ ತೆರೆ ಎಳೆದರು.

ಸಚಿವರನ್ನು ಕೆರಳಿಸಿದ ಧೂಳು :  ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್‌ ಅವರು ಜಿಪಂ ಪ್ರಗತಿ ಪರಿಶೀಲನಾ ಸಭೆಗಾಗಿ ಸಭಾಂಗಣಕ್ಕೆ ಆಗಮಿಸಿ, ಆಸೀನರಾಗುತ್ತಿದ್ದಂತೆ  ಸಭಾಭವನದ ಕಿಟಕಿಗಳಿಗೆ ಮೆತ್ತಿಕೊಂಡಿದ್ದ ಧೂಳು ಕಣ್ಣಿಗೆ ರಾಚಿತು.ಆಗ ಪಕ್ಕದಲ್ಲಿಯೇ ಇದ್ದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಧೂಳು ತೋರಿಸಿ, ಕನಿಷ್ಠ ಪಕ್ಷ ಸಭೆ ಇದ್ದಾಗಲಾದರೂ ಸಭಾಂಗಣದ ಧೂಳು ಸ್ವತ್ಛಗೊಳಿಸಬಾರದೇ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಕೂಡಲೇ ಅಧಿಕಾರಿಗಳನ್ನು ಕರೆಸಿ ಧೂಳು ತೋರಿಸಿ, ಸ್ವಚ್ಛಗೊಳಿಸಲು ಆದೇಶಿಸಿದರು.

ಅಧಿಕಾರಿ ಅಮಾನತಿಗೆ ಆದೇಶ… : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರತಿಯೊಂದು ಜಿಪಂ ಸಭೆಗೂ ಗೈರಾಗುವ ವಿಚಾರ ಸಭೆಯಲ್ಲಿ ಪ್ರಸ್ತಾಪವಾಯಿತು. ಸಭೆಯಲ್ಲಿ ಉಪಸ್ಥಿತ ಕಿರಿಯ ಅಧಿಕಾರಿ ಮಾತನಾಡಿ, ಜಿಲ್ಲಾ ವ್ಯವಸ್ಥಾಪಕರು ಬಳ್ಳಾರಿ ಜಿಲ್ಲೆಯ ಕಾರ್ಯಭಾರದಲ್ಲಿದ್ದಾರೆ. ಹಾಗಾಗಿ ಬಂದಿಲ್ಲ ಎಂದು ಸಭೆ ತಿಳಿಸಿದರು. ಆಗ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಬಂದಾಗಲೂ ಅಧಿಕಾರಿ ಸಭೆಗೆ ಬಾರದೇ ಇರುವುದು ಸರಿಯಲ್ಲ. ಈಬಗ್ಗೆ ಜಿಲ್ಲಾಧಿಕಾರಿ, ಜಿಪಂ ಸಿಇಒ ಯಾರ ಗಮನಕ್ಕೂ ತಾರದೆ ಗೈರಾಗುವುದು ಅಶಿಸ್ತು. ಅವರನ್ನು ಕೂಡಲೇ ಅಮಾನತುಗೊಳಿಸಲಾಗುವುದು. ಜಿಲ್ಲಾಧಿಕಾರಿಯವರು ಈ ಕುರಿತು ಶಿಫಾರಸು ಕಳಿಸಬೇಕು ಎಂದು ಖಡಕ್‌ ಆದೇಶ ನೀಡಿದರು.

ಟಾಪ್ ನ್ಯೂಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.