ಕೇಂದ್ರದ ವಿರುದ್ಧ ಎಐಟಿಯುಸಿ ಪ್ರತಿಭಟನೆ
ಕೋವಿಡ್ ಸಂಕಷ್ಟದ ನೆಪದಲ್ಲಿ ರೈತ-ಕಾರ್ಮಿಕ ಕಾನೂನುಗಳ ತಿದ್ದುಪಡಿ ಜನವಿರೋಧಿ ನೀತಿ: ಆರೋಪ
Team Udayavani, Nov 27, 2020, 4:31 PM IST
ಬೆಳಗಾವಿ: ಕೇಂದ್ರದ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿ ವಿರುದ್ಧ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗುರುವಾರ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರು ಪ್ರತಿಭಟನೆ ನಡೆಸಿ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ 10,000 ಹಾಗೂ ಸಹಾಯಕರಿಗೆ 5 ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಕೇಂದ್ರ ಸರ್ಕಾರ 7ನೇ ವೇತನ ಆಯೋಗದಲ್ಲಿರುವ 21 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋ ಧಿ ನೀತಿ, ಕೆಲಸದ ಅವಧಿ ಹೆಚ್ಚಳ ಹಾಗೂ ಕಾರ್ಮಿಕ ಕಾನೂನುಗಳ ಜಾರಿಯಿಂದ ಮಾಲೀಕರಿಗೆ ವಿನಾಯಿತಿ ನೀಡಲು ತರಲು ಉದ್ದೇಶಿಸಿರುವ ಸುಗ್ರೀವಾಜ್ಞೆಗೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.
ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ಇಎಸ್‌ಐ, ಭವಿಷ್ಯ ನಿಧಿ , ಗ್ರ್ಯಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ ಹಾಗೂ ಯುಕೆಜಿ ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಬೇಕು. ಬೆಳಗಾವಿ ಗ್ರಾಮೀಣ ಪ್ರದೇಶದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಜುಲೈ 2019ರ ಗೌರವ ಧನ ವಿತರಿಸಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ:ಏಕದಿನದ ಯಶಸ್ವಿ ಚೇಸಿಂಗ್ ದಾಖಲೆ: ಅಂತಿಮ ಓವರ್‌ನಲ್ಲಿ ಅತ್ಯಧಿಕ ರನ್ ಚೇಸ್
ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಶಿಕ್ಷಣ ಮತ್ತು ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸಬಾರದು. ಗ್ರಾಮ ಪಂಚಾಯಿತಿ ನೌಕರರ ವಾರ್ಷಿಕ 382 ಕೋಟಿ ರೂ. ಬಾಕಿ ಬಿಡುಗಡೆ ಮಾಡಬೇಕು. 21 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಎಲ್ಲರಿಗೂ ಪಿಂಚಣಿ ನೀಡಬೇಕು. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಕಡಿತಗೊಳಿಸಬಾರದು. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಹಣ ವಾಪಸ್ ಕೊಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಮುಖಂಡ ಜಿ.ವಿ. ಕುಲಕರ್ಣಿ ಮಾತನಾಡಿ, ಸರ್ಕಾರ ಕೋವಿಡ್ ಸಂಕಷ್ಟದ ನೆಪ ಮಾಡಿಕೊಂಡು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬರುತ್ತಿಲ್ಲ. ಮೋದಿ ಸರ್ಕಾರ ಕಾರ್ಮಿಕ, ರೈತ ಮತ್ತು ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೂಡಲೇ ಇಂತಹ ನೀತಿಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಮುಖಂಡ ನಾಗೇಶ ಸಾತೇರಿ ಮಾತನಾಡಿದರು. ಮುಖಂಡರಾದ ವೈ.ಬಿ. ಶೀಗಿಹಳ್ಳಿ, ಮೀನಾಕ್ಷಿ ಕೊಟಗಿ, ಸುಜಾತಾ ಬೆಳಗಾವಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.