ಸ್ವಾತಂತ್ರ್ಯ ಹರಣವೇ ಜೀತಪದ್ಧತಿ

Team Udayavani, Nov 26, 2020, 6:57 PM IST

ಸ್ವಾತಂತ್ರ್ಯ ಹರಣವೇ ಜೀತಪದ್ಧತಿ

ಚಿತ್ರದುರ್ಗ: ಜೀತ ಕಾರ್ಮಿಕ ಪದ್ಧತಿಯಲ್ಲಿ ವ್ಯಕ್ತಿಯ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ. ವ್ಯಕ್ತಿಯು ಹಕ್ಕು ಹಾಗೂ ಸ್ವಾತಂತ್ರ್ಯ ಕಳೆದುಕೊಳ್ಳುವುದೇ ಜೀತಪದ್ಧತಿ ಎಂದು ರಾಜ್ಯ ಜೀತ ಕಾರ್ಮಿಕ ಪದ್ಧತಿ ಉನ್ನತ ಮಟ್ಟದ ಸಮಿತಿ ಸದಸ್ಯ ವಿಲಿಯಂ ಕ್ರಿಸ್ಟೋಫರ್‌ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಅಧಿನಿಯಮ-1976ರಅನುಷ್ಠಾನಗೊಳಿಸುವ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಜೀತ ಕಾರ್ಮಿಕ ಪದ್ಧತಿಗೆ ಸಿಲುಕಿಕೊಂಡ ಪ್ರತಿಯೊಬ್ಬರು ಆರ್ಥಿಕ ಹಾಗೂ ದೈಹಿಕ ಶೋಷಣೆಗೆ ಒಳಗಾದ ದುರ್ಬಲ ವರ್ಗದವರಾಗಿದ್ದಾರೆ. ಇವರಲ್ಲಿ ಶೇ.95 ರಷ್ಟು ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರೇ ಜೀತಕ್ಕೆ ಒಳಗಾಗಿದ್ದಾರೆ ಎಂಬುದು ಅಧ್ಯಯನಗಳ ವರದಿಯಿಂದ ಗೊತ್ತಾಗಿದೆ ಎಂದರು. ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಅಧಿನಿಯಮವು ದುರ್ಬಲ ವರ್ಗಗಳ ಜನತೆಯ ಆರ್ಥಿಕ ಮತ್ತು ದೈಹಿಕ ಶೋಷಣೆ ತಡೆಗಟ್ಟುವ ಉದ್ದೇಶದಿಂದ ಜೀತ ಕಾರ್ಮಿಕ ಪದ್ಧತಿಯ ನಿರ್ಮೂಲಕ್ಕೆ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗೆ ಉಪಬಂಧವನ್ನು ಕಲ್ಪಿಸುವುದಕ್ಕಾಗಿ ರಚಿಸಿದ ಅಧಿನಿಯಮವಾಗಿದೆ.

ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ 400ಕ್ಕೂ ಹೆಚ್ಚು ಸೌಲಭ್ಯ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಜವಾಬ್ದಾರಿಯಿಂದ ದುರ್ಬಲ ವರ್ಗದವರಿಗೆ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದರೆ ಜೀತಪದ್ಧತಿ ಪತ್ತೆ ಹಚ್ಚುವುದರ ಜತೆಗೆ ಅಂತಹವರನ್ನು ಜೀತಮುಕ್ತಗೊಳಿಸಿ ಪುನರ್ವಸತಿ ಕಲ್ಪಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಫೆ.9ರಂದು ಸಿಎಂ ನಮ್ಮ ರಾಜ್ಯವನ್ನು ಬಂಧಮುಕ್ತ, ಜೀತಮುಕ್ತ ರಾಜ್ಯವನ್ನಾಗಿ ಘೋಷಿಸಿದ್ದಾರೆ. ಇದಕ್ಕಾಗಿ ಎಲ್ಲಾ ಹಂತದ ಸರ್ಕಾರಿ ಅಧಿಕಾರಿಗಳು, ನೌಕರರು ತಳಮಟ್ಟದಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಓಂಕಾರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಸೇರಿದಂತೆ ತಹಶೀಲ್ದಾರ್‌ಗಳು, ಉಪತಹಶೀಲ್ದಾರ್‌ಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.